ರಾಜಕೀಯ

ಗುಜರಾತ್ ನಂತೆ ಕರ್ನಾಟಕದಲ್ಲೂ ಹಿರಿಯರು ಚುನಾವಣೆಯಿಂದ ಹಿಂದೆ ಸರಿದು ಯುವಕರಿಗೆ ದಾರಿ ಮಾಡಿಕೊಡಬೇಕು: ಬಿಜೆಪಿ ಸಂಸದ

Manjula VN

ಬೆಂಗಳೂರು: 2023 ರಾಜ್ಯ ವಿಧಾನಸಭೆ ಚುನಾವಣೆಗೆ ಆಡಳಿತಾರೂಢ ಬಿಜೆಪಿ ಸಕಲ ಸಿದ್ಧತೆಗಳನ್ನು ಮಾಡಿಕೊಳ್ಳುತ್ತಿದ್ದು, ಈ ನಡುವಲ್ಲೇ ಬಿಜೆಪಿ ರಾಜ್ಯಸಭಾ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರು, ಗುಜರಾತ್ ರಾಜ್ಯದಂತೆ ಕರ್ನಾಟಕದಲ್ಲೂ ಪಕ್ಷದ ಹಿರಿಯ ನಾಯಕರು ಚುನಾವಣೆಯಿಂದ ಹಿಂದೆ ಸರಿದು ಯುವಕರಿಗೆ ದಾರಿ ಮಾಡಿಕೊಡಬೇಕೆಂದು ಹೇಳಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, ಗುಜರಾತ್ ಮಾಜಿ ಮುಖ್ಯಮಂತ್ರಿ ವಿಜಯ್ ರೂಪಾನಿ, ಮಾಜಿ ಉಪಮುಖ್ಯಮಂತ್ರಿ ನಿತಿನ್‍ ಭಾಯ್ ಪಟೇಲ್, ಮಾಜಿ ಸಚಿವರಾದ ಭೂಪೇಂದ್ರ ಸಿನ್ಹಾ ಮತ್ತು ಪ್ರದೀಪ್‍ಸಿಂಗ್ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸದಿರಲು ತೀರ್ಮಾನಿಸಿದ್ದಾರೆ. ಈ ತೀರ್ಮಾನವು ಕರ್ನಾಟಕಕ್ಕೂ ಮಾದರಿಯಾಗಬೇಕು' ಎಂದು ಹೇಳಿದ್ದಾರೆ.

ಈ ಮೂಲಕ ಪರೋಕ್ಷವಾಗಿ ಕರ್ನಾಟಕ ಹಿರಿಯ ರಾಜಕೀಯ ನಾಯಕರು ಚುನಾವಣೆಯಿಂದ ಹಿಂದೆ ಸರಿದು ಯುವಕರಿಗೆ ಅವಕಾಶ ಮಾಡಿಕೊಡಬೇಕು ಎನ್ನುವ ಅರ್ಥದಲ್ಲಿ ಹೇಳಿದ್ದಾರೆ.

ಇಂದು ರಾಜ್ಯಕ್ಕೆ ಮೋದಿ ಭೇಟಿ ಬೆನ್ನಲ್ಲೇ ಈ ಟ್ವೀಟ್​ ಸಂಚಲನ ಮೂಡಿಸಿದ್ದು, ರಾಜ್ಯ ಬಿಜೆಪಿಯ ಮಾಜಿ ಸಿಎಂಗಳು, ಮಾಜಿ ಡಿಸಿಎಂಗಳು, ಮಾಜಿ ಸಚಿವರು ಚುನಾವಣೆಗೆ ಸ್ಪರ್ಧಿಸದಂತೆ ಪರೋಕ್ಷವಾಗಿ ಹೇಳಿದಂತಿದೆ.

ಮುಂದಿನ ವರ್ಷದ ಆರಂಭದಲ್ಲಿ ರಾಜ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿದ್ದು, ಚುನಾವಣೆ ಸಿದ್ಧತೆಯಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂ ಬಿಎಸ್ ಯಡಿಯೂರಪ್ಪ ಸೇರಿದಂತೆ ಹಿರಿಯ ನಾಯಕರು ‘ಜನ ಸಂಕಲ್ಪ ಯಾತ್ರೆ’ ಆರಂಭಿಸಿದ್ದಾರೆ.

SCROLL FOR NEXT