ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಕಾಂಗ್ರೆಸ್, ಜೆಡಿಎಸ್‌ನಲ್ಲಿನ ಆಂತರಿಕ ಕಲಹ ಚುನಾವಣೆಯಲ್ಲಿ ಬಿಜೆಪಿಗೆ ನೆರವಾಗಲಿದೆ: ನಳಿನ್ ಕುಮಾರ್ ಕಟೀಲ್

ಕಾಂಗ್ರೆಸ್, ಜೆಡಿಎಸ್‌ನಲ್ಲಿನ ಆಂತರಿಕ ಕಲಹದಿಂದ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಮೈಸೂರು: ಕಾಂಗ್ರೆಸ್, ಜೆಡಿಎಸ್‌ನಲ್ಲಿನ ಆಂತರಿಕ ಕಲಹದಿಂದ ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸಹಾಯವಾಗಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶುಕ್ರವಾರ ಹೇಳಿದ್ದಾರೆ.

ಸಂಕಲ್ಪ ಯಾತ್ರೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ ಅವರ ವಿರುದ್ಧದ ಭ್ರಷ್ಟಾಚಾರ ಪ್ರಕರಣಗಳ ವಿಚಾರಣೆಯನ್ನು ತ್ವರಿತಗೊಳಿಸಲಾಗಿದೆ. ಅರ್ಕಾವತಿ ಡಿನೋಟಿಫಿಕೇಷನ್ ಪ್ರಕರಣದ ತನಿಖೆಯೂ ಆರಂಭವಾಗಿದ್ದು, ತನಿಖೆ ಪೂರ್ಣಗೊಂಡ ಬಳಿಕ ಸಿದ್ದರಾಮಯ್ಯ ರಾಜಕೀಯದಿಂದ ದೂರಾಗಲಿದ್ದಾರೆಂದು ಹೇಳಿದರು.

ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ನಡುವಿನ ಜಗಳ ತಾರಕಕ್ಕೇರಿದ್ದು, ಇದರಿಂದ ಕಾಂಗ್ರೆಸ್ ನಾಶಕ್ಕೆ ಕಾರಣವಾಗಲಿದೆ ಎಂದು ತಿಳಿಸಿದರು.

ಸಿದ್ದರಾಮಯ್ಯನವರನ್ನು ಕಂಡರೆ ಖರ್ಗೆ, ಡಿ.ಕೆ.ಶಿವಕುಮಾರ್‌ಗೆ ಆಗುತ್ತಿಲ್ಲ. ಪಕ್ಷದಲ್ಲಿ ಅವರ ಬೆಳವಣಿಯನ್ನು ಇಬ್ಬರೂ ಸಹಿಸುವುದಿಲ್ಲ. ಸಿಎಂ ಹುದ್ದೆಗೆ ಸಿದ್ದರಾಮಯ್ಯರನ್ನು ಖರ್ಗೆ ಬೆಂಬಲಿಸುವುದೂ ಇಲ್ಲ. ಏಕೆಂದರೆ, ಕಳೆದ ಚುನಾವಣೆಯಲ್ಲಿ ಖರ್ಗೆ, ಪರಮೇಶ್ವರ್‌ ಸೋಲಿಗೆ ಸಿದ್ದರಾಮಯ್ಯನವರೇ ಕಾರಣ. ದಲಿತರೊಬ್ಬರು ಮುಖ್ಯಮಂತ್ರಿಯಾಗುವುದನ್ನು ತಪ್ಪಿಸಿದ ಸಿದ್ದರಾಮಯ್ಯ ದಲಿತರಿಗೆ ಅನ್ಯಾಯ ಮಾಡಿದರು. ಇನ್ನು ಮುಖ್ಯಮಂತ್ರಿ ಗದ್ದುಗೆ ಮೇಲೆ ಕಣ್ಣಿಟ್ಟಿರುವ ಡಿ.ಕೆ.ಶಿವಕುಮಾರ್‌ ಅವರು ಸಿದ್ದರಾಮಯ್ಯನವರು ಬೆಳವಣಿಗೆಗೆ ಅಡ್ಡಿಯಾಗಲಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಶೀಘ್ರ ವಿಭಜನೆಯಾಗುವ ಎಲ್ಲಾ ಲಕ್ಷಣಗಳಿವೆ ಎಂದರು.

ಫೆಬ್ರವರಿ ವೇಳೆಗೆ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡೂ ಪಕ್ಷಗಳಲ್ಲಿಯೂ ನಾಯಕರೇ ಇರುವುದಿಲ್ಲ, ಹಲವು ನಾಯಕರು ಎರಡು ಪಕ್ಷಗಳನ್ನು ತೊರೆದು ಬಿಜೆಪಿ ಸೇರಲಿದ್ದಾರೆ, ನಮ್ಮ ಪಕ್ಷವು ಯಾರನ್ನೂ ಆಹ್ವಾನಿಸಿಲ್ಲ, ಆದರೆ ಅವರು ತಮ್ಮ ಸ್ವಂತ ಇಚ್ಛೆಯಿಂದ ಸೇರುತ್ತಿದ್ದಾರೆ ಎಂದು ಹೇಳಿದರು.

ಇದೇ ವೇಳೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರ ಹುಡುಕಾಟ ನಡೆಸುತ್ತಿರುವುದು ದುರಾದೃಷ್ಟಕರ ಸಂಗತಿ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ನ್ಯಾಯಾಂಗದಲ್ಲಿ ಭ್ರಷ್ಟಾಚಾರದ ಪಾಠ: ಕೇಂದ್ರ ಕ್ಷಮೆಯಾಚಿಸುತ್ತಿದ್ದಂತೆ NCERT ಪಠ್ಯ ಪುಸ್ತಕ ಬ್ಯಾನ್, ಪ್ರತಿಗಳನ್ನು ವಶಕ್ಕೆ ಪಡೆಯಲು ಸುಪ್ರೀಂ ಸೂಚನೆ

'ನಿಮ್ಮ ಭಾಷಣ ನಾಚಿಕೆಯಿಲ್ಲದೆ ಸಮರ್ಥನೆ ಮಾಡಿಕೊಂಡಂತೆ ಇತ್ತು': 1947ರ ಐನ್ ಸ್ಟೈನ್ ನೆಹರೂಗೆ ಬರೆದ ಪತ್ರ ಉಲ್ಲೇಖಿಸಿ Modi ಟೀಕಿಸಿದ ಕಾಂಗ್ರೆಸ್

Ranji Trophy final: ಔಕಿಬ್ ನಬಿ ಬೌಲಿಂಗ್ ಮ್ಯಾಜಿಕ್‌ಗೆ ಬೆರಗಾದ ಕೆಎಲ್ ರಾಹುಲ್; ಆರಂಭದಲ್ಲೇ ಕರ್ನಾಟಕಕ್ಕೆ ಸಂಕಷ್ಟ!

T20 World cup 2026: 'ಆಕ್ರಮಣಕಾರಿ ಶೈಲಿ ಮುಂದುವರಿಸಿ': ಜಿಂಬಾಬ್ವೆ ವಿರುದ್ಧದ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾಗೆ ಅನಿಲ್ ಕುಂಬ್ಳೆ ಎಚ್ಚರಿಕೆ

ರಿಯಲ್ ಲೈಫ್‌ನಲ್ಲೂ ಒಂದಾದ ರೀಲ್ ಜೋಡಿ: ತೆಲುಗು ಸಂಪ್ರದಾಯದಂತೆ ರಶ್ಮಿಕಾ–ವಿಜಯ್ ವಿವಾಹ, ಸಂಜೆ ಕೊಡವ ಸಂಪ್ರದಾಯದಲ್ಲಿ ಮತ್ತೊಂದು ಸಮಾರಂಭ

SCROLL FOR NEXT