ಎಲ್ ಆರ್ ಶಿವರಾಮೇಗೌಡ 
ರಾಜಕೀಯ

ಅಭ್ಯರ್ಥಿ ಬದಲಿಸದಿದ್ದರೆ ನಾಗಮಂಗಲದಲ್ಲಿ ಜೆಡಿಎಸ್ ಗೆ ಸೋಲು; ನಿಮ್ಮಿಬ್ಬರ ವಿರುದ್ಧ ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುವೆ: ಶಿವರಾಮೇಗೌಡ

ನನ್ನ ವಿರುದ್ಧ ನೀವಿಬ್ಬರು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ಸ್ಪರ್ಧೆ ಮಾಡಿ. ಚುನಾವಣೆಯಲ್ಲಿ ನಿಮ್ಮ ವಿರುದ್ಧ ನಾನು ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಸವಾಲು ಹಾಕಿದ್ದಾರೆ.

ಮಂಡ್ಯ: ನನ್ನ ವಿರುದ್ಧ ನೀವಿಬ್ಬರು ಪಕ್ಷೇತರ ಅಭ್ಯರ್ಥಿಗಳಾಗಿ ಚುನಾವಣೆಗೆ ಸ್ಪರ್ಧೆ ಮಾಡಿ. ಚುನಾವಣೆಯಲ್ಲಿ ನಿಮ್ಮ ವಿರುದ್ಧ ನಾನು ಗೆಲ್ಲದಿದ್ದರೆ ಶಿರಚ್ಛೇದ ಮಾಡಿಕೊಳ್ಳುತ್ತೇನೆ ಎಂದು ಮಾಜಿ ಸಂಸದ ಎಲ್ ಆರ್ ಶಿವರಾಮೇಗೌಡ ಸವಾಲು ಹಾಕಿದ್ದಾರೆ.

ಮದ್ದೂರಿನಲ್ಲಿ ಮಾತನಾಡಿದ ಅವರು, ನಾಗಮಂಗಲ ಶಾಸಕ ಸುರೇಶ್ ಗೌಡ ಮತ್ತು ಮಾಜಿ ಸಚಿವ ಎನ್.ಚಲುವರಾಯಸ್ವಾಮಿಗೆ ಬಹಿರಂಗ ಸವಾಲು ಹಾಕಿದ್ದಾರೆ, ನೀವಿಬ್ರು ಪಕ್ಷ ಬಿಟ್ಟು ನನ್ನ ವಿರುದ್ಧ ಸ್ಪರ್ಧಿಸಿ ಗೆಲ್ಲಿ, ನಾಗಮಂಗಲದಲ್ಲಿ ಈ ಬಾರಿ ಸುರೇಶ್ ಗೌಡರೇ ಅಭ್ಯರ್ಥಿಯಾದ್ರೆ ಜೆಡಿಎಸ್ ಸೋಲುತ್ತೆ ಎಂದು ಭವಿಷ್ಯ ನುಡಿದರು.

ನಾಗಮಂಗಲದಲ್ಲಿ ಅಭ್ಯರ್ಥಿ ಬದಲಿಸದಿದ್ದರೆ ನಾಗಮಂಗಲಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಆದಿಯಾಗಿ ಯಾರೇ ಬಂದರೂ ಸುರೇಶ್ ಗೌಡ ಗೆಲ್ಲಲ್ಲ. ಪಕ್ಷದ ಮೇಲೆ ನಿಂತರೆ ಯಾರ್ ಬೇಕಾದ್ರು ಗೆಲ್ತಾರೆ ಬನ್ನಿ ಪಕ್ಷೇತರರಾಗಿ ನಿಲ್ಲೋಣ ಎಂದು ಆಹ್ವಾನಿಸಿದರು.

ಈ ಹಿಂದೆ ಮಂಡ್ಯ ಜಿಲ್ಲೆ ಜೆಡಿಎಸ್‌ ಭದ್ರಕೋಟೆ ಆಗಿತ್ತು ನಿಜ. ಆದರೆ, ಕೆಲವರ ದುರ್ವರ್ತನೆಯಿಂದ ಜೆಡಿಎಸ್‌ ಭದ್ರಕೋಟೆ ಸ್ವಲ್ಪ ಸ್ವಲ್ಪವಾಗಿ ಕುಸಿಯುತ್ತಿದೆ. ನನಗೆ ಮಾಜಿ ಪ್ರಧಾನಿ ದೇವೇಗೌಡರು, ಮಾಜಿ ಸಿಎಂ ಕುಮಾರಸ್ವಾಮಿ, ಯುವ ನಾಯಕ ನಿಖಿಲ್ ಬಗ್ಗೆ ಅಪಾರ ಗೌರವ ಇದೆ. ಅವರ ಬಗ್ಗೆ ನಾನು ಹಗರುವಾಗಿ ಮಾತನಾಡುವುದಿಲ್ಲ ಎಂದರು. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ನಾಗಮಂಗಲ ಕ್ಷೇತ್ರದಿಂದ ಸುರೇಶ್‌ಗೌಡರಿಗೆ ಜೆಡಿಎಸ್‌ ಟಿಕೆಟ್‌ ನೀಡಿದರೇ ಸೋಲು ಕಟ್ಟಿಟ್ಟಬುತ್ತಿ. ಆಗಾಗಿ ಜೆಡಿಎಸ್‌ ಪಕ್ಷ ಬೇರೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೇ ಮಾತ್ರ ಗೆಲುವು ಖಚಿತ ಎಂದು ಭವಿಷ್ಯ ನುಡಿದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?