ರಾಜಕೀಯ

ಮಳೆ ನಡುವೆಯೇ ಜೆಡಿಎಸ್ ಪಂಚರತ್ನ ರಥಯಾತ್ರೆಗೆ ದೇವೇಗೌಡ ಚಾಲನೆ

Nagaraja AB

ಕೋಲಾರ: ಜೆಡಿಎಸ್ ಪಂಚರತ್ನ ರಥಯಾತ್ರೆಗೆ ಮಾಜಿ ಪ್ರಧಾನಮಂತ್ರಿ ಹೆಚ್. ಡಿ. ದೇವೇಗೌಡರು ಮಂಗಳವಾರ ಚಾಲನೆ ನೀಡಿದ್ದಾರೆ. 

ಮೂಡಣಬಾಗಿಲು ಕುರುಡು ಮಲೆಯ ಗಣಪತಿಗೆ ಭಾರೀ ಮಳೆ ನಡುವೆ ಹೋಮ, ಪೂಜೆ ಸಲ್ಲಿಸಿ ಜೆಡಿಎಸ್ ಮಹತ್ವಾಕಾಂಕ್ಷೆಯ ಪಂಚರತ್ನ ರಥಯಾತ್ರೆ ಹಾಗೂ ಚುನಾವಣಾ ಪ್ರಚಾರಕ್ಕೆ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಹೆಚ್. ಡಿ. ದೇವೇಗೌಡ ಅವರು ಅಧಿಕೃತವಾಗಿ ಚಾಲನೆ ನೀಡಿದರು.

ಎಚ್.ಡಿ. ಕುಮಾರಸ್ವಾಮಿ, ಅನಿತಾ ಕುಮಾರಸ್ವಾಮಿ ಸೇರಿದಂತೆ ಪಕ್ಷದ ಶಾಸಕರು, ಟಿಕೆಟ್ ಆಕಾಂಕ್ಷಿಗಳು ಕಾರ್ಯಕ್ರಮದಲ್ಲಿ ಭಾಗಿಯಾದರು. ಪಂಚರತ್ನ ಯೋಜನೆ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದ್ದು, ಇದಕ್ಕಾಗಿ ಸುಸಜ್ಜಿತ ವಾಹನ ಸಿದ್ದಪಡಿಸಲಾಗಿದೆ. ಯಾತ್ರೆಯ ಉಸ್ತುವಾರಿಯನ್ನು ಆಯಾಯ ಕ್ಷೇತ್ರಗಳ ಅಭ್ಯರ್ಥಿಗಳಿಗೆ ವಹಿಸಲಾಗಿದೆ. 

1994ರಲ್ಲಿ ಎಚ್.ಡಿ. ದೇವೇಗೌಡರ ನೇತೃತ್ವದಲ್ಲಿ ಮುಳಬಾಗಿಲು ತಾಲೂಕಿನ ಕುರುಡು ಮಲೆಯ ಗಣಪತಿಗೆ ಪೂಜೆ ಸಲ್ಲಿಸಿ ಚುನಾವಣಾ ಪ್ರಚಾರವನ್ನು ಆರಂಭಿಸಲಾಗಿತ್ತು. ಆಗ ಪಕ್ಷ ಅಧಿಕಾರಕ್ಕೆ ಬಂದಿತ್ತು.

SCROLL FOR NEXT