ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ 
ರಾಜಕೀಯ

ಒಕ್ಕಲಿಗ ಹೃದಯಭಾಗದಲ್ಲಿ ಪಕ್ಷದ ಪುನಶ್ಚೇತನಕ್ಕೆ ವರವಾಗಲಿದೆ ಕಾಂಗ್ರೆಸ್ ಪಾದಯಾತ್ರೆ!

ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಆಜಾದಿ ಕಾ ಅಮೃತ ಮಹೋತ್ಸವದಂದು ಪಾದಯಾತ್ರೆ ನಡೆಸಲು ಮುಂದಾಗಿದೆ

ಮೈಸೂರು: ವಿಧಾನಪರಿಷತ್ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಕಾಂಗ್ರೆಸ್, ಆಜಾದಿ ಕಾ ಅಮೃತ ಮಹೋತ್ಸವದಂದು ಪಾದಯಾತ್ರೆ ನಡೆಸಲು ಮುಂದಾಗಿದೆ.

ಬಿಜೆಪಿ ಸರ್ಕಾರವು ತನ್ನ ಮುಂದಿನ 25 ವರ್ಷಗಳ ಸಾಧನೆಗಳು ಮತ್ತು ದೂರದೃಷ್ಟಿಯನ್ನು ಪ್ರದರ್ಶಿಸಲು 75 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಬಳಸುತ್ತಿದ್ದರೆ, ಕಾಂಗ್ರೆಸ್ ನಾಯಕರು ಪಕ್ಷವನ್ನು ಪುನರುಜ್ಜೀವನಗೊಳಿಸಲು ಬೀದಿಗಿಳಿಯಲು ಸಜ್ಜಾಗಿದ್ದಾರೆ.

ಎಲ್ಲಾ ಜಿಲ್ಲೆಗಳಿಂದ 75 ಕಿಲೋಮೀಟರ್ ಪಾದಯಾತ್ರೆ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ. ದೇಶವನ್ನು ಕಟ್ಟಲು ಪಕ್ಷದ ಕೊಡುಗೆಯನ್ನು ಜನರಿಗೆ ತಿಳಿಸಲು ಹಾಗೂ ಜನರ ಸಮಸ್ಯೆಗಳನ್ನು ಆಲಿಸಲು ಮುಂದಾಗಿದೆ. 

ಇತ್ತೀಚೆಗಷ್ಟೇ ನಡೆದ ಪರಿಷತ್ ಚುನಾವಣೆಯಲ್ಲಿ ಭರ್ಜರಿ ಪ್ರದರ್ಶನ ನೀಡಿ ಜನತಾ ದಳ (ಜಾತ್ಯತೀತ) ಪ್ರಮುಖ ಪ್ರತಿಸ್ಪರ್ಧಿಯಾಗಿರು ಮಂಡ್ಯ, ಹಾಸನ ಮತ್ತು ಮೈಸೂರು ಜಿಲ್ಲೆಗಳ ಒಕ್ಕಲಿಗ ಕೇಂದ್ರದಲ್ಲಿ ಪಾದಯಾತ್ರೆ ಆರಂಭಿಸಿರುವುದು ಪಕ್ಷಕ್ಕೆ ಹುರುಪು ತುಂಬಿದೆ.

ಸಮ್ಮಿಶ್ರ ಸರ್ಕಾರದ ಪತನದ ನಂತರ ಜೆಡಿಎಸ್ ಸೋಲನುಭವಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ತನ್ನ ಪುನಶ್ಚೇತನ ಕಾರ್ಯತಂತ್ರದ ಭಾಗವಾಗಿ ಮತದಾರರು ಹಾಗೂ ಬೂತ್ ಮಟ್ಟದಲ್ಲಿ ಮತ್ತು ಪಂಚಾಯಿತಿಗಳಲ್ಲಿ ಜೆಡಿಎಸ್ ಮುಖಂಡರು ಮತ್ತು ಕಾರ್ಯಕರ್ತರನ್ನು ತಲುಪುತ್ತಿದೆ.

ಕಾಂಗ್ರೆಸ್ ನಾಯಕರು ಮಂಡ್ಯದ ಕೆಆರ್ ಪೇಟೆ ತಾಲೂಕಿನಿಂದ ಪಾದಯಾತ್ರೆ ಆರಂಭಿಸಿ, ಏಳು ಕ್ಷೇತ್ರಗಳಲ್ಲಿ ಸಂಚರಿಸಿ ಮಳವಳ್ಳಿಯಲ್ಲಿ ಸಮಾರೋಪಗೊಳಿಸಲಿದ್ದಾರೆ.

ಕಾಂಗ್ರೆಸ್ ನಾಯಕರು ರಸ್ತೆಯ ಮೂಲೆಗಳಲ್ಲಿ ಮತ್ತು ಹೋಬಳಿಗಳಲ್ಲಿ ಸಭೆಗಳನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. 2023 ರಲ್ಲಿ ಅಧಿಕಾರಕ್ಕೆ ಬಂದರೆ ತಮ್ಮ ಯೋಜನೆಗಳ ಬಗ್ಗೆ ಮಾಹಿತಿ ನೀಡಲಿದ್ದಾರೆ. ಮನ್ರೇಗಾ, ಆರ್ ಟಿ ಐ ಉಚಿತ ಆಹಾರ, ಶಿಕ್ಷಣ, ಎಸ್ ಸ್ಸಿ ಎಸ್ ಟಿ ಅಲ್ಪಸಂಖ್ಯಾತರ ಕಲ್ಯಾಣ ಕಾರ್ಯಕ್ರಮಗಳ ಬಗ್ಗೆ ಕಲಾವಿದರ ಮೂಲಕ ಪ್ರದರ್ಶನ ಕೊಡಿಸಲಿದ್ದಾರೆ.ಯುಪಿಎ ಸರ್ಕಾರದ 70,000 ಕೋಟಿ ರೂ.ಗಳ ಸಾಲ ಮನ್ನಾ ಬಗ್ಗೆಯೂ ಪ್ರದರ್ಶನ ನೀಡಲಿದ್ದಾರೆ.

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಒಕ್ಕಲಿಗ ನಾಯಕರಾಗಿ ಹೊರಹೊಮ್ಮಲು ಮತ್ತು ಎಚ್‌ಡಿ ದೇವೇಗೌಡರ ಕುಟುಂಬವನ್ನು ಎದುರಿಸಲು ಉತ್ಸುಕರಾಗಿದ್ದಾರೆ.

ವಿಪಕ್ಷ ನಾಯಕ ಸಿದ್ದರಾಮಯ್ಯ ಜೆಡಿಎಸ್‌ನ ತಳಹದಿ ಅಲುಗಾಡಿಸಲು ನೋಡುತ್ತಿದ್ದಾರೆ. ಹಳೇ ಮೈಸೂರಿನಲ್ಲಿ ಜೆಡಿಎಸ್‌ ಸೋತರೆ ಕಾಂಗ್ರೆಸ್‌ಗೆ ಲಾಭವಾಗಲಿದೆ. 130 ಸ್ಥಾನಗಳ ಗುರಿ ಇಟ್ಟುಕೊಂಡಿರುವ ಪಕ್ಷವು 95 ಕ್ಕೂ ಹೆಚ್ಚು ವಿಧಾನಸಭಾ ಕ್ಷೇತ್ರಗಳನ್ನು ಹೊಂದಿರುವ ಈ ಪ್ರದೇಶದಲ್ಲಿ ತನ್ನ ಪ್ರಾಬಲ್ಯ ಸಾಧಿಸಲು ಮುಂದಾಗಿದೆ.

ಮಂಡ್ಯ ಜಿಲ್ಲೆ ಒಬ್ಬರು ಸಂಸದ, ಮೂವರು ಎಂಎಲ್‌ಸಿಗಳು ಮತ್ತು ಏಳು ಶಾಸಕರನ್ನು ಹೊಂದಿದೆ. ಸುಮಲತಾ ಅಂಬರೀಶ್‌ ಸ್ವತಂತ್ರ್ಯ ಅಭ್ಯರ್ಥಿಯಾಗಿ ಸ್ಪರ್ಧಿಸಿ ಸಂಸದರಾಗಿ ಆಯ್ಕಿಯಾಗಿದ್ದಾರೆ. ಕಾಂಗ್ರೆಸ್ ಇಬ್ಬರು ಎಂಎಲ್‌ಸಿಗಳನ್ನು ಹೊಂದಿದೆ. ಜೆಡಿಎಸ್ ಎಂಎಲ್ ಸಿ ಮರಿತಿಬ್ಬೇಗೌಡ ಕಾಂಗ್ರೆಸ್ ಅಭ್ಯರ್ಥಿ ಮಧು ಜಿ ಮಾದೇಗೌಡ ಪರ ಬಹಿರಂಗ ಪ್ರಚಾರ ನಡೆಸಿದ್ದರು.

ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಪಿ.ಎಂ.ನರೇಂದ್ರ ಸ್ವಾಮಿ ಮಾತನಾಡಿ, ಮಂಡ್ಯ ಜಿಲ್ಲೆಯಲ್ಲಿ ಜೆಡಿಎಸ್ ಹಿಡಿತ ಕಳೆದುಕೊಳ್ಳುತ್ತಿರುವುದರಿಂದ ಜನರು ಕಾಂಗ್ರೆಸ್‌ನತ್ತ ಮುಖ ಮಾಡುತ್ತಿದ್ದಾರೆ ಎಂದು ಹೇಳಿದ್ದಾರೆ.

15ರಂದು ನಡೆಯಲಿರುವ ಬೃಹತ್ ಸಮಾವೇಶದಲ್ಲಿ ಪ್ರತಿ ವಿಧಾನಸಭಾ ಕ್ಷೇತ್ರದಿಂದ 500 ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಜಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT