ಜನಾರ್ದನ ರೆಡ್ಡಿ 
ರಾಜಕೀಯ

ನಾನು ಇವತ್ತೇ ಮನಸ್ಸು ಮಾಡಿದ್ರೆ ಒಂದು ದಿನಕ್ಕಾದರೂ ಸಿಎಂ ಆಗುವೆ: ಜನಾರ್ದನ ರೆಡ್ಡಿ

ನಾನು ಮನಸ್ಸು ಮಾಡಿದ್ರೆ ಒಂದು ದಿನವಾದ್ರೂ ಮುಖ್ಯಮಂತ್ರಿಯಾಗುವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಸುದ್ದಿಯಾಗಿದ್ದಾರೆ. 

ಬಳ್ಳಾರಿ: ನಾನು ಮನಸ್ಸು ಮಾಡಿದ್ರೆ ಒಂದು ದಿನವಾದ್ರೂ ಮುಖ್ಯಮಂತ್ರಿಯಾಗುವೆ ಎಂದು ಹೇಳುವ ಮೂಲಕ ಮಾಜಿ ಸಚಿವ ಜನಾರ್ದನ ರೆಡ್ಡಿ ಮತ್ತೆ ಸುದ್ದಿಯಾಗಿದ್ದಾರೆ. 

ನಿನ್ನೆ ಬಳ್ಳಾರಿಯಲ್ಲಿ ಶಾಸಕ ಸೋಮಶೇಖರ್ ರೆಡ್ಡಿ ಹುಟ್ಟುಹಬ್ಬದ ಸಮಾರಂಭದಲ್ಲಿ ಮಾತನಾಡಿದ ಅವರು, ರೆಡ್ಡಿ, ರಾಮುಲು ಸಹೋದರರಿಗೆ ಇಂದು ದುಡ್ಡಿನ ಅವಶ್ಯಕತೆ ಇಲ್ಲ. ನನಗೆ ಶಾಸಕ ಆಗಬೇಕು. ಮಂತ್ರಿ ಆಗಬೇಕು ಅಂತಾ ಆಸೆಯಿಲ್ಲ. ನಾನು ಮನಸ್ಸು ಮಾಡಿದ್ರೆ ಇವತ್ತು ಒಂದು ದಿನ ಆದ್ರು ಸಿಎಂ ಆಗುವೆ ಎಂದರು. 

ಲೋಕಸಭಾ ಕ್ಷೇತ್ರದ ಕೊನೆಯ ಸದಸ್ಯರಾಗಿ ಕರುಣಾಕರ ರೆಡ್ಡಿ ಕೆಲಸ ಮಾಡಿದ್ದಾರೆ. ಸೋಮಶೇಖರ್ ರೆಡ್ಡಿ ಬಳ್ಳಾರಿ ನಗರಸಭೆ ಅಧ್ಯಕ್ಷರಿಂದ ಈಗ ಶಾಸಕರಾಗಿ ಕೆಲಸ ಮಾಡುತ್ತಿದ್ದಾರೆ. ನಾನು ರಾಜಕೀಯದಲ್ಲಿ ಸಾಕಷ್ಟು ಕಷ್ಟಪಟ್ಟಿದ್ದೇನೆ. ಇಷ್ಟಾದ್ರೂ ನಾನಿಂದು ನಿಮ್ಮ ಮುಂದೆ ಬಂದು ನಿಲ್ಲಲು ಬಳ್ಳಾರಿ ಕನಕದುರ್ಗಮ್ಮ ದೇವಿ ವಿಶೇಷ ಆಶೀರ್ವಾದ ಕಾರಣ ಎಂದು ದೇವರ ಮೇಲೆ ಭಕ್ತಿ ತೋರಿದರು.

ನನ್ನ ಜಾಗದಲ್ಲಿ ಬೇರೆ ಯಾರಾದರೂ ಇದ್ದಿದ್ದರೆ ಇಷ್ಟೊಂದು ಸಮಸ್ಯೆ ಎದುರಿಸಲಾಗುತ್ತಿರಲಿಲ್ಲ. ಅಷ್ಟು ತೊಂದರೆ ನನಗೆ ನೀಡಿದ್ದಾರೆ. ರೆಡ್ಡಿಯವರೇ ನಿಮಗೆ ತೊಂದರೆ ಮಾಡಬೇಕೆಂದು ಮೇಲಿನವರ ಆದೇಶ ಇದೆ ಎಂದು ಸಿಬಿಐನವರೇ ನನಗೆ ಹೇಳಿದರು. ಆದರೆ ಬಳ್ಳಾರಿಯ ಜನರಿಗೆ ನಿಮ್ಮ ಬಗ್ಗೆ ಒಳ್ಳೆಯ ಅಭಿಪ್ರಾಯ ಇದೆ ಎಂದು ಸಿಬಿಐನವರು ಹೇಳಿದ್ದರು ಎಂದು ಹೊಸ ಬಾಂಬ್ ಹಾಕಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನೇಪಾಳ ಭೀಕರ ಪ್ರವಾಹ: 95 ಮಂದಿ ಸಾವು; 105 ಭಾರತೀಯರು ಸೇರಿ 400 ಮಂದಿ ನಾಪತ್ತೆ: ಬಿಹಾರ, ಯುಪಿಯಲ್ಲಿ ಹೈ ಅಲರ್ಟ್! Video

ನೇಪಾಳ ಪ್ರವಾಹ: ಭಾರತಕ್ಕೆ ದೊಡ್ಡ ಆತಂಕವಿಲ್ಲ, ಜಲಾಶಯಗಳ ನೀರಿನ ಮಟ್ಟ ಇಳಿಕೆ: ಕೇಂದ್ರ ಸ್ಪಷ್ಟನೆ

Sugar Price: ಈರುಳ್ಳಿ ಬೆನ್ನಲ್ಲೇ ಇದೀಗ ಸಕ್ಕರೆ ಶಾಕ್: ಕೆಜಿಗೆ 65 ರೂ ದಾಟಿದ ದರ, ಗ್ರಾಹಕರ ಜೇಬಿಗೆ 'ಸಿಹಿ ಕಹಿ'!

2nd Test: ಬೌಂಡರಿ ಲೈನ್ ಬಳಿ ದುರ್ವರ್ತನೆ ತೋರಿದ್ದ ಲಂಕಾ ಆಟಗಾರ Prabath Jayasuriyaಗೆ ಬರೆ ಹಾಕಿದ ICC!

ನಟ ದೇವರಾಜ್ 2ನೇ ಪುತ್ರ ನಟ ಪ್ರಣಮ್ ನಿಶ್ಚಿತಾರ್ಥ