ದಿನೇಶ್ ಗುಂಡೂರಾವ್ 
ರಾಜಕೀಯ

ಬಿಜೆಪಿ ನಾಯಕರ ಪ್ರಚೋದನಕಾರಿ ಹೇಳಿಕೆಗಳಿಂದ ಈ ರೀತಿಯ ಹತ್ಯೆ ಆಗುತ್ತಿದೆ: ದಿನೇಶ್ ಗುಂಡೂರಾವ್

ಬಿಜೆಪಿಯವರಿಗೆ ಸಾವಿನ ಮನೆ ರಾಜಕಾರಣ ಮಾಡೋದು ಇನ್ನೂ ತಪ್ಪಿಲ್ಲ. ಅವರ ಪಕ್ಷದ ಕಾರ್ಯಕರ್ತರು ಅವರ ಮೇಲೆ ತಿರುಗಿ ಬಿದ್ದಿದರಿಂದ ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್...

ಬೆಂಗಳೂರು: ಬಿಜೆಪಿಯವರಿಗೆ ಸಾವಿನ ಮನೆ ರಾಜಕಾರಣ ಮಾಡೋದು ಇನ್ನೂ ತಪ್ಪಿಲ್ಲ. ಅವರ ಪಕ್ಷದ ಕಾರ್ಯಕರ್ತರು ಅವರ ಮೇಲೆ ತಿರುಗಿ ಬಿದ್ದಿದರಿಂದ ಈಗ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದ್ದಾರೆ ಎಂದು ಕಾಂಗ್ರೆಸ್ ಮುಖಂಡ ದಿನೇಶ್ ಗುಂಡೂರಾವ್ ಅವರು ಗುರುವಾರ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಕಾಂಗ್ರೆಸ್ ಮೇಲೆ‌ ಗೂಬೆ ಕೂರಿಸುವ ಕೆಲಸ ಬಿಟ್ಟು ಕಾನೂನು ಸುವ್ಯವಸ್ಥೆ ಕಾಪಾಡಬೇಕು. ಜನೋತ್ಸವ ಕಾರ್ಯಕ್ರಮ ರದ್ದು ಮಾಡಿದ್ದು ಅವರಿಗೆ ಬಿಟ್ಟಿದ್ದು. ಆದರೆ ಪ್ರಚೋದನಕಾರಿ ಹೇಳಿಕೆ ಕೊಟ್ಟು, ಕೊಟ್ಟು ಬಲಿ ತೆಗೆದುಕೊಂಡಿದ್ದಾರೆ ಎಂದು ಆರೋಪಿಸಿದರು.

ತೇಜಸ್ವಿ ಸೂರ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಅವರ ಮನೆ ಮೇಲೆ‌ ಅವರೇ ಕಲ್ಲು ಹೊಡೆದುಕೊಳ್ಳಬೇಕು. ಈ ಹಿಂದೆ ಈ ರೀತಿಯ ಸಾವು ಆಗಲಿ ಎಂದು ಕಾದು ಕುಳಿತಿದ್ದರು. ಹಿಂದೆ ವೈಯಕ್ತಿಕ ಸಾವುಗಳನ್ನು ರಾಜಕೀಯ ದ್ವೇಷ‌ದ ಸಾವುಗಳಾಗಿ ಮಾಡಿದ್ರು. ಹತ್ಯೆಗಳು ಎಲ್ಲಾ ಸರ್ಕಾರದಲ್ಲೂ ಆಗಿವೆ. ಆದರೆ ಹತ್ಯೆಗಳಲ್ಲಿ ರಾಜಕಾರಣ ಮಾಡಬಾರದು. ರಾಜಕಾರಣ ಮಾಡಿದ್ರೆ ಅವರದ್ದೆ ಪಕ್ಷದ ಕಾರ್ಯಕರ್ತರು ಬಲಿಯಾಗುತ್ತಿದ್ದಾರೆ. ತೇಜಸ್ವಿ ಸೂರ್ಯ ಹಾಗೂ ಬಿಜೆಪಿ ನಾಯಕರ ಪ್ರಚೋದನೆಕಾರಿ ಹೇಳಿಕೆಗಳಿಂದ ಈ ರೀತಿಯ ಹತ್ಯೆ ಆಗುತ್ತಿದೆ ಎಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

SCROLL FOR NEXT