ಸಿದ್ದರಾಮಯ್ಯ 
ರಾಜಕೀಯ

ಶಾಲಾ-ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ 10 ನಿಮಿಷ ಧ್ಯಾನ ಕಡ್ಡಾಯ ಆದೇಶ: ಸರ್ಕಾರದ ವಿರುದ್ಧ ಸಿದ್ದರಾಮಯ್ಯ ವಾಗ್ದಾಳಿ

ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರು: ಇತ್ತೀಚೆಗಷ್ಟೇ ಶಾಲೆಗಳಲ್ಲಿ ಧ್ಯಾನ ಅಳವಡಿಕೆಗೆ ಆದೇಶ ನೀಡಿರುವ ಶಿಕ್ಷಣ ಸಚಿವ ಬಿ.ಸಿ.ನಾಗೇಶ್ ವಿರುದ್ಧ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ ಅವರು, ಶಾಲಾ ಶಿಕ್ಷಣಕ್ಕೆ ಸಂಬಂಧಿಸಿದ ಹೆಚ್ಚು ಒತ್ತುವ ನೀಡುವ ವಿಷಯಗಳ ಮೇಲೆ ಕೇಂದ್ರೀಕರಿಸುವ ಬದಲು ಧ್ಯಾನವನ್ನು ಜಾರಿಗೆ ತರುವ ಸಚಿವರ ನಿರ್ಧಾರವನ್ನು ಟೀಕಿಸಿದ್ದಾರೆ.

ಯೋಗ-ಧ್ಯಾನ ಯಾವುದಕ್ಕೂ ನನ್ನ ವಿರೋಧ ಇಲ್ಲ. ಆದರೆ ಶಾಲೆಗಳಲ್ಲಿ ಯಾವುದು ಮುಖ್ಯ, ಶಿಕ್ಷಣ ಸಚಿವ ಯಾವುದಕ್ಕೆ ಆದ್ಯತೆ ನೀಡಬೇಕೆನ್ನುವುದಷ್ಟೇ ಪ್ರಶ್ನೆ. ಒಂದೆಡೆ ಶಾಲೆ ನಡೆಸಲು ಸಾರ್ವಜನಿಕರಿಂದ ಭಿಕ್ಷೆ ಬೇಡುತ್ತಿರುವ ಬಿಜೆಪಿ ಸರ್ಕಾರ ಇನ್ನೊಂದೆಡೆ ದಿನಕ್ಕೊಂದರಂತೆ ಗಿಮಿಕ್ ಗಳನ್ನು ಮಾಡುತ್ತಿರುವುದು ಖಂಡನೀಯ ಎಂದು ಹೇಳಿದ್ದಾರೆ.

ರಾಜ್ಯದಲ್ಲಿ ಬಿಸಿ ನಾಗೇಶ್ ಅವರು ಶಿಕ್ಷಣ ಸಚಿವರಾದ ದಿನದಿಂದ ಪಠ್ಯಪುಸ್ತಕ ವಿವಾದದಿಂದ ಹಿಡಿದು ಶಾಲಾ ಶಿಕ್ಷಕರ ನೇಮಕದ ವರೆಗೆ ಬರೀ ಹಗರಣಗಳಲ್ಲೇ ಈಜಾಡುತ್ತಿದ್ದಾರೆ. ಅವರ ಮನಸ್ಸು ಸ್ಥಿಮಿತದಲ್ಲಿದ್ದ ಹಾಗಿಲ್ಲ, ನಿಜವಾಗಿ ಯೋಗ ಮತ್ತು ಧ್ಯಾನದ ಅಗತ್ಯ ಎಲ್ಲರಿಗಿಂತ ಹೆಚ್ಚಾಗಿ ಶಿಕ್ಷಣ ಸಚಿವರಿಗಿದೆ.

ಕೊರೊನಾವನ್ನು ಸರಿಯಾಗಿ ನಿಯಂತ್ರಿಸಲಾಗದೆ ಶಾಲೆಗಳನ್ನು ಮುಚ್ಚಿ, ಆನ್ ಲೈನ್ ತರಗತಿಗಳ ಮೂಲಕ ವಿದ್ಯಾರ್ಥಿಗಳಲ್ಲಿ ಮೊಬೈಲ್ ಹುಚ್ಚು ಹತ್ತಿಸಿರುವ ಬಿಜೆಪಿ ಸರ್ಕಾರ, ಈಗ ಆ ಹುಚ್ಚು ಬಿಡಿಸಲು ಧ್ಯಾನ ನಡೆಸಲು ಮುಂದಾಗಿರುವುದು ಹುಚ್ಚುತನವಲ್ಲದೆ ಮತ್ತೇನು?

ಎಳೆಯ ಮಕ್ಕಳು ಆಡುತ್ತಾ, ಕುಣಿಯುತ್ತಾ ಪಾಠ ಓದಬೇಕು. ಇದರ ಬದಲಿಗೆ ಅವರನ್ನು ಕೋಣೆಯಲ್ಲಿ ಕೂಡಿ ಹಾಕಿ ಬಲಾತ್ಕಾರವಾಗಿ ಯೋಗ-ಧ್ಯಾನಗಳ ಕಸರತ್ತು ಮಾಡಿಸಿದರೆ ಮಾನಸಿಕವಾಗಿ ಮತ್ತು ದೈಹಿಕವಾಗಿ ಅವರು ಇನ್ನಷ್ಟು ಕುಗ್ಗಿಹೋಗುತ್ತಾರೆ.

ಮೊದಲು ಶಾಲೆಗಳಲ್ಲಿ ಅಗತ್ಯ ಸಂಖ್ಯೆಯಲ್ಲಿ ಶಿಕ್ಷಕರನ್ನು ನೇಮಿಸಿ ಅವಶ್ಯಕವಾದ ಬೋದನಾ ಸಲಕರಣೆಗಳನ್ನು ಬಿಜೆಪಿ ಸರ್ಕಾರ ಒದಗಿಸಬೇಕು. ಪ್ರತಿಶಾಲೆಯಲ್ಲಿ ಕಲೆ, ಸಂಗೀತ ಮತ್ತು ಕ್ರೀಡೆಗಳಲ್ಲಿ ತರಬೇತಿ ನೀಡುವ ಶಿಕ್ಷಕರನ್ನು ನೇಮಿಸಬೇಕು. ಇದನ್ನು ಬಿಟ್ಟು ತಮ್ಮ ರಾಜಕೀಯ ಅಜೆಂಡಾಕ್ಕಾಗಿ ಮಕ್ಕಳ ಬದುಕಿನಲ್ಲಿ ಚೆಲ್ಲಾಟವಾಡಬಾರದು ಎಂದು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

'ಸದನದಲ್ಲಿ ಹುಲಿ, ಹೈಕಮಾಂಡ್‌ ಮುಂದೆ ಇಲಿ'.. 'ಅಧಿಕಾರದಲ್ಲಿ ಉಳಿಯಲು DK Shivakumar ಕ್ಷಮೆಯಾಚನೆ': BJP-JDS ಟೀಕಾ ಪ್ರಹಾರ!

RSS ಅನ್ನು ಯಾರೂ "ಸಮರ್ಥಿಸಿಕೊಳ್ಳಬಾರದು": ಡಿಕೆಶಿ ಕ್ಷಮೆಯಾಚನೆ ಸ್ವಾಗತಿಸಿದ ಬಿ.ಕೆ ಹರಿಪ್ರಸಾದ್

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

Indian Stock Market: ಸತತ ಕುಸಿತ, ಬರೊಬ್ಬರಿ ಶೇ.1ರಷ್ಟು ಕುಸಿದ Sensex, Nifty 50, ರೂಪಾಯಿ ಮೌಲ್ಯ ಇಳಿಕೆ!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

SCROLL FOR NEXT