ವಿ.ಸೋಮಣ್ಣ 
ರಾಜಕೀಯ

ನನ್ನ ಹೆಸರಿಲ್ಲದ ಶಿಲಾಫಲಕ ಕೂಡಲೇ ಬದಲಾಯಿಸಿ, ಇಲ್ಲದಿದ್ದರೆ ನಾಳೆ ಬೆಳಗ್ಗೆಯೇ ಒಡೆದು ಹಾಕುತ್ತೇನೆ: ವಿ. ಸೋಮಣ್ಣ

ಜೂನ್ 20 ರಂದು ಬೆಂಗಳೂರು ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೇಸ್ ಕ್ಯಾಂಪಸ್ ನಲ್ಲಿ 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆ ಮಾಡಲಿದ್ದಾರೆ.

ಬೆಂಗಳೂರು: ಜೂನ್ 20 ರಂದು ಬೆಂಗಳೂರು ಪ್ರವಾಸ ಕೈಗೊಳ್ಳಲಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಬೇಸ್ ಕ್ಯಾಂಪಸ್ ನಲ್ಲಿ 150 ಮೇಲ್ದರ್ಜೆಗೇರಿಸಲ್ಪಟ್ಟ ಐಟಿಐಗಳ ಲೋಕಾರ್ಪಣೆ ಮಾಡಲಿದ್ದಾರೆ. ಐಟಿಐ ಲೋಕಾರ್ಪಣೆ ಶಿಲಾ ಫಲಕದಲ್ಲಿ ತಮ್ಮ ಹೆಸರಿಲ್ಲದಿರುವುದಕ್ಕೆ ಸಚಿವ ಮತ್ತು ಗೋವಿಂದರಾಜನಗರ ಶಾಸಕ ವಿ. ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಪ್ರಧಾನಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿರುವ ಸ್ಥಳೀಯ ಶಾಸಕ ವಿ. ಸೋಮಣ್ಣ ಅವರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬೇಸ್ ಕ್ಯಾಂಪಸ್ ಬರಲಿದೆ. ಅಧ್ಯಕ್ಷತೆ ವಹಿಸುವ ತಮ್ಮ ಹೆಸರೇ ಇಲ್ಲ ಅಂದರೆ ಹೇಗೆ? ಬೇಸ್ ಕ್ಯಾಂಪಸ್ ನಮ್ಮ ಕ್ಷೇತ್ರದಲ್ಲೇ ಬರುತ್ತದೆ. ಕೂಡಲೇ ಶಿಲಾಫಲಕ ಬದಲಾಯಿಸಿ. ಇಲ್ಲದಿದ್ದರೆ ನಾಳೆ ಬೆಳಗ್ಗೆಯೇ ಒಡೆದು ಹಾಕುತ್ತೇನೆ ಎಂದು ಸಚಿವ ವಿ. ಸೋಮಣ್ಣ ಗರಂ ಆದರು. ಬೇಸ್ ಕ್ಯಾಂಪಸ್ ನಲ್ಲಿ ಕಾರ್ಯಕ್ರಮದ ಸಿದ್ಧತೆಗೆ ತೆರಳಿದ್ದ ವೇಳೆ ಸಚಿವ ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದರು .

ಇದೆಲ್ಲಾ ರಾಜ್ಯ ಸರ್ಕಾರದ ದುಡ್ಡು, ಕೇಂದ್ರ ಸರ್ಕಾರದ್ದಲ್ಲ. ಅವರು ಹೆದರಿಸುತ್ತಾರೆ ಅಂತಾ ನೀವೆಲ್ಲಾ ಹೆದರಿಕೊಂಡು ಕುಳಿತುಕೊಳ್ಳುತ್ತೀರಾ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತ ಪ್ರದೀಪ್ ಜೊತೆ ವಿ. ಸೋಮಣ್ಣ ಆಕ್ಷೇಪ ವ್ಯಕ್ತಪಡಿಸಿದರು.  

ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಎದುರಲ್ಲಿ ಸಚಿವ ವಿ.ಸೋಮಣ್ಣ ಆಕ್ಷೇಪವೆತ್ತಿದರು. ಸದ್ಯ ಶಿಲಾಫಲಕದಲ್ಲಿ ಪ್ರಧಾನಿ ನರೇಂದ್ರ ಮೋದಿ, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್, ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಉನ್ನತ ಶಿಕ್ಷಣ ಸಚಿವ ಡಾ. ಅಶ್ವಥ್ ನಾರಾಯಣ ಹೆಸರು ಮಾತ್ರ ಉಲ್ಲೇಖವಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

TMCಗೆ ಸೆಡ್ಡು ಹೊಡೆದ ಬಂಡಾಯ ಸಂಸದರಿಗೆ ಶಾಕ್‌: 20 ಮಂದಿಗೆ ಲೋಕಸಭಾ ಸಚಿವಾಲಯ ನೋಟಿಸ್‌, 7 ದಿನಗಳೊಳಗೆ ಉತ್ತರಿಸುವಂತೆ ಸೂಚನೆ..!

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ