ರಾಜಕೀಯ

ಇಂದಿರಾ ಕಾಲದಿಂದಲೇ 'ಗೂಂಡಾ ರಾಜ್' ವ್ಯವಸ್ಥೆ ಅಸ್ತಿತ್ವದಲ್ಲಿ ಇತ್ತು: ರೌಡಿ ಗುರುವಿಗೆ ಬೀದಿ ಗೂಂಡಾಗಳೇ ಶಿಷ್ಯರು!

Shilpa D

ಬೆಂಗಳೂರು: ಕನಕಪುರದ ಬಂಡೆ ಮಕ್ಕಳ ಮೇಲಿರುವ ಐಪಿಸಿ ಸೆಕ್ಷನ್ ಬಗ್ಗೆ ಬರೆದರೆ, ಪುಸ್ತಕವೇ ಬರೆಯಬಹುದು. ಇವರ ಹಾದಿಯನ್ನೇ ಯುವಾಧ್ಯಕ್ಷರು ಅನುಸರಿಸಿಕೊಂಡು ಹೋಗುತ್ತಿದ್ದಾರೆ ಎಂದು ಕಾಂಗ್ರೆಸ್ ವಿರುದ್ಧ ಬಿಜೆಪಿ ಹರಿಹಾಯ್ದಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಪದಾಧಿಕಾರಿಗಳ ಪಟ್ಟಿಯಲ್ಲಿರುವವರಲ್ಲೂ ಐಪಿಸಿ ಸೆಕ್ಷನ್ ಬೋರ್ಡ್ ಹಾಕಿಕೊಂಡವರ ಸಂಖ್ಯೆ ಕಡಿಮೆಯೇನಿಲ್ಲ, ಕೈ ನಾಯಕರು ಶ್ರಮಿಕರಿಗೆ, ದಲಿತರಿಗೆ, ಮಹಿಳೆಯರಿಗೆ ಸಹಾಯ ಹಸ್ತ ಚಾಚುವುದಿಲ್ಲ. ಅವರದ್ದೇನಿದ್ದರೂ ಕೈ ಕೈ ಮಿಲಾಯಿಸುವುದಷ್ಟೇ ಎಂದು ಲೇವಡಿ ಮಾಡಿದೆ.

ಅಣ್ಣಂನಂತೆ ತಮ್ಮ, ನಾಯಕರಂತೆ ಕಾರ್ಯಕರ್ತರು. ಕನಕಪುರವಿರಲಿ, ಬೆಂಗಳೂರಿರಲಿ ಅಥವಾ ದೆಹಲಿ ಇರಲಿ ಗೂಂಡಾಗಿರಿ ಮಾಡುವುದೇ ಇವರ ಪ್ರವೃತ್ತಿ.ಕೊತ್ವಾಲ್ ಶಿಷ್ಯ ಡಿಕೆಶಿ ಆಯ್ಕೆಗಳು ಅವರಂತೆಯೇ ಇರುತ್ತದೆ. ಬೀದಿ ರೌಡಿಗಳು, ಬಿಟ್ ಕಾಯಿನ್ ಆಸಾಮಿಗಳಿಗೆ ಮುಂಚೂಣಿ ಘಟಕದ ನಾಯಕತ್ವ ನೀಡಲಾಗಿದೆ. ರೌಡಿ ಗುರುವಿಗೆ ಬೀದಿ ಗೂಂಡಾಗಳೇ ಶಿಷ್ಯರು ಎಂದು ಟಾಂಗ್ ನೀಡಿದೆ.

ಪಬ್‌ನಲ್ಲಿ ಸಿಕ್ಕ ಸಿಕ್ಕವರ ಮೇಲೆ ಬಾಟಲಿಯಿಂದ ಹಲ್ಲೆ ಮಾಡುತ್ತಿದ್ದ ರೌಡಿ‌‌ ನಲಪಾಡ್ ಯುವ ಕಾಂಗ್ರೆಸ್ ಅಧ್ಯಕ್ಷ. ಗೊರಿಲ್ಲಾ ಶ್ರೀನಿವಾಸ ರಾಷ್ಟ್ರೀಯ ಅಧ್ಯಕ್ಷ ಎಲ್ಲರೂ ಗೂಂಡಾಗಿರಿಯ ತುಣುಕುಗಳೇ. ಯತಾರಾಜಾ ತಥಾ ಪ್ರಜಾ ಎಂಬುದು ಕಾಂಗ್ರೆಸ್ಸಿಗರಿಗೆ ಅನ್ವಯವಾಗುತ್ತದೆ.

ಕೊತ್ವಾಲನ ಶಿಷ್ಯ ಕೆಪಿಸಿಸಿ ಅಧ್ಯಕ್ಷರಾದರೆ, ಗ್ಯಾಸ್ ಕಾಲೇಜಿನಲ್ಲಿ ಬ್ಲೇಡು, ಚಾಕು ಚೂರಿ ಹಿಡಿದು ಗೂಂಡಾಗಿರಿ ನಡೆಸುತ್ತಿದ್ದವರು ಮೇಲ್ಮನೆಯ ವಿಪಕ್ಷ ನಾಯಕ, ಇ‌ವರು ಜನರ ಪ್ರೀತಿಯಿಂದ ನಾಯಕರಾಗಿಲ್ಲ, ಜನರಿಗೆ ಭೀತಿ ಹುಟ್ಟಿಸಿ ನಾಯಕರಾಗಿದ್ದಾರೆ.ದೆಹಲಿಯಲ್ಲಿ ಪೊಲೀಸರೊಂದಿಗೆ ವಾಗ್ವಾದಕ್ಕಿಳಿದು, ಬಂಧನಕ್ಕೆ ಒಳಗಾದ ಶಾಸಕ, ಸಂಸದರಿಗೂ ಗೂಂಡಾಗಿರಿಯ ಘನ ಇತಿಹಾಸ ಇದೆ‌. ಒಬ್ಬರು ಕನಕಪುರದ ಅಘೋಷಿತ ರೌಡಿ, ಇನ್ನೊಬ್ಬರು 'ಗೂಂಡಾರಾಯರು. 

ಗೂಂಡಾಗಿರಿ ಎಂಬುದು ಕಾಂಗ್ರೆಸ್ ನಾಯಕರಿಗೆ ವಂಶ ಪಾರಂಪರ್ಯವಾಗಿ ಬಂದ ಉಡುಗೊರೆ. ಇಂದಿರಾ ಗಾಂಧಿ ಕಾಲದಿಂದಲೇ ಗೂಂಡಾರಾಜ್ ವ್ಯವಸ್ಥೆ ಅಸ್ತಿತ್ವದಲ್ಲಿ ಇತ್ತು. ಅದೀಗ ಕರ್ನಾಟಕದಲ್ಲಿ ಮುಂದುವರಿಯುತ್ತಿದೆ ಎಂದು ಬಿಜೆಪಿ ಟಾಂಗ್ ನೀಡಿದೆ.
 

SCROLL FOR NEXT