ಮುದ್ದಹನುಮೇಗೌಡ 
ರಾಜಕೀಯ

ಕಾಂಗ್ರೆಸ್ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಬಿಜೆಪಿ ಸೇರ್ಪಡೆ

ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ತುಮಕೂರಿನ ಮಾಜಿ ಸಂಸದ ಎಸ್‌ ಪಿ ಮುದ್ದಹನುಮೇಗೌಡ ಇಂದು ಕಾಂಗ್ರೆಸ್‌ ತೊರೆದು ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಬೆಂಗಳೂರು:  ಹಿರಿಯ ಕಾಂಗ್ರೆಸ್‌ ಮುಖಂಡ ಹಾಗೂ ತುಮಕೂರಿನ ಮಾಜಿ ಸಂಸದ ಎಸ್‌ ಪಿ ಮುದ್ದಹನುಮೇಗೌಡ ಇಂದು ಕಾಂಗ್ರೆಸ್‌ ತೊರೆದು ಆಡಳಿತಾರೂಢ ಬಿಜೆಪಿಗೆ ಅಧಿಕೃತವಾಗಿ ಸೇರ್ಪಡೆಯಾಗಲಿದ್ದಾರೆ.

ಕಾಂಗ್ರೆಸ್ ಪಕ್ಷ ತೊರೆದಿರುವ ಮಾಜಿ ಸಂಸದ ಮುದ್ದಹನುಮೇಗೌಡ ಇಂದು ಅಧಿಕೃತವಾಗಿ ಭಾರತೀಯ ಜನತಾ ಪಕ್ಷ ಸೇರ್ಪಡೆಯಾಗಲಿದ್ದಾರೆ. ರಾಜ್ಯ ಬಿಜೆಪಿ ಕಚೇರಿ ಜಗನ್ನಾಥ ಭವನದಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ‌, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಮಾಧುಸ್ವಾಮಿ ಸಮ್ಮುಖದಲ್ಲಿ ಸೇರ್ಪಡೆ ಕಾರ್ಯಕ್ರಮ ನಡೆಯಲಿದೆ. ಬಿಜೆಪಿ ನಾಯಕರು ಕುಣಿಗಲ್ ವಿಧಾನಸಭಾ ಕ್ಷೇತ್ರಕ್ಕೆ ಟಿಕೆಟ್ ನೀಡುವ ಭರವಸೆ ನೀಡಿದ ಹಿನ್ನೆಲೆಯಲ್ಲಿ ಅವರು ಈ ನಿರ್ಧಾರ ತೆಗೆದುಕೊಂಡಿದ್ದಾರೆ ಎಂಬ ಮಾಹಿತಿ ದೊರೆತಿದೆ.

ಇನ್ನೂ ಬಿಜೆಪಿ ಸೇರಲು ತಾವು ಯಾವುದೇ ಷರತ್ತು ವಿಧಿಸಿಲ್ಲ. ಮೊದಲು ಕಾಂಗ್ರೆಸ್‌ನಲ್ಲಿದ್ದ ಮುದ್ದಹನುಮೇಗೌಡ ನಂತರ ರಾಜಕೀಯ ಕಾರಣಗಳಿಂದಾಗಿ ಜೆಡಿಎಸ್ ಸೇರಿದ್ದರು. ಬದಲಾದ ಸನ್ನಿವೇಶದಲ್ಲಿ ಕಾಂಗ್ರೆಸ್‌ಗೆ ಮರಳಿದ್ದರು.

ಕಳೆದ ಬಾರಿ ನಡೆದ ಲೋಕಸಭೆ ಚುನಾವಣೆಯಲ್ಲಿ ತುಮಕೂರು ಕ್ಷೇತ್ರವನ್ನು ಮೈತ್ರಿ ಪಕ್ಷವಾದ ಜೆಡಿಎಸ್‌ಗೆ ಬಿಟ್ಟು ಕೊಟ್ಟಿದ್ದರಿಂದ ಮುದ್ದಹನುಮೇಗೌಡ ಚುನಾವಣೆಯಲ್ಲಿ ಸ್ಪರ್ಧಿಸಿರಲಿಲ್ಲ. ಮುದ್ದಹನುಮೇಗೌಡ ಕಾಂಗ್ರೆಸ್ ನಿಂದ ದೂರ ಉಳಿದಿದ್ದು, ದೇವೇಗೌಡರನ್ನು ಸೋಲಿಸಲು ಕಾಂಗ್ರೆಸ್ ನ ಮಾಜಿ ಶಾಸಕ ಕೆ.ಎನ್ .ರಾಜಣ್ಣ ಜತೆ ಕೈ ಜೋಡಿಸಿದ್ದರು ಎಂಬ ಆರೋಪವೂ ಕೇಳಿ ಬಂದಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಸಂಪುಟ ಸಲಹೆ ಮೇರೆಗೆ KPSC ಅಧ್ಯಕ್ಷ ಸಾಹುಕಾರ್ ರನ್ನು ಮತ್ತೆ ಅಮಾನತು ಮಾಡಿದ ರಾಜ್ಯಪಾಲ ಗೆಹ್ಲೋಟ್!

SIR ವೇಳೆ 1.08 ಕೋಟಿಗೂ ಅಧಿಕ ಮತದಾರರು ASDDO ಪಟ್ಟಿಗೆ: ಆಕ್ಷೇಪಣೆ ಸಲ್ಲಿಕೆ ಅವಧಿ ವಿಸ್ತರಿಸಬೇಕು- CECಗೆ ಸಿಎಂ ಶಿವಕುಮಾರ್ ಪತ್ರ!

ಕನಸು ಕೊನೆಗೂ ನನಸು: ಲಿಂಗ ಬದಲಿಸಿಕೊಂಡಿದ್ದ Anaya Bangarಗೆ ಕ್ರಿಕೆಟ್‌ಗೆ ಮರಳಲು ಗ್ರೀನ್ ಸಿಗ್ನಲ್!

ರಾಜ್ಯದಲ್ಲಿ ಮಳೆ ಅಭಾವ: ನಾಲ್ಕು ಕಂದಾಯ ವಿಭಾಗಗಳಲ್ಲಿ ಮೋಡ ಬಿತ್ತನೆ; 27 ಕೋಟಿ ರೂ ವೆಚ್ಚ- ಜಲ ಸಂಪನ್ಮೂಲ ಸಚಿವ ಚಲುವರಾಯಸ್ವಾಮಿ!

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!