ಡಿಕೆ ಶಿವಕುಮಾರ್ 
ರಾಜಕೀಯ

ಕಾಂಗ್ರೆಸ್ ಆರೋಪಗಳಿಗೆ ಪ್ರಧಾನಿ ಮೋದಿ ಉತ್ತರಿಸುವ ವಿಶ್ವಾಸವಿದೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್

ರಾಜ್ಯ ಬಿಜೆಪಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದ್ದು, ಅವರಿಂದ ಉತ್ತರ ಬರುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದರು.

ಬೆಂಗಳೂರು: ರಾಜ್ಯ ಬಿಜೆಪಿಯಲ್ಲಿನ ವ್ಯಾಪಕ ಭ್ರಷ್ಟಾಚಾರ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆಯಲಾಗಿದ್ದು, ಅವರಿಂದ ಉತ್ತರ ಬರುವ ಸಾಧ್ಯತೆಯಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಶುಕ್ರವಾರ ಹೇಳಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 'ಪ್ರಜಾಸತ್ತಾತ್ಮಕ ವ್ಯವಸ್ಥೆಯಲ್ಲಿ ಪ್ರತಿಪಕ್ಷಗಳ ಪತ್ರಗಳಿಗೆ ಪ್ರಧಾನಿ ಉತ್ತರಿಸುತ್ತಾರೆ. ಕಾಂಗ್ರೆಸ್ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿ ಕೂಡಾ ಉತ್ತರಿಸುವ ವಿಶ್ವಾಸವಿದೆ ಎಂದರು.

ರಾಜ್ಯ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಡಿಕೆ ಶಿವಕುಮಾರ್, ಗುತ್ತಿಗೆದಾರರೊಬ್ಬರು ಕಮಿಷನ್ ಬೇಡಿಕೆಯ ಮೇರೆಗೆ ದಯಾಮರಣಕ್ಕೆ ಅನುಮತಿ ಕೋರಿದ್ದಾರೆ ಎಂದು ಆರೋಪಿಸಿದರು. ಮೋದಿ ಭೇಟಿಗೂ ಮುನ್ನ ಬೆಂಗಳೂರಿನಲ್ಲಿ ರಸ್ತೆ ಗುಂಡಿಗಳನ್ನು ಮುಚ್ಚಿರುವಂತೆ ಭ್ರಷ್ಟಾಚಾರವನ್ನು ಮುಚ್ಚಿಡಬೇಡಿ ಎಂಬ ಸಂದೇಶವನ್ನು ಪಕ್ಷದವರಿಗೆ ರವಾನಿಸಬೇಕು ಎಂದು ಒತ್ತಾಯಿಸಿದರು. 

ಪ್ರಧಾನಿ ನರೇಂದ್ರ ಮೋದಿ ಅವರ ಭೇಟಿ ಹಿನ್ನೆಲೆಯಲ್ಲಿ ಬೆಂಗಳೂರು ರಸ್ತೆಗಳಿಗೆ ರಸ್ತೆ ಹಾಕಲಾಗಿದೆ ಎಂಬ ಆರೋಪ ಕುರಿತು ಪ್ರತಿಕ್ರಿಯಿಸಿದ ಡಿಕೆ ಶಿವಕುಮಾರ್, ರಸ್ತೆಗಳು ಅವರ ನಾಯಕರ ಪ್ರಯಾಣಕ್ಕಾಗಿಯೇ ಹೊರತು ನಾಗರಿಕರ ಅನುಕೂಲಕ್ಕಾಗಿ ಅಲ್ಲ ಎಂದರು.

ಶಿವಕುಮಾರ್ ಈ ಹಿಂದೆ ಸೂಚಿಸಿದಂತೆ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದಿಂದ ಪ್ರತಿಮೆ ಸ್ಥಾಪಿಸಬಹುದಿತ್ತು ಎಂಬ ಸಚಿವರ ಹೇಳಿಕೆ ಕುರಿತು ಕೇಳಿದಾಗ, “ನಾನು ಅಲ್ಲಿಗೆ ಹೋದ ದಿನ ಅವರು ತಮ್ಮ ಸ್ವಂತ ಹಣವನ್ನು ಖರ್ಚು ಮಾಡಬಹುದೆಂದು ಹೇಳಿದ್ದೆ. ರಾಜ್ಯ ಸರ್ಕಾರಕ್ಕೆ ಪ್ರತಿಮೆ ನಿರ್ಮಿಸುವ ಅಗತ್ಯವಿರಲಿಲ್ಲ ಎಂದರು.  

ಶುಕ್ರವಾರದ ಕಾರ್ಯಕ್ರಮಕ್ಕೆ ಸರ್ಕಾರ 48 ಕೋಟಿ ರೂಪಾಯಿ ಖರ್ಚು ಮಾಡಿರುವ ಬಗ್ಗೆ ಕೇಳಿದ ಪ್ರಶ್ನೆಗೆ ಉತ್ತರಿಸಿದ ಡಿಕೆ ಶಿವಕುಮಾರ್, ಒಬ್ಬ ವ್ಯಕ್ತಿ ಮತ್ತು ಒಂದು ಪಕ್ಷಕ್ಕಾಗಿ ಹಣ ಖರ್ಚು ಮಾಡುತ್ತಿರುವುದು ಎಲ್ಲರಿಗೂ ಗೊತ್ತು. ಜನರು ಅವರನ್ನು ಕಿತ್ತೊಗೆಯ್ಯಲು ನಿರ್ಧರಿಸಿದ್ದಾರೆ ಎಂದು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Karnataka CM News LIVE Updates | ಕಾವೇರಿ ನಿವಾಸದಲ್ಲಿ ಬ್ರೇಕ್‌ಫಾಸ್ಟ್ ಮೀಟಿಂಗ್ ಆರಂಭ, ಡಿಕೆಶಿ ಎದುರೇ ‘5 ವರ್ಷ ಸಿದ್ದರಾಮಯ್ಯ ಸಿಎಂ’ ಘೋಷಣೆ ಕೂಗಿದ ಅಭಿಮಾನಿಗಳು..!

ಮಧ್ಯಪ್ರಾಚ್ಯದಲ್ಲಿ ಮತ್ತೆ ಯುದ್ಧದ ಕಾರ್ಮೋಡ: 4 ಇರಾನ್ ಡ್ರೋನ್‌ಗಳನ್ನು ಹೊಡೆದುರುಳಿಸಿದ ಅಮೆರಿಕಾ, ಹೋರ್ಮುಜ್‌ನಲ್ಲಿ ಉದ್ವಿಗ್ನತೆ ತೀವ್ರ..!

ಕ್ಲೈಮ್ಯಾಕ್ಸ್‌ ಹಂತಕ್ಕೆ ಕುರ್ಚಿ ಕದನ: ಸಿಎಂ ಸ್ಥಾನಕ್ಕೆ ಡಿಕೆ ಶಿವಕುಮಾರ್ ಹೆಸರು ಫೈನಲ್?, ಮೇ 31ಕ್ಕೆ ಪ್ರಮಾಣವಚನ ಸಾಧ್ಯತೆ

ಸಿದ್ದು ನಿರ್ಗಮನದ ಬಳಿಕ ಅಸಮಾಧಾನ ತಣಿಸಲು ಕಾಂಗ್ರೆಸ್ ಮಾಸ್ಟರ್‌ಪ್ಲ್ಯಾನ್: 4 DCM ಹುದ್ದೆ ಸೃಷ್ಟಿಗೆ ಚಿಂತನೆ, ಜಮೀರ್, ಪ್ರಿಯಾಂಕ್ ಖರ್ಗೆ, ಎಂಬಿ ಪಾಟೀಲ್ ಹೆಸರು ಫೈನಲ್?

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮತ್ತೊಂದು ಪವರ್ ಶಿಫ್ಟ್: ಅಹಿಂದ ಸಮೀಕರಣಕ್ಕೆ ಮಾಸ್ಟರ್‌ಪ್ಲ್ಯಾನ್, ಸತೀಶ್‌ ಜಾರಕಿಹೊಳಿಗೆ KPCC ಜವಾಬ್ದಾರಿ?

SCROLL FOR NEXT