ರಾಜ್ಯ ಕಾಂಗ್ರೆಸ್ ನಾಯಕರೊಂದಿಗೆ ಚರ್ಚೆ ನಡೆಸುತ್ತಿರುವ ರಾಹುಲ್ ಗಾಂಧಿ. 
ರಾಜಕೀಯ

2023 ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ: ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಜೊತೆ ರಾಹುಲ್ ಗಾಂಧಿ ಚರ್ಚೆ

2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ ಸಂಜೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು.

ಬೆಂಗಳೂರು: 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಪಕ್ಷದ ಕಾರ್ಯತಂತ್ರದ ಕುರಿತು ಚರ್ಚಿಸಲು ಕಾಂಗ್ರೆಸ್ ಹಿರಿಯ ನಾಯಕ ರಾಹುಲ್ ಗಾಂಧಿ ಅವರು, ಮಂಗಳವಾರ ಸಂಜೆ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರೊಂದಿಗೆ ಸಭೆ ನಡೆಸಿದರು.

ಸಭೆಯಲ್ಲಿ ರಾಹುಲ್ ಗಾಂಧಿ, ಕೆಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲಾ, ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ಪಕ್ಷದ ಚುನಾವಣಾ ಕಾರ್ಯತಂತ್ರದ ಬಗ್ಗೆ ವಿವರವಾದ ಚರ್ಚೆ ನಡೆಸಿದರು.

ರಾಜ್ಯ ಮತ್ತು ಕೇಂದ್ರದಲ್ಲಿ ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಎತ್ತಿ ತೋರಿಸುವುದರ ಜೊತೆಗೆ, ಪಕ್ಷದ ಕಾರ್ಯಕರ್ತರನ್ನು ಸಜ್ಜುಗೊಳಿಸುವತ್ತ ಗಮನ ಹರಿಸುವುದು ಮತ್ತು ವಿವಿಧ ಹಂತಗಳಲ್ಲಿ ಪಕ್ಷದ ನಾಯಕರ ನಡುವೆ ಒಗ್ಗಟ್ಟನ್ನು ಖಚಿತಪಡಿಸಿಕೊಳ್ಳಲು ಒತ್ತು ನೀಡುವ ಕುರಿತು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು ಎಂದು ಮೂಲಗಳು ತಿಳಿಸಿವೆ.

ರಾಜಸ್ಥಾನದ ಉದಯಪುರದಲ್ಲಿ ಪಕ್ಷದ ಚಿಂತನ್ ಶಿಬಿರಾ ನಂತರ ರಾಜ್ಯ ಕಾಂಗ್ರೆಸ್ ಘಟಕವು ಜಿಲ್ಲಾ ಮಟ್ಟದಲ್ಲಿ ಚಿಂತನ-ಮಂಥನ ಅಧಿವೇಶನಗಳನ್ನು ನಡೆಸುತ್ತಿದೆ ಮತ್ತು ಬಿಜೆಪಿ ಸರ್ಕಾರದ ವೈಫಲ್ಯಗಳನ್ನು ಬಹಿರಂಗಪಡಿಸಲು ಆಗಸ್ಟ್ 9 ರಿಂದ 15 ರವರೆಗೆ ಜಿಲ್ಲೆಗಳಲ್ಲಿ ಪಾದಯಾತ್ರೆಗಳನ್ನು ಕೈಗೊಳ್ಳಲು ಯೋಜಿಸಿದೆ. 

ಮೂರೂ ಪಕ್ಷಗಳ ಸಮೀಕ್ಷೆಗಳು ಕಾಂಗ್ರೆಸ್ ಪರವಾಗಿದ್ದು, ನಾವು ಅದೇ ವೇಗವನ್ನು ಕಾಪಾಡಿಕೊಳ್ಳಬೇಕು ಮತ್ತು ನಾಯಕರ ನಡುವಿನ ಭಿನ್ನಾಭಿಪ್ರಾಯಗಳನ್ನು ತಪ್ಪಿಸಬೇಕು" ಎಂದು ರಾಹುಲ್ ಅವರು ರಾಜ್ಯದ ನಾಯಕರಿಗೆ ಸೂಚನೆ ನೀಡಿದ್ದಾರೆಂದು ಮೂಲಗಳು ತಿಳಿಸಿವೆ.

ಈ ನಡುವೆ ಉಭಯ ನಾಯಕರ ನಡುವಿನ ಭಿನ್ನಾಭಿಪ್ರಾಯವನ್ನು ಹೋಗಲಾಡಿಸಲು ರಾಹುಲ್ ಗಾಂಧಿ ಅವರು ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರನ್ನು ಸಭೆಗೆ ಕರೆದಿದ್ದಾರೆ ಎಂಬ ಊಹಾಪೋಹಗಳನ್ನು ಪಕ್ಷದ ಮೂಲಗಳು ತಳ್ಳಿಹಾಕಿವೆ. 

“ಇಬ್ಬರು ನಾಯಕರ ನಡುವೆ ಯಾವುದೇ ಭಿನ್ನಾಭಿಪ್ರಾಯಗಳಿಲ್ಲ. ಎಲ್ಲಾ ಸಮಸ್ಯೆಗಳನ್ನು ಮೊದಲೇ ಚರ್ಚಿಸಲಾಗಿದೆ ಮತ್ತು ಪರಿಹರಿಸಲಾಗಿದೆ. ಈಗ ಎಲ್ಲರೂ ಒಂದು ಬಲವಾದ ಘಟಕವಾಗಿ ಕೆಲಸ ಮಾಡುತ್ತಿದ್ದಾರೆ, ”ಎಂದು ತಿಳಿಸಿದೆ.

ಯಾವಾಗ ಬೇಕಾದರೂ ವಿಧಾನಸಭೆ ಚುನಾವಣೆ ಎದುರಿಸಲು ಪಕ್ಷ ಸಿದ್ಧವಿದೆ, ಆದರೆ ಸರಕಾರ ತನ್ನ ದೌರ್ಬಲ್ಯಕ್ಕೆ ಹೆದರಿ ಜಿಲ್ಲಾ ಪಂಚಾಯಿತಿ ಹಾಗೂ ತಾಲೂಕು ಪಂಚಾಯಿತಿ ಚುನಾವಣೆ ನಡೆಸಲು ಸಿದ್ಧವಿಲ್ಲ ಎಂದು ಕಾಂಗ್ರೆಸ್ ಮುಖಂಡರೊಬ್ಬರು ತಿಳಿಸಿದ್ದಾರೆ.

ಸಭೆ ಫಲಪ್ರದವಾಗಿತ್ತು: ರಾಹುಲ್ ಗಾಂಧಿ
ಸಭೆ ಕುರಿತು ಸಾಮಾಜಿಕ ಜಾಲತಾಣದಲ್ಲಿ ಹೇಳಿಕೊಂಡಿರುವ ರಾಹುಲ್ ಗಾಂಧಿಯವರು, ಕೆಸಿ ವೇಣುಗೋಪಾಲ್ ಮತ್ತು ರಣದೀಪ್ ಸುರ್ಜೇವಾಲಾ ಅವರೊಂದಿಗೆ ಕರ್ನಾಟಕ ಕಾಂಗ್ರೆಸ್‌ನ ಹಿರಿಯ ನಾಯಕರಾದ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲಾಯಿತು. ಕರ್ನಾಟಕದಲ್ಲಿ ಮುಂಬರುವ ವಿಧಾನಸಭಾ ಚುನಾವಣೆಗೆ ಪಕ್ಷದ ಸಿದ್ಧತೆಗಳು, ಪ್ರಚಾರಗಳು ಮತ್ತು ಕಾರ್ಯತಂತ್ರದ ಕುರಿತು ಫಲಪ್ರದ ಚರ್ಚೆ ನಡೆಸಲಾಯಿತು ಎಂದು ಹೇಳಿದ್ದಾರೆ. 

ಭಾರತ್ ಜೋಡೋ ಯಾತ್ರೆ
ಅಕ್ರೋಬರ್ 2 ರಿಂದ ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆ ಆರಂಭವಾಗಲಿದ್ದು, ಈ ಹಿನ್ನೆಲೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್ ಮತ್ತು ರಾಜ್ಯ ವಿಧಾನಪರಿಷತ್ ವಿರೋಧ ಪಕ್ಷದ ನಾಯಕ ಬಿ.ಕೆ.ಹರಿಪ್ರಸಾದ್ ಅವರು ಯಾತ್ರೆಯ ಸಿದ್ಧತೆಗಳ ಕುರಿತು ದಿಗ್ವಿಜಯ್ ಸಿಂಗ್ ಸಮಿತಿಯ ಹಿರಿಯ ನಾಯಕರೊಂದಿಗೆ ಸಭೆ ನಡೆಸಿದರು.

 ಕಾಶ್ಮೀರದಿಂದ ಕನ್ನಿಯಾಕುಮಾರಿಗೆ ನಡೆಯುವ ಒಂದು ತಿಂಗಳ ಯಾತ್ರೆಗೆ ಎಲ್ಲಾ ರೀತಿಯ ಸಿದ್ಧತೆಗಳನ್ನು ಆರಂಭಿಸಲಾಗಿದೆ ಎಂದು ಸಲೀಂ ಅಹ್ಮದ್ ಅವರು ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT