ಸಾಂದರ್ಭಿಕ ಚಿತ್ರ 
ರಾಜಕೀಯ

ಅಭ್ಯರ್ಥಿಗಳ ಆಯ್ಕೆಗೆ ಗುಜರಾತ್ ಮಾದರಿ? ರಾಜ್ಯ ಬಿಜೆಪಿಯಲ್ಲಿನ ಕೆಲ ನಾಯಕರಲ್ಲಿ ಆತಂಕ!

ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರನ್ನು ಕೈ ಬಿಡಲಾಗಿದೆ. ಇದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರನ್ನು ಆತಂಕಕ್ಕೆ ತಳ್ಳಿದೆ.

ಬೆಂಗಳೂರು: ಮುಂದಿನ ತಿಂಗಳು ನಡೆಯಲಿರುವ ಗುಜರಾತ್ ವಿಧಾನಸಭಾ ಚುನಾವಣೆಗಾಗಿ ಬಿಜೆಪಿ ಬಿಡುಗಡೆ ಮಾಡಿರುವ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲಿ 38 ಹಾಲಿ ಶಾಸಕರನ್ನು ಕೈ ಬಿಡಲಾಗಿದೆ. ಇದು ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಅನೇಕ ಶಾಸಕರನ್ನು ಆತಂಕಕ್ಕೆ ತಳ್ಳಿದೆ.

224 ಸದಸ್ಯ ಬಲದ ರಾಜ್ಯ ವಿಧಾನಸಭೆಯಲ್ಲಿ 117 ಬಿಜೆಪಿ ಶಾಸಕರಿದ್ದಾರೆ (ಇತ್ತೀಚೆಗಷ್ಟೇ ನಿಧನರಾದ ಮಾಜಿ ಸಚಿವ ಉಮೇಶ ಕತ್ತಿ ಮತ್ತು ಬಿಜೆಪಿ ಟಿಕೆಟ್‌ನಲ್ಲಿ ಗೆದ್ದಿದ್ದ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರನ್ನು ಹೊರತುಪಡಿಸಿ.) ಸ್ವತಂತ್ರ ಅಭ್ಯರ್ಥಿ ಎನ್.ಮಹೇಶ್ ಬಿಜೆಪಿಯನ್ನು ಬೆಂಬಲಿಸುತ್ತಿದ್ದಾರೆ.

ಬಿಜೆಪಿ ಕಳೆದ ಮೂರು ವರ್ಷಗಳಿಂದ ರಾಜ್ಯದಲ್ಲಿ ಅಧಿಕಾರದಲ್ಲಿದ್ದರೂ ಅನೇಕ ಹಿರಿಯ ಮುಖಂಡರಿಗೆ ಸಚಿವ ಸ್ಥಾನ ನಿರಾಕರಿಸಲಾಗಿದೆ. ಮೂರ್ನಾಲ್ಕು ಬಾರಿ ಗೆದ್ದಿರುವ ಅನೇಕ ಶಾಸಕರನ್ನು ಸಚಿವರನ್ನಾಗಿ ಮಾಡಿಲ್ಲ. ಒಂದು ವೇಳೆ ಅಂತವರಿಗೆ 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಟಿಕೆಟ್ ನೀಡದಿದ್ದರೆ ಅದು ನ್ಯಾಯಯುತವಾಗಿರುವುದಿಲ್ಲ ಎಂದು ಹಿರಿಯ ಬಿಜೆಪಿ ಮುಖಂಡರೊಬ್ಬರು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ತಿಳಿಸಿದರು. 

ವಿಜೇತ ಅಭ್ಯರ್ಥಿಗಳನ್ನು ಹುಡುಕಲು ಕ್ಷೇತ್ರ ಮಟ್ಟದಲ್ಲಿ  ಸರ್ವೇಯೊಂದನ್ನು ನಡೆಸಲಾಗುತ್ತಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. ಗುಜರಾತ್ ನಂತೆ ಹಳಬರನ್ನು ಕೈ ಬಿಡಲ್ಲ. ಕರ್ನಾಟಕ ವಿಭಿನ್ನವಾಗಿದ್ದು ಚುನಾವಣೆಯಲ್ಲಿ ಗೆಲ್ಲಲು ಹಿರಿಯರ ಅಗತ್ಯವಿದೆ. ಈ ಮುಖಂಡರು ಪ್ರಮುಖ ಸಮುದಾಯದವರಾಗಿದ್ದು, ಅವರನ್ನು ಕೈ ಬಿಟ್ಟರೆ ಚುನಾವಣೆ ಮೇಲೆ ಪ್ರಭಾವ ಬೀರಲಿದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ. 

ಈ ಮಧ್ಯೆ ಕರ್ನಾಟಕ ಬಿಜೆಪಿಯು ಗುಜರಾತ್ ಮಾದರಿ ಅನುಸರಿಸುತ್ತದೆ ಮತ್ತು ಹೊಸ ಮುಖಗಳಿಗೆ ಅವಕಾಶ ನೀಡುತ್ತದೆ ಎಂದು ಕೆಲವು ನಾಯಕರು ಮತ್ತು ಪಕ್ಷದ ತಳಮಟ್ಟದಲ್ಲಿ ಆಶಿಸುತ್ತಿದ್ದಾರೆ. 2023 ರ ಚುನಾವಣೆಯಲ್ಲಿ ಯುವಕರು ಸ್ಪರ್ಧಿಸಲು ಹಿರಿಯ ನಾಯಕರು ದಾರಿ ಮಾಡಿಕೊಡಬೇಕು ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಲಹರ್ ಸಿಂಗ್ ಸಿರೋಯಾ ಇತ್ತೀಚೆಗೆ ಹೇಳಿದ್ದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT