ಎಚ್.ಡಿ ದೇವೇಗೌಡ 
ರಾಜಕೀಯ

ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪಿಸಿಯೇ ಇಲ್ಲ: ಎಚ್.ಡಿ ಕುಮಾರಸ್ವಾಮಿ

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು

ಬೆಂಗಳೂರು: ಮುಂದಿನ ರಾಷ್ಟ್ರಪತಿ ಹುದ್ದೆಗೆ ಯಾರನ್ನು ಆಯ್ಕೆ ಮಾಡಬೇಕು ಎಂಬುದರ ಬಗ್ಗೆ ಬಿಜೆಪಿ ಮತ್ತು ಪ್ರಾದೇಶಿಕ ಪಕ್ಷಗಳ ಬಗ್ಗೆ ಚರ್ಚೆ ನಡೆಯುತ್ತಿರುವುದರ ಮಧ್ಯೆಯೇ ಮಾಜಿ ಪ್ರಧಾನಿ ಎಚ್‌.ಡಿ. ದೇವೇಗೌಡ ಅವರ ಹೆಸರೂ ಸಹ ಕೇಳಿಬಂದಿತ್ತು. ಆದರೆ, ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಾಜಿ ಮುಖ್ಯಮಂತ್ರಿ ಎಚ್‌.ಡಿ. ಕುಮಾರಸ್ವಾಮಿ ಅವರು, ಎಚ್.ಡಿ.ದೇವೇಗೌಡ ಅವರು ರಾಷ್ಟ್ರಪತಿ ಹುದ್ದೆಗೆ ಸ್ಪರ್ಧೆ ಮಾಡುವುದಿಲ್ಲ ಎಂದು ಹೇಳಿದ್ದಾರೆ.

ಬಿಬಿಎಂಪಿ ಚುನಾವಣೆ ಹಾಗೂ ಜನತಾ ಮಿತ್ರ ಕಾರ್ಯಕ್ರಮ ಹಿನ್ನೆಲೆಯಲ್ಲಿ ಪಕ್ಷದ ಕಚೇರಿ ಜೆಪಿ ಭವನದಲ್ಲಿ ಮಾತನಾಡಿದ ಅವರು, ರಾಷ್ಟ್ರಪತಿ ಚುನಾವಣೆಗೆ ದೇವೇಗೌಡರ ಹೆಸರು ಪ್ರಸ್ತಾಪವೇ ಆಗಿಲ್ಲ ಎಂದರು.

ರಾಷ್ಟ್ರಪತಿ ಅಭ್ಯರ್ಥಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದಂತೆ ದೆಹಲಿಯಲ್ಲಿ ಚರ್ಚೆ ಆಗಿದೆ. ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ನಮ್ಮ ಕುಟುಂಬದ ಬಗ್ಗೆ ಗೌರವ ಇಟ್ಟು ಸಭೆಗೆ ಆಹ್ವಾನ ನೀಡಿದ್ದರು. 17 ಪಕ್ಷಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಆ ಸಭೆಯಲ್ಲಿ ಯಾವುದೇ ಅಭ್ಯರ್ಥಿಯನ್ನು ಅಂತಿಮಗೊಳಿಸಿಲ್ಲ. ಜೂನ್ 20ರಂದು ಮತ್ತೊಂದು ಸುತ್ತಿನ ಸಭೆ ಇದೆ. ಅಂದು ಅಭ್ಯರ್ಥಿ ಆಯ್ಕೆ ಅಂತಿಮ ಮಾಡಲಾಗುತ್ತದೆ ಎಂದು ಹೇಳಿದರು.

ದೇವೇಗೌಡರಿಗೆ ಜೀವನದಲ್ಲಿ ಒಮ್ಮೆ ಕರ್ನಾಟಕದಲ್ಲಿ ಜೆಡಿಎಸ್ ಪಕ್ಷದ ಸ್ವತಂತ್ರ ಸರ್ಕಾರ ಬರಬೇಕು ಎಂಬ ಆಸೆ ಇದೆ. ಸ್ವತಂತ್ರ ಸರ್ಕಾರದ ಬಗ್ಗೆ ಅವರ ಆಸೆ ಪೂರೈಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ. ಆದರ ಹೊರತಾಗಿ, ರಾಷ್ಟ್ರಪತಿ ಹುದ್ದೆಯ ಬಗ್ಗೆ ದೇವೇಗೌಡರ ಒಲವು ಇಲ್ಲ ಎಂದು ಮತ್ತೊಮ್ಮೆ ಸ್ಪಷ್ಟಪಡಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹತ್ಯೆಯಾಗಿ 4 ತಿಂಗಳ ಬಳಿಕ ಖಮೇನಿ ಅಂತ್ಯಕ್ರಿಯೆಗೆ ಇರಾನ್ ಸಿದ್ಧತೆ: ಶವಪೆಟ್ಟಿಗೆ ಪ್ರದರ್ಶನ; ಇಷ್ಟು ದಿನ ಎಲ್ಲಿತ್ತು ಶರೀರ?

ಭಾರತದಲ್ಲಿ ಇದ್ದಿದ್ದರೆ ಈ ಕೊಳಕು ವ್ಯವಸ್ಥೆ ಎಂದಿಗೂ ನಾನು CEO ಆಗುತ್ತಿರಲಿಲ್ಲ: ಇಂದ್ರಾ ನೂಯಿ

`ಪಡೆದುಕೊಂಡ ಮೇಲೆ ನಡೆದುಕೊಳ್ಳುವ ರೀತಿ ಚೆನ್ನಾಗಿರಲಿ’: ಸುಪ್ರೀಂ ಶಾಕ್ ಬೆನ್ನಲ್ಲೇ ನಟ ದರ್ಶನ್ ಪತ್ನಿ ಹೀಗೆ ಹೇಳಿದ್ದು ಯಾರಿಗೆ?

ಶ್ರೀರಂಗಪಟ್ಟಣದಲ್ಲಿ 200 ಎಕರೆ ಭೂಕಬಳಿಕೆ ಬಯಲಿಗೆಳೆದ ಲೋಕಾಯುಕ್ತ; 9 ಜನರ ಬಂಧನ, ADLR ಅಧಿಕಾರಿ ಮೊಹಮ್ಮದ್ ಪರಾರಿ!

ಅಪ್ರಾಪ್ತ ಬಾಲಕ ಚಲಾಯಿಸುತ್ತಿದ್ದ ಟ್ರಕ್ ಡಿಕ್ಕಿ, 9 ಬೌದ್ಧ ಭಿಕ್ಷುಗಳು ಸಾವು! ಚೆಲ್ಲಾಪಿಲ್ಲಿಯಾಗಿ ರಸ್ತೆ ಮೇಲೆ ಬಿದ್ದ ಮೃತದೇಹಗಳು, Video