ಹೆಚ್. ಡಿ. ದೇವೇಗೌಡ, ಪ್ರತಿಮೆ ಅನಾವರಣ ಸಮಾರಂಭದ ಚಿತ್ರ 
ರಾಜಕೀಯ

ನಾಡಪ್ರಭು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ: ದೇವೇಗೌಡರಿಗೆ ಇಲ್ಲ ಆಹ್ವಾನ, ಜೆಡಿಎಸ್ ತೀವ್ರ ಆಕ್ರೋಶ

ಬೆಂಗಳೂರು ನಗರ ನಿರ್ಮಾತೃ  ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರನ್ನು ಆಹ್ವಾನಿಸದಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಬೆಂಗಳೂರು: ಬೆಂಗಳೂರು ನಗರ ನಿರ್ಮಾತೃ  ನಾಡಪ್ರಭು ಕೆಂಪೇಗೌಡರ 108 ಅಡಿ ಎತ್ತರದ ಭವ್ಯ ಕಂಚಿನ ಪ್ರಗತಿ ಪ್ರತಿಮೆಯನ್ನು ಪ್ರಧಾನಿ ನರೇಂದ್ರ ಮೋದಿ ಇಂದು ಲೋಕಾರ್ಪಣೆಗೊಳಿಸಿದ್ದಾರೆ. ಆದರೆ, ಈ ಕಾರ್ಯಕ್ರಮಕ್ಕೆ ಮಾಜಿ ಪ್ರಧಾನಿ ಹೆಚ್. ಡಿ. ದೇವೇಗೌಡರನ್ನು ಆಹ್ವಾನಿಸದಿರುವುದಕ್ಕೆ ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್, ನಾಡಪ್ರಭು ಕೆಂಪೇಗೌಡರ ನಂತರ ಬೆಂಗಳೂರು ಅಭಿವೃದ್ಧಿಗೆ ಮಹತ್ತರ ಕೊಡುಗೆ ನೀಡಿದ,ಕನ್ನಡ ನೆಲದಿಂದ ಪ್ರಧಾನಿ ಆಗಿದ್ದ ಏಕೈಕ ಕನ್ನಡಿಗ ಹೆಚ್. ಡಿ. ದೇವೇಗೌಡರನ್ನು ಕೆಂಪೇಗೌಡರ ಪ್ರತಿಮೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ರಾಜ್ಯ ಸರ್ಕಾರ ಆಹ್ವಾನ ಮಾಡದಿರುವುದು ಸಮಸ್ತ ಕನ್ನಡಿಗರಿಗೆ ಮಾಡಿದ ಅಪಮಾನ ಎಂದು ಕಿಡಿಕಾರಿದೆ. ನಾಡಪ್ರಭು ಪ್ರತಿಮೆ ಸ್ಥಾಪನೆ ಕಾಮಗಾರಿಗೆ ಅಡಿಗಲ್ಲು ಹಾಕುವ ಕಾರ್ಯಕ್ರಮಕ್ಕೆ ಹೆಚ್ ಡಿ ದೇವೇಗೌಡರನ್ನು ಆಹ್ವಾನಿಸಿದ ಬಿಜೆಪಿ ಸರ್ಕಾರ, ಅದೇ ಪ್ರಧಾನಿಗಳಿಂದ ಪ್ರತಿಮೆ ಲೋಕಾರ್ಪಣೆ ಮಾಡಿಸುವ ಸಮಾರಂಭಕ್ಕೆ ಯಾಕೆ ಆಹ್ವಾನ ಮಾಡಲಿಲ್ಲ ಎಂದು ಪ್ರಶ್ನಿಸಿದೆ.

ಯಾವುದೋ ಸ್ಥಳೀಯ ಮಟ್ಟದ ಕಾರ್ಯಕ್ರಮ ಆಗಿದ್ದಿದ್ದರೆ ಯಾರೂ ಪ್ರಶ್ನೆ ಮಾಡುತ್ತಿರಲಿಲ್ಲ. ಆದರೆ, ನಾಡಪ್ರಭುಗಳ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ಪ್ರಧಾನಿಗಳೇ ಬರುತ್ತಾರೆ ಎಂದರೆ, ನಮ್ಮ ಹೆಮ್ಮೆಯ ಮಾಜಿ ಪ್ರಧಾನಿಗಳನ್ನು ಅಧಿಕೃತವಾಗಿ ಕರೆಯಲೇಬೇಕಿತ್ತು. ಅವರ ಬಗ್ಗೆ ಅನಾದರ ತೋರಿದ್ದು ಕನ್ನಡಿಗರಿಗೆ ಅಪಾರ ನೋವುಂಟು ಮಾಡಿದೆ. ರಾಜ್ಯ ಬಿಜೆಪಿ   ಸರಕಾರ ಬಿಜೆಪಿ ನಾಯಕರು ರಾಜಕೀಯ ಕಾರಣಕ್ಕಾಗಿ ಮಾಜಿ ಪ್ರಧಾನಿಗಳನ್ನು ಕಡೆಗಣಿಸಿದ್ದಾರೆ ಎನ್ನುವುದು ಎಲ್ಲರ ಭಾವನೆ. ಇದನ್ನು ಬಿಜೆಪಿ ಪಕ್ಷದ ಕಾರ್ಯಕ್ರಮದಂತೆ ನಡೆಸಿದ್ದು ಮಾಜಿ ಪ್ರಧಾನಿಗಳಿಗೆ ಮಾತ್ರವಲ್ಲ, ಸಮಸ್ತ ಕನ್ನಡಿಗರು ಹಾಗೂ ಸ್ವತಃ ನಾಡಪ್ರಭುಗಳಿಗೇ ಮಾಡಿದ  ಅಪಮಾನ. ಇದು ಅಕ್ಷಮ್ಯದ ಪರಮಾವಧಿ ಎಂದು ಆಕ್ರೋಶ ವ್ಯಕ್ತಪಡಿಸಿದೆ. 

ಸರ್ವ ಜನರನ್ನು ಸಮಾನವಾಗಿ ಕಂಡು ಆದರ್ಶ ಪ್ರಭುವಾಗಿದ್ದ ನಾಡಪ್ರಭು ಕೆಂಪೇಗೌಡರನ್ನು ರಾಜಕೀಯಕ್ಕೆ ಎಳೆಯುವ ಕೆಲಸವನ್ನು ಸ್ವತಃ ಪ್ರಧಾನಿ  ನರೇಂದ್ರ ಮೋದಿ ಅವರೇ ಮಾಡಿರುವುದು ಸ್ಪಷ್ಟ. ಇದು ಅತ್ಯಂತ ದುರದೃಷ್ಟಕರ. ರಾಜ್ಯ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿ ಇಟ್ಟುಕೊಂಡೇ ಪ್ರತಿಮೆ ಅನಾವರಣ ಮಾಡಲಾಗಿದೆ ಎನ್ನುವುದು ಸತ್ಯ. ಪ್ರಧಾನಿ ನರೇಂದ್ರ ಮೋದಿ ಅವರನ್ನು ರಾಜ್ಯ ಸರಕಾರ ಹಾಗೂ ಬಿಜೆಪಿ ನಾಯಕರು ದಾರಿ ತಪ್ಪಿಸಿದ್ದಾರೆ ಎನ್ನುವುದರಲ್ಲಿ ಸಂಶಯ ಇಲ್ಲ. ಮಾನ್ಯ ದೇವೇಗೌಡರ ಬಗ್ಗೆ ಅತೀವ ಗೌರವ ಇಟ್ಟುಕೊಂಡಿರುವ ಪ್ರಧಾನಿಗಳ ಬಗ್ಗೆಯೇ ಕನ್ನಡಿಗರಲ್ಲಿ ತಪ್ಪು ಅಭಿಪ್ರಾಯ ಮೂಡುವಂತೆ ರಾಜ್ಯ ಬಿಜೆಪಿ ಸರಕಾರ ಮತ್ತು ಬಿಜೆಪಿ ನಾಯಕರು ವರ್ತಿಸಿದ್ದಾರೆ ಎಂದು ಟೀಕಿಸಿದೆ. 

ಕೆಂಪೇಗೌಡರು ಬಿಜೆಪಿ ಆಸ್ತಿಯಲ್ಲ, ಕೆಲ ಸಚಿವರ ಜಹಗೀರಲ್ಲ, ರಾಜಕೀಯಕ್ಕೆ ಬಳಕೆ ಮಾಡಿಕೊಳ್ಳುವ ವಿಷಯವೂ ಅಲ್ಲ. ನಾಡಪ್ರಭುಗಳು ಸಮಸ್ತ ಕನ್ನಡಿಗರ ಹೆಮ್ಮೆ. ನಮ್ಮೆಲ್ಲರ ಅರಾಧ್ಯದೈವ. ಇನ್ನು, ಬೆಂಗಳೂರು ನಗರ ನಮ್ಮೆಲ್ಲರದ್ದು. ಸಮಸ್ತ ಕನ್ನಡಿಗರ ಜೀವನಾಡಿ. ಈ ಸೂಕ್ಷ್ಮವನ್ನು ರಾಜ್ಯ ಬಿಜೆಪಿ ಸರಕಾರ ಮರೆತು ಕನ್ನಡಿಗರನ್ನು ಅಪಮಾನಿಸಿದೆ ಎಂದು ಜೆಡಿಎಸ್ ತೀವ್ರ ಆಕ್ರೋಶ ವ್ಯಕ್ತಪಡಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಹೊಸದಾಗಿ ನೇಮಕಗೊಂಡಿದ್ದ Hamas ಮಿಲಿಟರಿ ನಾಯಕನನ್ನೂ ಹೊಡೆದುರುಳಿಸಿದ Israel!

ಸಿದ್ದರಾಮಯ್ಯ 2 ಬಾರಿ ಸಿಎಂ ಆಗಿದ್ದಾರೆ; ಡಿಕೆಶಿ ಹಲವು ಮುಖ್ಯಮಂತ್ರಿಗಳ ಜತೆ ಸಚಿವರಾಗಿ ಕೆಲಸ ಮಾಡಿದ್ದಾರೆ: ಸುರ್ಜೇವಾಲ ಮಾತಿನ ಅರ್ಥವೇನು?

ಇಲ್ಲಿಂದ ತೊಲಗಿ; ಭಾರತೀಯ ದಂಪತಿಗೆ ಅಮೆರಿಕಾದಲ್ಲಿ ಜನಾಂಗೀಯ ನಿಂದನೆ

IPL 2026: SRH ವಿರುದ್ಧ RR ಗೆ 47 ರನ್ ಗಳ ಭರ್ಜರಿ ಗೆಲುವು

IPL 2026 Eliminator: ವೈಭವ್ ಸೂರ್ಯವಂಶಿ ಸ್ಫೋಟಕ ಬ್ಯಾಟಿಂಗ್, SRHಗೆ 244 ರನ್ ಬೃಹತ್ ಗುರಿ ನೀಡಿದ RR

SCROLL FOR NEXT