ಆನಂದ್ ಸಿಂಗ್ ಮತ್ತು ಶಶಿಕಲಾ ಜೊಲ್ಲೆ 
ರಾಜಕೀಯ

ಜಿಲ್ಲಾ ಉಸ್ತುವಾರಿ ಸಚಿವರ ಬದಲಾವಣೆ ಮಾಡಿ ಆದೇಶ: ವಿಜಯನಗರಕ್ಕೆ ಆನಂದ್ ಸಿಂಗ್, ಕೊಪ್ಪಳಕ್ಕೆ ಶಶಿಕಲಾ ಜೊಲ್ಲೆ ನೇಮಕ!

ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ  ಬೊಮ್ಮಾಯಿ ಸರ್ಕಾರ ಇಬ್ಬರು ಹೊಸ ಜಿಲ್ಲಾ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿ ಆದೇಶ ಹೊರಡಿಸಿದೆ.

ಈ ಹಿಂದೆ ಜನವರಿ 24 ರಂದು ವಿವಿಧ ಜಿಲ್ಲೆಗಳಿಗೆ ಉಸ್ತುವಾರಿ ಸಚಿವರುಗಳನ್ನ ನೇಮಕ ಮಾಡಿದ್ದ ಬೊಮ್ಮಾಯಿ ಸರಕಾರ ಈಗ ಅಧಿಸೂಚನೆಯನ್ನು ತಿದ್ದುಪಡಿ ಮಾಡಿ ಪ್ರವಾಸೋದ್ಯಮ ಇಲಾಖೆ ಸಚಿವ ಆನಂದ್ ಸಿಂಗ್ ಅವರನ್ನು ವಿಜಯನಗರ ಜಿಲ್ಲೆಯ ಉಸ್ತುವಾರಿಯನ್ನಾಗಿ ನೇಮಕ ಮಾಡಲಾಗಿದ್ದು, ಮುಜುರಾಯಿ  ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆಗೆ ಕೊಪ್ಪಳ ಜಿಲ್ಲೆಯ ಜವಾಬ್ದಾರಿಯನ್ನು ನೀಡಲಾಗಿದೆ.

ಈ ಹಿಂದೆ ಸಚಿವ ಆನಂದ್ ಸಿಂಗ್ ಗೆ ಕೊಪ್ಪಳ ಜಿಲ್ಲೆ ಉಸ್ತುವಾರಿ ಮತ್ತು  ಶಶಿಕಲಾ ಜೊಲ್ಲೆಗೆ ವಿಜಯನಗರ ಜಿಲ್ಲೆ ಉಸ್ತುವಾರಿ  ವಹಿಸಲಾಗಿತ್ತು. ಸ್ವಂತ ಜಿಲ್ಲೆಯ ಸಚಿವರುಗಳಿಗೆ ಬೇರೆ ಜಿಲ್ಲೆ ಉಸ್ತುವಾರಿ ನೀಡಿದ್ದು, ತೀವ್ರ ವಿವಾದಕ್ಕೆ ಕಾರಣವಾಗಿತ್ತು.

ವಿಜಯನಗರದಿಂದ ಆನಂದ್‌ ಸಿಂಗ್ ಅವರನ್ನ ಬದಲಾವಣೆ ಮಾಡಿದಕ್ಕೆ ಹೊಸಪೇಟೆಯಲ್ಲಿ ಕಾರ್ಯಕರ್ತರು ಬೆಂಕಿ ಹಚ್ಚಿ ಪ್ರತಿಭಟನೆ ಮಾಡಿದ್ದರು. ಇದಕ್ಕೆ  ಆನಂದ್ ಸಿಂಗ್, ಇವೆಲ್ಲಾ ತಾಂತ್ರಿಕ ಸಮಸ್ಯೆಗಳು. ನಾನು ಒಪ್ಪಿದ ನಂತರವೇ ಉಸ್ತುವಾರಿ ಬದಲಾವಣೆ ಆಗಿದೆ. ಎಲ್ಲವನ್ನೂ ಹೊರಗಡೆ ಹೇಳುವ ಹಾಗಿಲ್ಲ ಎಂದು ಅಭಿಮಾನಿಗಳನ್ನ ಸಮಾಧಾನಪಡಿಸಿಸಿದ್ದರು. ಇದಾಗಿ 6 ತಿಂಗಳ ಬಳಿಕ ಇದೀಗ ಮತ್ತೆ ಆನಂದ್ ಸಿಂಗ್ ಗೆ ವಿಜಯನಗರದ ಉಸ್ತುವಾರಿ ನೀಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕದನ ವಿರಾಮ ಅಂತ್ಯ; ಹೊಸ ಮಾತುಕತೆಗೆ ಡೊನಾಲ್ಡ್ ಟ್ರಂಪ್ ಒಪ್ಪಿಗೆ – 'ಶರಣಾಗುವುದಿಲ್ಲ' ಎಂದ ಇರಾನ್

ಪ್ರಿಯಾಂಕ್ ಖರ್ಗೆ RSS ಸಚಿವರು- ಪರಮೇಶ್ವರ್ 'ಗೊತ್ತಿಲ್ಲ' ಸಚಿವರು: ಶೋಭಾ ಕರಂದ್ಲಾಜೆ

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ