ಡಿಕೆ ಶಿವಕುಮಾರ್ 
ರಾಜಕೀಯ

ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರನ್ನು ಗುರಿಯಾಗಿಸಲು ಏಜೆನ್ಸಿಗಳ ದುರ್ಬಳಕೆ: ಡಿಕೆ ಶಿವಕುಮಾರ್

ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರು ಗುರಿಯಾಗಿಸಲು ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ಬೆಂಗಳೂರು: ಕೇಂದ್ರ ಸರ್ಕಾರ ಕಾಂಗ್ರೆಸ್ ಮುಖಂಡರು ಗುರಿಯಾಗಿಸಲು ಕೇಂದ್ರೀಯ ತನಿಖಾ ಏಜೆನ್ಸಿಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಆರೋಪಿಸಿದ್ದಾರೆ.

ರಾಹುಲ್ ಗಾಂಧಿ ವಿರುದ್ಧ ಇಡಿ ತನಿಖೆ ವಿರೋಧಿಸಿ ಗುರುವಾರ ಪ್ರತಿಭಟನಾ ಮೆರವಣಿಗೆಯಲ್ಲಿ ಪಾಲ್ಗೊಂಡು ಮಾತನಾಡಿದ ಡಿಕೆ ಶಿವಕುಮಾರ್, ಕೇಂದ್ರ ಸರ್ಕಾರ ಕೇಂದ್ರೀಯ ಸಂಸ್ಥೆಗಳ ದುರ್ಬಳಕೆ ತಡೆಯಲು ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಮಧ್ಯಸ್ಥಿಕೆಗೆ ಒತ್ತಾಯಿಸಿದರು.

ರಾಹುಲ್ ಕಾಶ್ಮೀರದಿಂದ ಕನ್ಯಾಕುಮಾರಿಯವರೆಗೆ ಭಾರತ್ ಜೋಡೋ ಯಾತ್ರೆ ಘೋಷಿಸಿದ ನಂತರ, ಸರ್ಕಾರವು ಕೇಂದ್ರೀಯ ಸಂಸ್ಥೆಗಳನ್ನು ಬಳಸಿಕೊಂಡು ಕಿರುಕುಳ ನೀಡುತ್ತಿದೆ ಎಂದು ಅವರು ಆರೋಪಿಸಿದರು.

ಪಕ್ಷದ ಹಿರಿಯ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್‌ಗೆ ಆಗಿರುವ ಅನ್ಯಾಯ ಮತ್ತು ಕಿರುಕುಳದ ವಿರುದ್ಧ ಪಕ್ಷವು ನಿರಂತರ ಹೋರಾಟ ನಡೆಸಲಿದೆ ಎಂದು ಡಿಕೆ ಶಿವಕುಮಾರ್ ಹೇಳಿದರು.

ತಾವು ತನಿಖೆಗೆ ವಿರೋಧಿಗಳಲ್ಲ, ಹಿರಿಯ ನಾಯಕರ ಹೆಸರು ಕೆಡಿಸುವ ಉದ್ದೇಶದಿಂದ ಹಿರಿಯ ನಾಯಕರನ್ನು ಸುಳ್ಳು ಪ್ರಕರಣದಲ್ಲಿ ಸಿಲುಕಿಸುವ ಷಡ್ಯಂತ್ರವನ್ನು ಖಂಡಿಸುತ್ತೇವೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದರು. ಇಂದು ಕೂಡಾ ಜಿಲ್ಲಾ ಕೇಂದ್ರಗಳಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಜ್ಞಾನೇಶ್ ಕುಮಾರ್ ನೆರವಿನಿಂದ ದೇಶವನ್ನು 'ಹೈಜಾಕ್' ಮಾಡಿದ ಮೋದಿ, ಶಾ, ಭಾಗವತ್‌ರನ್ನು ಸುಮ್ಮನೆ ಬಿಡಲ್ಲ; ರಾಹುಲ್ ಗಾಂಧಿ ಗುಡುಗು!

'ನಾವು ಒಂದೂವರೆ ವರ್ಷ ಪ್ರೀತಿಸುತ್ತಿದ್ದೆವು': ಲಂಡನ್ ಲವ್​ ಕಹಾನಿ ನೆನೆದು ಭಾವುಕರಾದ CM ವಿಜಯ್​ ಪುತ್ರ ಜೇಸನ್!

SIR ವಿವಾದ: 'ಶಾಸಕ ಯತ್ನಾಳ್ ಬಣ್ಣ ಬಯಲು'; ವಿಜಯಪುರದಲ್ಲಿ ಬದುಕಿರುವ 8 ಮುಸ್ಲಿಂ ಮತದಾರರು 'ಸತ್ತಿದ್ದಾರೆ' ಎಂದು ಅರ್ಜಿ!

ಪಶ್ಚಿಮ ಬಂಗಾಳ ಉಪ ಚುನಾವಣೆ: ಪೊಲೀಸರೊಂದಿಗೆ ಮಾತಿನ ಚಕಮಕಿ: ಶಾಸಕ ಹುಮಾಯೂನ್ ಕಬೀರ್ ಬಂಧನ

ಹೆದ್ದಾರಿಗಳಲ್ಲಿ ನಿಲ್ಲಿಸಿರುವ ವಾಹನಗಳ ಎಲೆಕ್ಟ್ರಾನಿಕ್ ಟ್ರ್ಯಾಕಿಂಗ್ ಸಾಧ್ಯವಾಗುತ್ತಿಲ್ಲವೇಕೆ- NHAI ಗೆ ಸುಪ್ರೀಂ ಕೋರ್ಟ್