ಹೆಚ್ ಡಿ ಕುಮಾರಸ್ವಾಮಿ, ಗುಬ್ಬಿ ಶ್ರೀನಿವಾಸ್ 
ರಾಜಕೀಯ

ಅಡ್ಡ ಮತದಾನ ಕುರಿತು ಗುಬ್ಬಿ ಶಾಸಕ ಶ್ರೀನಿವಾಸ್ -ದಳಪತಿಗಳ ವಾಗ್ದಾಳಿ: ಸೋಷಿಯಲ್ ಮೀಡಿಯಾದಲ್ಲಿ ತಿಥಿ ಕಾರ್ಡು ವೈರಲ್

ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಶಾಸಕ ಗುಬ್ಬಿ ಶ್ರೀನಿವಾಸ್‌ ಗೌಡ ಅಡ್ಡ ಮತದಾನ ಮಾಡಿದ್ದಾರೆ ಎಂದು ಸಂಶಯದಿಂದ ಆರೋಪಿಸಲಾಗುತ್ತಿದ್ದು, ಇನ್ನು ಕೋಲಾರ ಶ್ರೀನಿವಾಸ್ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡು ಅಡ್ಡಮತದಾನ ಮಾಡಿದ್ದು, ಜೆಡಿಎಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಬೆಂಗಳೂರು/ತುಮಕೂರು: ರಾಜ್ಯಸಭೆ ಚುನಾವಣೆಯಲ್ಲಿ ಜೆಡಿಎಸ್ ನ ಶಾಸಕ ಗುಬ್ಬಿ ಶ್ರೀನಿವಾಸ್‌ ಗೌಡ ಅಡ್ಡ ಮತದಾನ ಮಾಡಿದ್ದಾರೆ ಎಂದು ಸಂಶಯದಿಂದ ಆರೋಪಿಸಲಾಗುತ್ತಿದ್ದು, ಇನ್ನು ಕೋಲಾರ ಶ್ರೀನಿವಾಸ್ ಕಾಂಗ್ರೆಸ್ ಗೆ ಮತ ಹಾಕಿದ್ದೇನೆ ಎಂದು ಬಹಿರಂಗವಾಗಿ ಹೇಳಿಕೊಂಡು ಅಡ್ಡಮತದಾನ ಮಾಡಿದ್ದು, ಜೆಡಿಎಸ್‌ ನಾಯಕರ ಕೆಂಗಣ್ಣಿಗೆ ಗುರಿಯಾಗಿದ್ದಾರೆ. 

ಅಲ್ಲದೇ ಎಚ್‌ಡಿ ಕುಮಾರಸ್ವಾಮಿ ಸೇರಿದಂತೆ ಕಾರ್ಯಕರ್ತರು ಶ್ರೀನಿವಾಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನು ಸಾಮಾಜಿಕ ಜಾಲತಾಣಗಳಲ್ಲಿ ಹಿಗ್ಗಾಮುಗ್ಗಾ ತರಾಟೆಗೆ ತೆಗೆದುಕೊಂಡಿದ್ದಾರೆ. ಇಂದು ದಳಪತಿಗಳು ಬೆಂಗಳೂರಿನ ಸ್ವಾತಂತ್ರ್ಯ ಉದ್ಯಾನವನದಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ. 

ತಿಥಿ ಕಾರ್ಡು ವೈರಲ್: ಹೆಚ್ ಡಿ ಕುಮಾರಸ್ವಾಮಿ ಮತ್ತು ಜೆಡಿಎಸ್ ಕಾರ್ಯಕರ್ತರು, ಬೆಂಬಲಿಗರು ಗುಬ್ಬಿ ಕ್ಷೇತ್ರದ ಜೆಡಿಎಸ್ ಶಾಸಕ ಎಸ್.ಆರ್.ಶ್ರೀನಿವಾಸ್ ಬದುಕಿದ್ದರೂ ಅವರ ಫೋಟೋ ಸಹಿತ ತಿಥಿ ಕಾರ್ಡ್​ ತಯಾರಿಸಿ ಜಾಲತಾಣದಲ್ಲಿ ಅಪ್​ಲೋಡ್​ ಮಾಡಿದ್ದಾರೆ.

ಫೇಸ್​ಬುಕ್​ನಲ್ಲಿ ಪ್ರಚಂಡ ಭೈರವ ಹೆಸರಿನ ಖಾತೆಯಿಂದ ತಿಥಿ ಕಾರ್ಡ್​ ಅಪ್​ಲೋಡ್​ ಆಗಿದ್ದು, ಹಲವರಿಗೆ ಟ್ಯಾಗ್​ ಮಾಡಲಾಗಿದೆ. ಈ ಕಾರ್ಡ್​ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಜೂನ್​ 10ರಂದು ನಿಧನರಾಗಿದ್ದಾರೆ, ಜೂನ್​ 21ರಂದು ಸ್ವಕ್ಷೇತ್ರ ಗುಬ್ಬಿಯಲ್ಲಿ ಕೈಲಾಸ ಸಮಾರಾಧಾನೆ ನಡೆಯಲಿದೆ ಎಂದು ಬರೆಯಲಾಗಿದೆ. ಶ್ರೀನಿವಾಸ್​ರ ಅಭಿಮಾನಿಗಳು ಇದನ್ನು ನೋಡಿ ವಿಕೃತಿ ಎಂದು ತರಾಟೆಗೆ ತೆಗೆದುಕೊಂಡಿದ್ದಾರೆ.

ರಾಜ್ಯಸಭಾ ಚುನಾವಣೆಯಲ್ಲಿ ಶ್ರೀನಿವಾಸ್​ ಅಡ್ಡ ಮತದಾನ ಮಾಡಿದ್ದಾರೆ ಎಂದು ಶುಕ್ರವಾರ ಸಂಜೆ ಮಾಧ್ಯಮಗಳ ಮುಂದೆ ಹೆಚ್ ಡಿ ಕುಮಾರಸ್ವಾಮಿ ಗಂಭೀರ ಆರೋಪ ಮಾಡಿದ್ದರು. ಇದಕ್ಕೆ ನಿನ್ನೆ ಪ್ರತಿಕ್ರಿಯಿಸಿದ್ದ ಶಾಸಕ ಗುಬ್ಬಿ ಶ್ರೀನಿವಾಸ್, ಕುಮಾರಸ್ವಾಮಿ ವಿರುದ್ಧ ಏಕವಚನದಲ್ಲಿಯೇ ಆಕ್ರೋಶ ಹೊರಹಾಕಿದ್ದರು.

ತಾಕತ್ತಿದ್ದರೆ ನನ್ನ ಕ್ಷೇತ್ರದಲ್ಲಿ ನನ್ನ ವಿರುದ್ಧ ಚುನಾವಣೆಗೆ ಬಂದು ಸ್ಪಧಿಸಿ ಗೆಲ್ಲಲಿ. ಅವನು ಗೆದ್ದರೆ ನನ್ನ ಜೀವನ ಪೂರ ಆತನ ಮನೆಯಲ್ಲೇ ಕೂಲಿ ಕೆಲಸ ಮಾಡುವೆ ಎಂದು ಓಪನ್​ ಚಾಲೆಂಜ್​ ಮಾಡಿದ್ದರು. ಅಷ್ಟೇ ಅಲ್ಲ, ಇಂದು ತುಮಕೂರಲ್ಲಿ ಶ್ರೀನಿವಾಸ್​ರ ಮನೆ ಮುಂದೆ ಜೆಡಿಎಸ್​ ಕಾರ್ಯಕರ್ತರು ಪ್ರತಿಭಟನೆ ನಡೆಸಿದ್ದರು. ಇದಕ್ಕೆ ಪ್ರತಿಯಾಗಿ ಶ್ರೀನಿವಾಸ್​ ಪರ ಇವರ ಅಭಿಮಾನಿಗಳೂ ಪ್ರತಿಭಟನೆ ನಡೆಸಿದ್ದರು. ಇಷ್ಟೆಲ್ಲಾ ಬೆಳವಣಿಗೆ ನಡುವೆ ಶ್ರೀನಿವಾಸ್​ ಹೆಸರಲ್ಲಿ ತಿಥಿ ಕಾರ್ಡ್​ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟಿದ್ದಾರೆ.

ಈ ಬಗ್ಗೆ ತುಮಕೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಗುಬ್ಬಿ ಶಾಸಕ ಶ್ರೀನಿವಾಸ್, ಕುಮಾರಸ್ವಾಮಿದು ಕಚ್ಚೆ ಸರಿ ಇಲ್ಲ, ಬಾಯಿ ಸರಿ ಇಲ್ಲ. ಹೀಗಿದ್ದೂ ಇನ್ನೊಬ್ಬರ ಬಗ್ಗೆ ಮಾತನಾಡಲು ಯಾವ ನೈತಿಕತೆ ಇವರಿಗೆ ಇದೆ.? ಇವನ ವಿರುದ್ಧ ಹೋರಾಟ ಮಾಡೋದೇ ನನ್ನ ಮುಂದಿನ ನಡೆ ಎಂದು ಗುಡುಗಿದರು.

ಜೆಡಿಎಸ್ ವಿರುದ್ದ ಅಡ್ಡ ಮತದಾನ ಮಾಡಿದ್ದೂ ಅಲ್ಲದೆ ಹೆಚ್​.ಡಿ. ಕುಮಾರಸ್ವಾಮಿ ಅವರಿಗೆ ಏಕವಚನ ಬಳಸಿ ಮಾತನಾಡಿದ್ದಾರೆ ಎಂದು ಜೆಡಿಎಸ್ ಕಾರ್ಯಕರ್ತರು ಗುಬ್ಬಿ ಶ್ರೀನಿವಾಸ್ ಅವರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಂಗಳೂರಿನ ಮಹಾಲಕ್ಷ್ಮಿ ಲೇ ಔಟ್ನಲ್ಲಿರುವ ಕೋಲಾರ ಶಾಸಕ ಶ್ರೀನಿವಾಸ ಗೌಡ ಅವರ ಮನೆ ಮುಂದೆ ಕೂಡಾ ಪ್ರತಿಭಟನೆ ನಡೆಸಿದ್ದರು. ಇದರ ಬೆನ್ನಲ್ಲೇ ಇಬ್ಬರ ತಿಥಿ ಕಾರ್ಡ್​ಗಳನ್ನು ಸೃಷ್ಟಿಸಿ ಸೋಷಿಯಲ್ ಮೀಡಿಯಾದಲ್ಲಿ ಅಪ್​​​ಲೋಡ್ ಮಾಡಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

"Bad News": ಅಮೆರಿಕದ ಷರತ್ತುಗಳನ್ನು ಇರಾನ್ ಒಪ್ಪುತ್ತಿಲ್ಲ- ಜೆಡಿ ವ್ಯಾನ್ಸ್!

ಪಾಕಿಸ್ತಾನ ಮಧ್ಯಸ್ಥಿಕೆಯಲ್ಲಿ ನೇರ ಮಾತುಕತೆ; ಅಮೆರಿಕದ ಬೇಡಿಕೆ ಅತಿಯಾಗಿದೆ ಎಂದು ಇರಾನ್ ಮಾಧ್ಯಮಗಳ ಆರೋಪ

ಅಂತಿಮಗೊಳ್ಳದ ಹಾರ್ಮುಜ್ ಜಲಸಂಧಿ ಬಿಕ್ಕಟ್ಟು: 2 ನೇ ದಿನವಾದ ಇಂದು ಕೂಡಾ ಯುಎಸ್- ಇರಾನ್ ಮಾತುಕತೆ ಮುಂದುವರಿಕೆ!

PM Modi- Rahul: ರಾಜಕೀಯ ಬದ್ಧ ವೈರಿಗಳ ಅಪರೂಪದ ಚುಟುಕು ಸಂಭಾಷಣೆ- ವಿಡಿಯೋ ವೈರಲ್!

ಬೆಂಗಳೂರು: 500 ರೂ.ನಲ್ಲಿ ಪುಲ್ ಡೇ ಬಿಂದಾಜ್ ಲೈಫ್! ಪಶ್ಚಿಮ ಬಂಗಾಳ ಯುವತಿಯ ವಿಡಿಯೋ ವೈರಲ್

SCROLL FOR NEXT