ಸಚಿವ ಗೋಪಾಲಯ್ಯ 
ರಾಜಕೀಯ

ಸೋಲಿನ ಭಯದಿಂದ ಕ್ಷೇತ್ರ ಬದಲಾಯಿಸಲು ಸಿದ್ದರಾಮಯ್ಯ ನಿರ್ಧಾರ: ಸಚಿವ ಗೋಪಾಲಯ್ಯ

2023ರ ವಿಧಾನಸಭಾ ಚುನಾವಣೆಗೆ ಸೋಲಿನ ಭಯದಿಂದ ಕ್ಷೇತ್ರವನ್ನು ಬದಲಾಯಿಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಸೋಮವಾರ ಹೇಳಿದ್ದಾರೆ.

ಹಾಸನ: 2023ರ ವಿಧಾನಸಭಾ ಚುನಾವಣೆಗೆ ಸೋಲಿನ ಭಯದಿಂದ ಕ್ಷೇತ್ರವನ್ನು ಬದಲಾಯಿಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ನಿರ್ಧರಿಸಿದ್ದಾರೆ ಎಂದು ಅಬಕಾರಿ ಸಚಿವ ಗೋಪಾಲಯ್ಯ ಸೋಮವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ‘ಸಿದ್ದರಾಮಯ್ಯ ಅವರು ಹಿಂದಿನಂತೆಯೇ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವುದು ಉತ್ತಮವಾಗಿದ್ದು, ನೀಡಿದ ಭರವಸೆಯಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಂಡು ಮತದಾರರಿಗೆ ನ್ಯಾಯ ಒದಗಿಸಬೇಕು’ ಎಂದು ಹೇಳಿದರು.

ಇದೇ ವೇಳೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮಕ್ಕೆ ದೇವೇಗೌಡ ಅವರಿಗೆ ಆಹ್ವಾನ ನೀಡಿರುವ ವಿಚಾರಕ್ಕೆ ಪ್ರತಿಕ್ರಿಯಿಸಿ, ದೇವೇಗೌಡರಿಗೆ ಗೌರವ ಸಲ್ಲಿಸಿ ಆಮಂತ್ರಣ ಪತ್ರ ಕಳುಹಿಸಲಾಗಿತ್ತು. ಮಾಜಿ ಪ್ರಧಾನಮಂತ್ರಿಗಳೊಂದಿಗೆ ದೂರವಾಣಿ ಕರೆಯಲ್ಲೂ ಮಾತನಾಡಲಾಗಿತ್ತು. ಈ ವಿಚಾರದಲ್ಲಿ ನನಗೆ ಯಾವುದೇ ತಪ್ಪುಗಳೂ ಕಂಡಿಲ್ಲ ಎಂದರು ತಿಳಿಸಿದರು.

ಬಳಿಕ ಬಿಜೆಪಿಯಿಂದ ಯಾವುದೇ ಸಚಿವರು ಅಥವಾ ಶಾಸಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಗೊಳ್ಳುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.

ಬಿಜೆಪಿಯಲ್ಲಿ ಎಲ್ಲಾ ಸಚಿವರು ಸಂತೋಷವಾಗಿದ್ದಾರೆ. 2023ರ ವಿಧಾನಸಭಾ ಚುನಾಣೆಯಲ್ಲಿ ಬಿಜೆಪಿಯಿಂದ ಟಿಕೆಟ್ ಪಡೆದು ಚುನಾವಣೆಯಲ್ಲಿ ಸ್ಪರ್ಧಿಸುತ್ತಾರೆಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

24 ಗಂಟೆ ಇಂಟರ್ನೆಟ್ ಕಟ್, 57 ಮೆಟ್ರೋ ನಿಲ್ದಾಣ ಬಂದ್: ಸಿಜೆಪಿ ಪ್ರತಿಭಟನೆಗೂ ಮುನ್ನ ದೆಹಲಿ ಹೈ ಅಲರ್ಟ್

ನಂದಿಗ್ರಾಮದಲ್ಲಿ 1.22 ಲಕ್ಷ ಮತ, ಅಸ್ಸಾಂನಲ್ಲಿ BJPಗೆ ಗೆಲುವು; 2 ಕ್ಷೇತ್ರ ಗೆದ್ದ TVK: ಕಾಂಗ್ರೆಸ್, ದೀದಿಗೆ ಮುಖಭಂಗ!

ಉಪಚುನಾವಣೆಯಲ್ಲಿ ಗೆಲುವು, ಜನರೊಂದಿಗೆ NDA ಆಳವಾದ ನಂಟಿನ ಪ್ರತೀಕ: ಪ್ರಧಾನಿ ಮೋದಿ

ಮತಗಳ್ಳತನವೇ ಆಗಿದ್ದರೆ ಕೇರಳ Congress CM, ತಮಿಳುನಾಡು CM ಕೂಡ ಮತಗಳ್ಳರೇ: ಚೇತನ್ ಅಹಿಂಸಾ

'ಅಸಹ್ಯ, ಅತಿರೇಕ.. ನಿಮ್ಮನ್ನು ಈ ರೀತಿ ನೋಡಲು ಇಚ್ಛಿಸುವುದಿಲ್ಲ, BiggBoss ಶೋ ಬಿಟ್ಟು ಹೊರಬನ್ನಿ': Kichcha Sudeepಗೆ ಪತ್ರ