ಎಚ್.ಡಿ ರೇವಣ್ಣ 
ರಾಜಕೀಯ

ಜೆಡಿಎಸ್ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಸಮಯ ಪ್ರಶಸ್ತವಿಲ್ಲ: ಎಚ್ ಡಿ ರೇವಣ್ಣ ತಕರಾರು

ನಮ್ಮ ಪಕ್ಷದ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ, ಆದರೆ ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ಮೈಸೂರು:  ನಮ್ಮ ಪಕ್ಷದ 100 ಅಭ್ಯರ್ಥಿಗಳ ಪಟ್ಟಿ ಸಿದ್ಧವಾಗಿದೆ, ಆದರೆ ರೇವಣ್ಣ ನಮ್ಮ ಪಕ್ಷದ ಜ್ಯೋತಿಷಿ, ಅವರ ಮಾತಿನಂತೆ ಇಂದು ಜೆಡಿಎಸ್​ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡುತ್ತಿಲ್ಲ ಎಂದು ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ಹೇಳಿದರು.

ನವ ಕರ್ನಾಟಕ ನವ ನಿರ್ಮಾಣಕ್ಕಾಗಿ ಜೆಡಿಎಸ್​ ಆಯೋಜಿಸಿರುವ ಪಂಚರತ್ನ ರಥಯಾತ್ರೆ ಬೃಹತ್​ ಸಮಾವೇಶ ಕೋಲಾರ ಮುಳಬಾಗಿಲಿನಲ್ಲಿ ಇಂದು(ಶುಕ್ರವಾರ) ಮಧ್ಯಾಹ್ನ ಆರಂಭವಾಗಲಿದೆ. ಇದಕ್ಕೂ ಮುನ್ನ ಬೆಳಗ್ಗೆಯೇ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ತೆರಳಿ ಮಾಜಿ ಸಿಎಂ ಎಚ್​.ಡಿ.ಕುಮಾರಸ್ವಾಮಿ ವಿಶೇಷ ಪೂಜೆ ಸಲ್ಲಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಗೆ ಜೆಡಿಎಸ್​ನ 100 ಅಭ್ಯರ್ಥಿಗಳ ಪಟ್ಟಿ ಈಗಾಗಲೇ ಸಿದ್ಧವಾಗಿದೆ. ಇಂದೇ ಪಟ್ಟಿ ಬಿಡುಗಡೆ ಮಾಡಲು ಸಿದ್ಧತೆ ನಡೆದಿತ್ತು. ಆದರೆ ಇದಕ್ಕೆ ರೇವಣ್ಣ ತಕರಾರು ತೆಗೆದಿದ್ದಾರೆ. ಅವರು ನಮ್ಮ ಪಕ್ಷದ ಜ್ಯೋತಿಷಿ. ಇಂದು ಸಮಯ ಪ್ರಸಕ್ತವಾಗಿಲ್ಲ ಎಂದು ತಕರಾರು ತೆಗೆದಿದ್ದಾರೆ.

ಹಾಗಾಗಿ ಮುಂದಿನ ದಿನಗಳಲ್ಲಿ ಸೂಕ್ತ ಸಮಯ ನೋಡಿಕೊಂಡು ಬೆಂಗಳೂರಿನ ಪಕ್ಷದ ಕಚೇರಿಯಲ್ಲಿ ಎಚ್‌.ಡಿ‌ ದೇವೇಗೌಡರ ನೇತೃತ್ವದಲ್ಲಿ ಬಿಡುಗಡೆ ಮಾಡುತ್ತೇವೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

'ಏನೇನ್ ದಾಖಲೆ ಇದೆ ಎಲ್ಲಾ ತರಿಸುತ್ತೇನೆ': HDK 'ಸ್ಟಿಂಗ್' ಆರೋಪಕ್ಕೆ CM ಡಿಕೆಶಿ ಶಾಕಿಂಗ್ ರಿಯಾಕ್ಷನ್!

SIR ವಿರುದ್ಧ ಪ್ರತಿಭಟನೆ ಮುಂದುವರೆಸುತ್ತೆವೆ: ರಾಜಕೀಯ, ಜನಸಾಮಾನ್ಯರ ಪ್ರತಿರೋಧಕ್ಕೇ ಜಯ': ರಾಹುಲ್ ಗಾಂಧಿ

‘ಸಿದ್ದರಾಮಯ್ಯಗೆ CD ತೋರಿಸಿ ರಾಜೀನಾಮೆ ಪಡೆದಿದ್ದಾರೆ’: ಯತ್ನಾಳ್​ ಸ್ಫೋಟಕ ಆರೋಪ

ಹನಿಟ್ರ್ಯಾಪ್ ಭೀತಿಯಲ್ಲಿದ್ದ ಸಿದ್ದರಾಮಯ್ಯಗೆ ಬಿಗ್ ರಿಲೀಫ್: ಮಾಧ್ಯಮಗಳಿಗೆ ವಿಡಿಯೋ ಪ್ರಸಾರ ಮಾಡದಂತೆ ನಿರ್ಬಂಧ ವಿಧಿಸಿದ ಕೋರ್ಟ್

ಅವಧಿಗೂ ಮುನ್ನವೇ ಕೇಂದ್ರ ಸಚಿವ ಮತ್ತು ರಾಜ್ಯಸಭಾ ಸದಸ್ಯ ಸ್ಥಾನಕ್ಕೆ BJP ನಾಯಕ ಮುರುಗನ್ ರಾಜಿನಾಮೆ: PM ಮೋದಿಗೆ 5 ಪುಟಗಳ ಪತ್ರ!