ರಾಜಕೀಯ

ಕ್ವಿಟ್ ಇಂಡಿಯಾ ಚಳುವಳಿಯಲ್ಲಿ ಹೆಡಗೆವಾರ್ ಪಾತ್ರದ ಕುರಿತು ಟ್ವಿಟರ್ ನಲ್ಲಿ ಬರೆದು ಪೇಚಿಗೆ ಸಿಲುಕಿದ ಸಿದ್ದರಾಮಯ್ಯ

Srinivas Rao BV

ಬೆಂಗಳೂರು: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಗೆ ಜಾರಿ ನಿರ್ದೇಶನಾಲಯ ನೊಟೀಸ್ ಜಾರಿಗೊಳಿಸಿರುವುದನ್ನು ವಿರೋಧಿಸಿ ನಡೆಸಿದ ಪ್ರತಿಭಟನೆಯ ಭಾಗವಾಗಿ ಟ್ವಿಟರ್ ನಲ್ಲಿ ಹ್ಯಾಷ್ ಟ್ಯಾಗ್ ಮೂಲಕ ರಾಹುಲ್ ಗಾಂಧಿಗೆ ಬೆಂಬಲ ವ್ಯಕ್ತಪಡಿಸುವಾಗ ವಿಪಕ್ಷ ನಾಯಕ ಸಿದ್ದರಾಮಯ್ಯ ಎಡವಟ್ಟು ಮಾಡಿಕೊಂಡಿದ್ದಾರೆ. 

ಆಡಳಿತಾರೂಢ ಬಿಜೆಪಿ ಹಾಗೂ ಅದರ ಸೈದ್ಧಾಂತಿಕ ಮಾರ್ಗದರ್ಶಕ ಸಂಸ್ಥೆ ಆರ್ ಎಸ್ಎಸ್ ವಿರುದ್ಧ ವಾಗ್ದಾಳಿ ನಡೆಸುವ ಭರದಲ್ಲಿ ಸಿದ್ದರಾಮಯ್ಯ 1942 ರ ಕ್ವಿಟ್ ಇಂಡಿಯಾ ಚಳುವಳಿ ಸಂದರ್ಭದಲ್ಲಿ ಆರ್ ಎಸ್ ಎಸ್ ನ ಹೆಗಡೆವಾರ್, ಗೋಲ್ವಾಲ್ಕರ್ ಅವರು ಬ್ರಿಟೀಷರ ಜೊತೆ ಸೇರಿ ಸಂಚು ರೂಪಿಸಿ ಚಳುವಳಿಯನ್ನು ಹತ್ತಿಕ್ಕಲು ಯತ್ನಿಸಿದ್ದನ್ನು ಈ ದೇಶದ ಜನ ಮರೆತಿಲ್ಲ ಎಂದು ಹೇಳಿದ್ದರು. 

ಆದರೆ 1940 ರ ಜೂ.21 ರಂದೇ ಮೃತಪಟ್ಟಿದ್ದ ಆರ್ ಎಸ್ ಎಸ್ ಸಂಸ್ಥಾಪಕ ಹೆಡಗೆವಾರ್ 1942 ರಲ್ಲಿ ಬ್ರಿಟೀಷರ ಜೊತೆ ಸೇರಿ ಕ್ವಿಟ್ ಇಂಡಿಯಾ ಚಳುವಳಿಯನ್ನು ಹತ್ತಿಕ್ಕಲು ಸಂಚು ರೂಪಿಸಲು ಹೇಗೆ ಸಾಧ್ಯ ಎಂಬ ಪ್ರಶ್ನೆಯನ್ನು ಸಿದ್ದರಾಮಯ್ಯ ಗೆ ಸಾಮಾಜಿಕ ಜಾಲತಾಣಗಳಲ್ಲಿ ಕೇಳಲಾಗುತ್ತಿದೆ. 

ಸಿದ್ದರಾಮಯ್ಯ ಅವರ ಟ್ವಿಟರ್ ಹ್ಯಾಂಡಲ್ ನ್ನು ನಿರ್ವಹಿಸುತ್ತಿರುವ ವ್ಯಕ್ತಿಯ ವಿರುದ್ಧ ಟ್ವೀಟಿಗರು ಟೀಕಾ ಪ್ರಹಾರ ನಡೆಸುತ್ತಿದ್ದು, ಇತಿಹಾಸ ಗೊತ್ತಿಲ್ಲದವರು ಟ್ವೀಟ್ ಮಾಡಿದರೆ ಇದೇ ರೀತಿಯ ಎಡವಟ್ಟಾಗುತ್ತದೆ ಎಂದು ವ್ಯಂಗ್ಯವಾಡಿದ್ದಾರೆ. ಸಿದ್ದರಾಮಯ್ಯ ಅವರ ಟ್ವೀಟ್ ನ ಈ screen shot ಈಗ ಎಲ್ಲೆಡೆ ವೈರಲ್ ಆಗತೊಡಗಿವೆ.

SCROLL FOR NEXT