ಬೆಂಗಳೂರಿನ ಅರಮನೆ ಮೈದಾನದಲ್ಲಿ ಶುಕ್ರವಾರ ನಡೆದ ಸಭೆಯಲ್ಲಿ ಮಾಜಿ ಸಚಿವ ಎಂ ಆರ್ ಸೀತಾರಾಮ್ ಹಾಗೂ ಅವರು ಬೆಂಬಲಿಗರು ಇರುವುದು. 
ರಾಜಕೀಯ

ಸಿದ್ದರಾಮಯ್ಯ ಮಧ್ಯಪ್ರವೇಶ ಬಳಿಕ ಕಾಂಗ್ರೆಸ್ ತೊರೆಯುವ ನಿರ್ಧಾರ ಮುಂದೂಡಿದ ಎಂ.ಆರ್. ಸೀತಾರಾಮ್

ವಿಧಾನಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರು ಸಿದ್ದರಾಮಯ್ಯ ಅವರ ಮಧ್ಯಪ್ರವೇಶದ ಬಳಿತ ತಮ್ಮ ನಿರ್ಧಾರವನ್ನು ಮುಂದೂಡಿದ್ದಾರೆಂದು ತಿಳಿದುಬಂದಿದೆ.

ಬೆಂಗಳೂರು: ವಿಧಾನಪರಿಷತ್ ಟಿಕೆಟ್ ಕೈತಪ್ಪಿದ್ದರಿಂದ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನಗೊಂಡಿದ್ದ ಮಾಜಿ ಸಚಿವ ಎಂ.ಆರ್.ಸೀತಾರಾಮ್ ಅವರು ಸಿದ್ದರಾಮಯ್ಯ ಅವರ ಮಧ್ಯಪ್ರವೇಶದ ಬಳಿತ ತಮ್ಮ ನಿರ್ಧಾರವನ್ನು ಮುಂದೂಡಿದ್ದಾರೆಂದು ತಿಳಿದುಬಂದಿದೆ.

ಶುಕ್ರವಾರ ಅರಮನೆ ಮೈದಾನದಲ್ಲಿ ಬಲಿಜ ಸಮುದಾಯದ ಮುಖಂಡರು ಸೇರಿದಂತೆ ಬೆಂಬಲಿಗರ ಬೃಹತ್ ಸಮಾಲೋಚನಾ ಸಭೆ ನಡೆಸಿದ ವೇಳೆ ಕಾಂಗ್ರೆಸ್ ನಾಯಕತ್ವದ ಬಗ್ಗೆ ಸೀತಾರಾಮ್ ಅವರು ಅಸಮಾಧಾನ ಹೊರಹಾಕಿದ್ದರು.

ತಮ್ಮ ಹಿತೈಷಿಗಳಿಂದ, ವಿಶೇಷವಾಗಿ ಸಿದ್ದರಾಮಯ್ಯ ಅವರ ಆಪ್ತ ಜಿ ಹುಚ್ಚಪ್ಪ ಅವರಿಂದ ಪ್ರತಿಕ್ರಿಯೆಗಳನ್ನು ಪಡೆಯಲಾಗಿದ್ದು, ಮುಂದಿನ ಒಂದು ತಿಂಗಳಲ್ಲಿನಲ್ಲಿ ಕಾಂಗ್ರೆಸ್ ಪಕ್ಷ ತೊರೆಯುವುದು, ಪಕ್ಷದಲ್ಲೇ ಇರುವ ಕುರಿತು ನಿರ್ಧಾರ ಕೈಗೊಳ್ಳುತ್ತೇನೆಂದು ಸೀತಾರಾಮ್ ಅವರು ಹೇಳಿದ್ದಾರೆ.

ನಿಮ್ಮಲ್ಲಿ ಕೆಲವರು ನನ್ನನ್ನು ಪಕ್ಷ ಬಿಡಬೇಡಿ ಎಂದು ಸಲಹೆ ನೀಡಿದ್ದಾರೆ. ಆದರೆ ಮುಂದಿನ ಸಭೆಯಲ್ಲಿ ನಮಗೆಲ್ಲರಿಗೂ ಸಹಾಯವಾಗುವ ಐತಿಹಾಸಿಕ ನಿರ್ಧಾರವನ್ನು ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದರು.

ಕಾಂಗ್ರೆಸ್ ನಿಂದ ನನಗೆ ಬೇರೆ ಬೇರೆ ಹಂತದಲ್ಲಿ 4 ಬಾರಿ ಅನ್ಯಾಯವಾಗಿದೆ. ಪಕ್ಷದ ಚುಕ್ಕಾಣಿ ಹಿಡಿದವರು ಮನುಷ್ಯತ್ವ, ಮಾನವೀಯತೆ ಇಟ್ಟುಕೊಳ್ಳಬೇಕು. ಬೇಸರಗೊಂಡವರ ಜೊತೆ ಮಾತನಾಡಬೇಕು. ಆದರೆ, ಪರಿಷತ್ ಟಿಕೆಟ್ ಕೈ ತಪ್ಪಿ ತಿಂಗಳಾದರೂ ಸೌಜನ್ಯಕ್ಕೂ ಯಾರೂ ಮಾತನಾಡಿಸಲಿಲ್ಲ.

ಸಿದ್ದರಾಮಯ್ಯ ನನ್ನನ್ನು ಈ ಹಿಂದೆ ಸಚಿವನನ್ನಾಗಿ ಮಾಡಿದ್ದು, ಎರಡು ವರ್ಷ ಸೇವೆ ಸಲ್ಲಿಸಿದ್ದೇನೆ. ಸಚಿವನಾಗಿದ್ದಾಗ ಸರ್ಕಾರದ ಹಣದಲ್ಲಿ ಕಾಫಿ, ಟೀ ಕೂಡ ಕೂಡಿದಿಲ್ಲ. ಹೀಗೆ ಕೆಲಸ ಮಾಡಿದ ನನ್ನನ್ನು ನಿರ್ಲಕ್ಷ್ಯ ಮಾಡಲಾಗುತ್ತಿದೆ. ಹೀಗಾಗಿ ಒಂದು ತಿಂಗಳು ಯೋಜನೆ ಮಾಡಿ ಈ ಸಭೆ ನಡೆಸಿದ್ದೇನೆ. ಮುಖಂಡರು, ಪ್ರೀತಿ ಪಾತ್ರರ ಜೊತೆ ಇನ್ನೂ ಮಾತನಾಡಬೇಕಿದೆ. ಮುಂದಿನ ತಿಂಗಳು ನಿರ್ಧಾರ ಪ್ರಕಟಿಸುತ್ತೇನೆ. ನನ್ನ ನಿರ್ಧಾರ ಬಹುತೇಕರಿಗೆ ಇಷ್ಟವಾಗಲಿದೆ ಎಂದು ಮಾರ್ಮಿಕವಾಗಿ ನುಡಿದರು.

ಇದೇ ವೇಳೆ ಡಿಕೆ.ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ ಅವರು, ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಆಯ್ಕೆಯಾದ ಒಂದು ವರ್ಷದ ನಂತರ ತಮ್ಮ ಪುತ್ರ ರಕ್ಷಾ ರಾಮಯ್ಯ ಅವರನ್ನು ರಾಜ್ಯ ಯುವ ಕಾಂಗ್ರೆಸ್ ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಿದ್ದಾರೆ. ನಾಮಪತ್ರ ತಿರಸ್ಕೃತಗೊಂಡರೂ ನಲಪಾಡ್ ಅವರನ್ನು ಅಧ್ಯಕ್ಷರನ್ನಾಗಿ ಮಾಡಿದ್ದಾರೆ.

ಇತರೆ ಯುವ ನಾಯಕರಲ್ಲಿ ಕಾಣದ ಲಕ್ಷಣ ನಲಪಾಡ್ ಅವರಲ್ಲಿ ಏನು ಕಂಡಿದೆ ಎಂಬುದು ನನಗೆ ತಿಳಿಯುತ್ತಿಲ್ಲ ಎಂದರು.

ಬಳಿಕ ಮಾಜಿ ಕೇಂದ್ರ ಸಚಿವ ಎಂ ವೀರಪ್ಪ ಮೊಯ್ಲಿ ಅವರನ್ನು ಟೀಕಿಸಿದ ಸೀತಾರಾಮ್, ಮೊಯ್ಲಿ ಅವರು 2009 ರಲ್ಲಿ ಚಿಕ್ಕಬಳ್ಳಾಪುರ ಲೋಕಸಭಾ ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯಾದರು ಆದರೆ ಅವರ ಹೆಸರನ್ನು ತೆರವುಗೊಳಿಸಲಾಯಿತು ಎಂದು ತಿಳಿಸಿದರು.

ಸೀತಾರಾಮ್ ಅವರ ವಿಚಾರವನ್ನು ಸಿದ್ದರಾಮಯ್ಯ ಅವರು ನೋಡಿಕೊಳ್ಳಲಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು ಮಾತನಾಡವವರೆಗೂ ಸೀತಾರಾಮ್ ಅವರು ಪಕ್ಷವನ್ನು ಬಿಡುವಂತಿಲ್ಲ ಎಂದು ಹುಚ್ಚಪ್ಪ ಅವರು ಹೇಳಿದ್ದಾರೆ.

ಸಿದ್ದರಾಮಯ್ಯ ಅವರ ಆಪ್ತ ಹಾಗೂ ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಅವರ ಮಾಜಿ ಸಹವರ್ತಿ, ಮಾಜಿ ಎಂಎಲ್ಸಿ ಎಂಡಿ ಲಕ್ಷ್ಮೀನಾರಾಯಣ ಅವರು ಮಾತನಾಡಿ, ಹಿಂದುಳಿದ ವರ್ಗಗಳ ನಾಯಕರನ್ನು ಕಣಕ್ಕಿಳಿಸಲು ಕಾಂಗ್ರೆಸ್ ನಾಯಕರ ಷಡ್ಯಂತ್ರ ರೂಪಿಸಿದರೆ ಪರಿಣಾಮವನ್ನು ಎದುರಿಸಬೇಕಾಗುತ್ತದೆ ಎಂದು ಎಚ್ಚರಿಸಲಿದ್ದಾರೆ.

ಬಲಿಜ ಸಮುದಾಯದ ಅಧ್ಯಕ್ಷ ವೇಣುಗೋಪಾಲ್ ಅವರ ಮಾತನಾಡಿ, ಸುಮಾರು 40 ವಿಧಾನಸಭಾ ಸ್ಥಾನಗಳಲ್ಲಿ ಸಮುದಾಯವು ನಿರ್ಣಾಯಕ ಅಂಶವಾಗಿದೆ. ನಾಯಕರನ್ನು ಇದೇ ರೀತಿ ಅನ್ಯಾಯವಾಗಿ ನಡೆಸಿಕೊಂಡಿದ್ದೇ ಆದರೆ, ಪಕ್ಷಕ್ಕೆ ಅರ್ಧದಷ್ಟು ಮತಗಳು ಕಡಿಮೆಯಾಗಲಿದೆ ಎಂದು ಎಚ್ಚರಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

SCROLL FOR NEXT