ಸಿಎಂ ಬಸವರಾಜ ಬೊಮ್ಮಾಯಿ(ಸಂಗ್ರಹ ಚಿತ್ರ) 
ರಾಜಕೀಯ

ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಸುಳ್ಳು; ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಇದ್ದಂತೆ: ಸಿಎಂ ಬೊಮ್ಮಾಯಿ 

ಕಾಂಗ್ರೆಸ್ ನವರು ಹೇಳಿದ್ದು ಒಂದೂ ನಿಜವಾಗಲ್ಲ. ಮುಂದಿನ ಭಾರಿ ಅಧಿಕಾರಕ್ಕೆ ಬರುತ್ತೇವೆ ಎಂದು ಭ್ರಮೆಯಲ್ಲಿದ್ದಾರೆ. ಮುಂದಿನ ವರ್ಷ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಬೆಂಗಳೂರು: ಕಾಂಗ್ರೆಸ್ ನವರು ಹೇಳಿದ್ದು ಒಂದೂ ನಿಜವಾಗಲ್ಲ. ಮುಂದಿನ ಭಾರಿ ಅಧಿಕಾರಕ್ಕೆ ಬರುತ್ತೇವೆ ಎಂದು ಭ್ರಮೆಯಲ್ಲಿದ್ದಾರೆ. ಕಳೆದ ವಿಧಾನಸಭೆಯಲ್ಲಿ ಕಾಂಗ್ರೆಸ್ ನ 120ಕ್ಕೂ ಹೆಚ್ಚು ಜನ ಶಾಸಕರಿದ್ದರು. 5 ವರ್ಷ ಈ ರಾಜ್ಯದಲ್ಲಿ ಆಡಳಿತ ಮಾಡಿದರು. 2018ರ ವಿಧಾನಸಭೆ ಚುನಾವಣೆ ವೇಳೆ ನಾವೇ ಮುಂದಿನ ಬಾರಿ ಗೆಲ್ಲುತ್ತೇವೆ ಎಂದಿದ್ದರು, ಆದರೆ ಕಾಂಗ್ರೆಸ್ 77 ಸೀಟಿಗೆ ತೃಪ್ತಿಪಟ್ಟುಕೊಳ್ಳಬೇಕಾಯಿತು. ಮುಂದಿನ ವರ್ಷ ಚುನಾವಣೆಯಲ್ಲಿ ಕೂಡ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಉಡುಪಿಯಲ್ಲಿಂದು ಜನಸಂಕಲ್ಪ ಯಾತ್ರೆ ಆರಂಭಕ್ಕೆ ಮುನ್ನ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಯಡಿಯೂರಪ್ಪನವರು, ಕುಮಾರಸ್ವಾಮಿಯವರು ಮುಖ್ಯಮಂತ್ರಿ ಆಗಲಿಲ್ಲ ಎಂದು ಕಾಂಗ್ರೆಸ್ ನವರು ಹೇಳುತ್ತಿದ್ದರು, ಆದರೆ ಅವರಿಬ್ಬರೂ ಮುಖ್ಯಮಂತ್ರಿಗಳಾಗಿದ್ದಾರೆ. ಕಾಂಗ್ರೆಸ್ ನವರು ಅಧಿಕಾರ ನಡೆಸಿ ಕೊಟ್ಟಿರುವ ಕಾರ್ಯಕ್ರಮಗಳನ್ನು ಜನರು ತಿರಸ್ಕರಿಸಿದ್ದಾರೆ. ಕಾಂಗ್ರೆಸ್ ನವರ ಒಡೆದು ಆಳುವ ನೀತಿ, ಕರ್ನಾಟಕವನ್ನು ಅಧೋಗತಿಗೆ ತೆಗೆದುಕೊಂಡು ಹೋಗಿರುವುದಕ್ಕೆ ಯಾವ ಪರಿಸ್ಥಿತಿ ಬಂದಿದೆ ಎಂದು ನೋಡಬಹುದು. ಕಾಂಗ್ರೆಸ್ ನವರು ಹೇಳುವುದಕ್ಕೆ ತಲೆಕೆಡಿಸಿಕೊಳ್ಳುವ ಅಗತ್ಯವಿಲ್ಲ, ಅವರು ಹೇಳಿದ್ದು ಯಾವುದೂ ಆಗುವುದಿಲ್ಲ ಎಂದರು.

ಕಾಂಗ್ರೆಸ್ ಭ್ರಷ್ಟಾಚಾರದ ಗಂಗೋತ್ರಿ ಇದ್ಧಂತೆ. ಕಾಂಗ್ರೆಸ್ ನವರು 50 ವರ್ಷ ಪೂರ್ಣ ಭ್ರಷ್ಟ ಸರ್ಕಾರನೇ ಮಾಡಿರುವುದು. ಅವರ ಕಾಲದಲ್ಲಿ ಭ್ರಷ್ಟಾಚಾರ ದಾಖಲೆ ಪ್ರಮಾಣದಲ್ಲಿ ಆಗಿದೆ. ತಮ್ಮ ಭ್ರಷ್ಟಾಚಾರಗಳನ್ನು ಮುಚ್ಚಿಹಾಕಲು ನಮ್ಮ ಮೇಲೆ ಸುಳ್ಳು ಆರೋಪಗಳನ್ನು ಮಾಡುತ್ತಿದ್ದಾರೆ. ಅವರ ಆರೋಪ ಸಂಪೂರ್ಣ ಸುಳ್ಳಿನಿಂದ ಕೂಡಿದೆ, ಸುಳ್ಳು ಅಂದರೆ ಕಾಂಗ್ರೆಸ್, ಕಾಂಗ್ರೆಸ್ ಅಂದರೆ ಸುಳ್ಳು ಎಂದು ಟೀಕಿಸಿದರು.

ಕಾಂಗ್ರೆಸ್ ನ ಆರೋಪಕ್ಕೆ, ಕೇಳಿಬರುತ್ತಿರುವ ಕೇಸುಗಳ ಬಗ್ಗೆ ಮೂರ್ನಾಲ್ಕು ತನಿಖೆಗಳಿಗೆ ಸರ್ಕಾರ ಆದೇಶ ನೀಡಿದೆ. ಕಾನೂನು ಪ್ರಕಾರ ಕ್ರಮಗಳಾಗುತ್ತದೆ. 

ಎರಡನೇ ಸುತ್ತಿನ ಜನಸಂಕಲ್ಪ ಯಾತ್ರೆ: ಜನಸಂಕಲ್ಪ ಯಾತ್ರೆ ಕಲ್ಯಾಣ ಕರ್ನಾಟಕ ಭಾಗದಲ್ಲಿ ಮುಗಿಸಿ ಇಂದು ಕರಾವಳಿ ಭಾಗದಲ್ಲಿ ಆರಂಭವಾಗುತ್ತಿದೆ. ಪ್ರತಿ ಕ್ಷೇತ್ರಕ್ಕೂ ಹೋಗುತ್ತೇವೆ. ನಾಳೆ ಗದಗ, ಹಾವೇರಿ, ಬೆಳಗಾವಿಗೆ ಹೋಗುತ್ತೇವೆ. ಎರಡನೇ ಸುತ್ತಿನಲ್ಲಿ ಕರಾವಳಿ ಮತ್ತು ಮುಂಬೈ ಕರ್ನಾಟಕ ಭಾಗಕ್ಕೆ ಹೋಗುತ್ತಿದ್ದೇವೆ. ಪ್ರತಿಯೊಂದು ಕ್ಷೇತ್ರಕ್ಕೂ ಭೇಟಿ ಕೊಟ್ಟು ಪಕ್ಷದ ಸಂಘಟನೆ ಹಾಗೂ ಜನಸಂಘಟನೆ ಮಾಡುವ ಕೆಲಸ ಮಾಡುತ್ತೇವೆ. ಹೋದಲ್ಲಿ ಜನರ ಅಭೂತಪೂರ್ವ ಬೆಂಬಲ ಬಿಜೆಪಿಗೆ ಸಿಗುತ್ತಿದೆ, ಪಕ್ಷಕ್ಕೆ, ಕಾರ್ಯಕರ್ತರಲ್ಲಿ ಉತ್ಸಾಹ ಮೂಡುತ್ತಿದೆ ಎಂದು ಸಿಎಂ ಹೇಳಿದರು.

ಜನಸಂಕಲ್ಪ ಯಾತ್ರೆ ಮುಗಿದ ಮೇಲೆ ಉತ್ತರ ಮತ್ತು ದಕ್ಷಿಣ ದಿಕ್ಕಿನಿಂದ ರಥಯಾತ್ರೆ ಮಾಡುತ್ತೇವೆ. ರಾಜ್ಯದ ಎಲ್ಲಾ 224 ಕ್ಷೇತ್ರಗಳನ್ನು ಕೂಡ ತಲುಪುತ್ತೇವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದಲಿತ ಸಚಿವರ ನಿಯೋಗ ಭೇಟಿ ಬೆನ್ನಲ್ಲೇ SC ಒಳ ಮೀಸಲಾತಿ ಮಸೂದೆಗೆ ರಾಜ್ಯಪಾಲರ ಅಂಕಿತ

'ಸಂಘರ್ಷಕ್ಕೆ ಮಾನವೀಯತೆ ಬಲಿಯಾಗಬಾರದು': ಗಾಜಾ ಶಾಂತಿ ಯೋಜನೆಗೆ ಪ್ರಧಾನಿ ಮೋದಿ ಬೆಂಬಲ

AI, ಕೃಷಿ, ಸೈಬರ್ ಭದ್ರತೆ, UPI ಸೇರಿದಂತೆ ಸರಣಿ ಒಪ್ಪಂದಗಳಿಗೆ ಭಾರತ ಮತ್ತು ಇಸ್ರೇಲ್ ಸಹಿ

ಹೆಲಿಪ್ಯಾಡ್, ಸ್ವಿಮ್ಮಿಂಗ್ ಪೂಲ್, ಜಿಮ್: ಅನಿಲ್ ಅಂಬಾನಿಯ 3,716 ಕೋಟಿ ರೂ. ಬೆಲೆಬಾಳುವ 17 ಅಂತಸ್ತಿನ ಕಟ್ಟಡ 'Abode ಇಡಿ ವಶಕ್ಕೆ!

T20 World Cup 2026: ವೆಸ್ಟ್ ಇಂಡೀಸ್ ವಿರುದ್ಧ ದಕ್ಷಿಣ ಆಫ್ರಿಕಾಕ್ಕೆ ಭರ್ಜರಿ ಜಯ; ಈ ಗೆಲುವಿಗಾಗಿ ಪರಿತಪಿಸುತ್ತಿತ್ತು ಭಾರತ!

SCROLL FOR NEXT