ರಾಜಕೀಯ

ರಾಜ್ಯಸಭೆ ಗೆಲುವು ಬಳಿಕ ಬಿಬಿಎಂಪಿ ಚುನಾವಣೆಗೆ ಬಿಜೆಪಿ ಸಿದ್ಧತೆ!

Manjula VN

ಬೆಂಗಳೂರು: ರಾಜ್ಯಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವಿನ ನಗೆ ಬೀರಿರುವ ಬಿಜೆಪಿ ಸೆಪ್ಟೆಂಬರ್ ಕೊನೆಯ ವಾರ ಅಥವಾ ಅಕ್ಟೋಬರ್ ಮೊದಲ ವಾರದಲ್ಲಿ ನಡೆಯಲಿಸುವ ಬಿಬಿಎಂಪಿ ಚುನಾವಣೆಗೆ ಸಿದ್ಧತೆಗಳ ಆರಂಭಿಸಿದೆ.

ಜೂನ್.21ರಂದು ವಿಶ್ವ ಯೋಗ ದಿನಾಚರಣೆ ಹಿನ್ನೆಲೆಯಲ್ಲಿ ಮೈಸೂರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಭೇಟಿ ನೀಡುತ್ತಿದ್ದು, ಈ ವೇಳೆ ಪಕ್ಷದ ಮುಖಂಡರು, ಶಾಸಕರೊಂದಿಗೆ ಸರಣಿ ಸಭೆ ನಡೆಸುವ ಸಾಧ್ಯತೆಗಳಿವೆ ಎಂದು ಹೇಳಲಾಗುತ್ತಿದೆ.

ಸಚಿವರನ್ನು ಹೊರತುಪಡಿಸಿ ಕ್ಷೇತ್ರಗಳನ್ನು ಪ್ರತಿನಿಧಿಸುವ ಇತರೆ ನಾಯಕರಿಗೆ ಗೆಲುವು ಖಚಿತ ಪಡಿಸುವ ಅಭ್ಯರ್ಥಿಗಳನ್ನು ಗುರ್ತಿಸುವ ಕಾರ್ಯ ನೀಡುವ ಕುರಿತು ಚಿಂತನೆಗಳು ನಡೆದಿವೆ ಎಂದು ತಿಳಿದುಬಂದಿದೆ.

ರಾಜ್ಯದ ವಿಧಾನಸಭಾ ಚುನಾವಣೆ 2023ರಲ್ಲಿ ನಡೆಯಲಿದ್ದು, ಇದಕ್ಕೂ ಮುನ್ನ ನಡೆಯಲಿರುವ ಬಿಬಿಎಂಬಿ ಚುನಾವಣೆ ಬಿಜೆಪಿಗೆ ಅತ್ಯಂತ ಮುಖ್ಯವಾದ ಚುನಾವಣೆಯಾಗಿ ಪರಿಣಮಿಸಿದೆ.

ಈ ಚುನಾವಣೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರಿಗೆ ಪ್ರತಿಷ್ಠೆಯ ಕಣವಾಗಿದ್ದು, ಸಚಿವರಾದ ಆರ್ ಅಶೋಕ್, ವಿ ಸೋಮಣ್ಣ, ಕೆ ಗೋಪಾಲಯ್ಯ ಮತ್ತು ಎಸ್ ಟಿ ಸೋಮಶೇಖರ್ ಅವರಿಗೆ ಆಯಾ ವಿಧಾನಸಭಾ ಕ್ಷೇತ್ರಗಳಿಂದ ಹೆಚ್ಚಿನ ಸ್ಥಾನಗಳನ್ನು ಖಾತರಿಪಡಿಸುವ ಕಾರ್ಯವನ್ನು ನೀಡಲಾಗುತ್ತದೆ ಎಂದು ತಿಳಿದುಬಂದಿದೆ.

ಈ ನಡುವೆ ಒಬಿಸಿ ಮೀಸಲಾತಿಯನ್ನು ನಿಗದಿಪಡಿಸಲು ನ್ಯಾಯಮೂರ್ತಿ ಭಕ್ತವತ್ಸಲಂ ಆಯೋಗವು ನ್ಯಾಯಾಲಯಕ್ಕೆ ತ ವರದಿಯನ್ನು ಸಲ್ಲಿಸಬೇಕಿದೆ. ವರದಿ ಸಲ್ಲಿಸದ ಹೊರದು ಚುನಾವಣೆ ನಡೆಯುವುದು ಅಸಂಭವ ಎಂದು ಮೂಲಗಳು ತಿಳಿಸಿವೆ.

SCROLL FOR NEXT