ಬಿಜೆಪಿ ಸೇರ್ಪಡೆ ಕಾರ್ಯಕ್ರಮ 
ರಾಜಕೀಯ

ಮಾಜಿ‌ ಸಂಸದ ಎಸ್​.ಪಿ.ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್, ಅನಿಲ್ ​ಕುಮಾರ್​ ಬಿಜೆಪಿ ಸೇರ್ಪಡೆ

ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ಬೆಂಗಳೂರು: ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ, ಚಿತ್ರದುರ್ಗ ಮಾಜಿ ಸಂಸದ ನಟ ಶಶಿಕುಮಾರ್ ಮತ್ತು ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಗುರುವಾರ ಅಧಿಕೃತವಾಗಿ ಬಿಜೆಪಿ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ.

ತುಮಕೂರು ಲೋಕಸಭಾ ಕ್ಷೇತ್ರದ ಮಾಜಿ‌ ಸಂಸದ ಎಸ್​.ಪಿ. ಮುದ್ದಹನುಮೇಗೌಡ ಮತ್ತು ಚಿತ್ರದುರ್ಗ ಕ್ಷೇತ್ರದ ಮಾಜಿ ಸಂಸದರೂ ಆದ ನಟ ಶಶಿಕುಮಾರ್ ಇಂದು(ಗುರುವಾರ) ಬಿಜೆಪಿ ಸೇರ್ಪಡೆಯಾದರು. ನಗರದ ಬಿಜೆಪಿ ಕೇಂದ್ರ ಕಚೇರಿಯಲ್ಲಿ ಇಬ್ಬರಿಗೂ ಬಿಜೆಪಿ ಶಾಲು ಹೊದಿಸಿ, ಬಿಜೆಪಿ ಬಾವುಟ ಕೈಗೆ ಕೊಟ್ಟು ಸಿಎಂ ಬಸವರಾಜ ಬೊಮ್ಮಾಯಿ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್​ಕುಮಾರ್​ ಕಟೀಲ್​ ಅವರು ಸ್ವಾಗತಿಸಿದರು.

ಇದೇ ವೇಳೆ ನಿವೃತ್ತ ಐಎಎಸ್ ಅಧಿಕಾರಿ ಅನಿಲ್ ಕುಮಾರ್ ಕೂಡ ಬಿಜೆಪಿಗೆ ಸೇರ್ಪಡೆಯಾದರು. ಸಚಿವರಾದ ಅಶ್ವಥ್ ನಾರಾಯಣ್, ಎಸ್.ಟಿ. ಸೋಮಶೇಖರ್, ಗೋವಿಂದ ಕಾರಜೋಳ, ಮಾಜಿ ಡಿಸಿಎಂ ಲಕ್ಷ್ಮಣ್ ಸವದಿ ಹಾಗೂ ಶಾಸಕರಾದ ಮಸಾಲೆ ಜಯರಾಂ, ಸಿ.ಪಿ.ಯೋಗೀಶ್ವರ್, ರಾಜ್ಯಸಭಾ ಸದಸ್ಯ ಜಗ್ಗೇಶ್, ರಾಜ್ಯ ಬಿಜೆಪಿ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಉಪಸ್ಥಿತರಿದ್ದರು.

ಕಳೆದ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್​ನಿಂದ ಕೈ ಟಿಕೆಟ್​ ತಪ್ಪಿದ್ದಕ್ಕೆ ಅಸಮಾಧಾನಗೊಂಡ ಮುದ್ದಹನುಮೇಗೌಡರು ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕುಣಿಗಲ್ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಅಖಾಡಕ್ಕೆ ಇಳಿಯಲು ನಿರ್ಧರಿಸಿದ್ದಾರೆ. ಇನ್ನು ನಟ ಶಶಿಕುಮಾರ್ ಅವರು ಚಳ್ಳಕೆರೆ ವಿಧಾನಸಭಾ ಕ್ಷೇತ್ರಕ್ಕೆ ಬಿಜೆಪಿ ಟಿಕೆಟ್ ಬಯಸಿದ್ದಾರೆ. ಅನಿಲ್ ಕುಮಾರ್ ಅವರು ಕೊರಟಗೆರೆ ಕ್ಷೇತ್ರದಿಂದ ಸ್ಪರ್ಧಿಸಲು ಬಯಸಿದ್ದಾರೆ ಎನ್ನಲಾಗಿದೆ.
 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನಿರ್ಬಂಧದ ಹೊರತಾಗಿಯೂ ರಷ್ಯಾದಲ್ಲಿ ಇಳಿದ ಅಮೆರಿಕದ C-17 ಮಿಲಿಟರಿ ವಿಮಾನ: ಮಿಷನ್ ಮಾತ್ರ ನಿಗೂಢ!

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

2nd Test: ‘ಶ್ರೀಲಂಕಾ ಆಟಗಾರರ ವರ್ತನೆ ವೃತ್ತಿಪರವಾಗಿರಲಿಲ್ಲ’: ಬ್ಯಾಡ್ ಲೈಟ್ ವಿವಾದಕ್ಕೆ Sanjay Manjrekar ಕಿಡಿ

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel