ಬಳ್ಳಾರಿಯಲ್ಲಿ ಭಾನುವಾರ ನಡೆದ ರಾಜ್ಯ ಎಸ್ಟಿ ಮೋರ್ಚಾ ಸಮಾವೇಶದಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪಕ್ಷದ ಹಿರಿಯ ಮುಖಂಡರು ಹಾಜರಿದ್ದರು. 
ರಾಜಕೀಯ

ಬಿಜೆಪಿ ಯಾವಾಗಲೂ ಎಸ್‌ಸಿ, ಎಸ್‌ಟಿಗಳೊಂದಿಗೆ: ಜೆ.ಪಿ.ನಡ್ಡಾ

ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಬಿಜೆಪಿ ಶ್ರಮಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಭರವಸೆ ನೀಡಿದರು.

ಬಳ್ಳಾರಿ: ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣಕ್ಕಾಗಿ ಬಿಜೆಪಿ ಶ್ರಮಿಸಲಿದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಭರವಸೆ ನೀಡಿದರು.

ಬಳ್ಳಾರಿ ನಗರದಲ್ಲಿ ಭಾನುವಾರ ನಡೆದ ರಾಜ್ಯ ಎಸ್‌ಟಿ ಮೋರ್ಚಾ ಸಮಾವೇಶ ಉದ್ಘಾಟಿಸಿ ಮಾತನಾಡಿದ ನಡ್ಡಾ ಅವರು, ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದರು. ‘ಎಸ್‌ಸಿ, ಎಸ್‌ಟಿ ಸಮುದಾಯಗಳ ಕಲ್ಯಾಣ ಭರವಸೆ ನೀಡಿ ಕಾಂಗ್ರೆಸ್ ಅಧಿಕಾರಕ್ಕೆ ಬಂದತ್ತು... ಆದರೆ ಇಂದಿಗೂ ಆ ಸಮುದಾಯಗಳು ಆರ್ಥಿಕ, ಸಾಮಾಜಿಕವಾಗಿ ಹಿಂದುಳಿದಿವೆ. ಇದು SC, ST ಮತ್ತು OBC ಸಮುದಾಯಗಳ ಬಗ್ಗೆ ಕಾಂಗ್ರೆಸ್‌ನ ಕಾಳಜಿಯನ್ನು ತೋರಿಸುತ್ತದೆ ಎಂದು ಹೇಳಿದರು.

ಬುಡಕಟ್ಟು ನಾಯಕ ಬಿರ್ಸಾ ಮುಂಡಾ ಅವರ ಜನ್ಮದಿನವನ್ನು ಮೊದಲ ಬಾರಿಗೆ ಬುಡಕಟ್ಟು ಹೆಮ್ಮೆಯ ದಿನವನ್ನಾಗಿ ಆಚರಿಸಿದ್ದು ಬಿಜೆಪಿ ಸರ್ಕಾರ ಎಂದು ಹೇಳಿದರು.

ಕಾಂಗ್ರೆಸ್ ತಮ್ಮ 60 ವರ್ಷಗಳ ಆಡಳಿತದಲ್ಲಿ ಎಂದಿಗೂ ಅದರ ಬಗ್ಗೆ ಯೋಚಿಸಲಿಲ್ಲ. ದೇಶದ ಅತ್ಯುನ್ನತ ಹುದ್ದೆಗೆ ಎಸ್ಟಿಯನ್ನು ನೇಮಿಸುವ ಬಗ್ಗೆ ಅವರು ಎಂದಿಗೂ ಯೋಚಿಸಲಿಲ್ಲ, ಆದರೆ ಪ್ರಧಾನಿ ಮೋದಿ ದ್ರೌಪದಿ ಮುರ್ಮು ಅವರನ್ನು ನೇಮಿಸುವ ಮೂಲಕ ಅದನ್ನು ಮಾಡಿದರು ಎಂದು ತಿಳಿಸಿದರು.

ಬಿಜೆಪಿ ಸರ್ಕಾರವು ಎಸ್ಟಿಗಳಿಗೆ ಏಕಲವ್ಯ ಮಾದರಿ ವಸತಿ ನಿಲಯ ಸೇರಿದಂತೆ ಹಲವು ಯೋಜನೆಗಳನ್ನು ಜಾರಿಗೆ ತಂದಿದೆ. "ನಾವು ಯಾವಾಗಲೂ ಹಿಂದುಳಿದ ವರ್ಗಗಳೊಂದಿಗೆ ಇರುತ್ತೇವೆ ಎಂದು ನಾನು ಭರವಸೆ ನೀಡುತ್ತೇನೆ" ಎಂದರು.

ಬಳಿಕ ಮಾತನಾಡಿದ ಸಿಎಂ ಬೊಮ್ಮಾಯಿ, ಎಸ್ಟಿ ಸಮುದಾಯ ಪ್ರಾಮಾಣಿಕತೆಯ ಪ್ರತೀಕ ಎಂದು ಹೇಳಿದರು.

“ನಾನು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿಯೇ ಮೀಸಲಾತಿ ಹೆಚ್ಚಳಕ್ಕಾಗಿ ಸಮುದಾಯದ ಬಾಕಿಯಿರುವ ಬೇಡಿಕೆಯನ್ನು ಈಡೇರಿಸಿರುವುದು ನನಗೆ ಹೆಮ್ಮೆ ತಂದಿದೆ. ಕಾಂಗ್ರೆಸ್ ಅವರನ್ನು ಯಾವಾಗಲೂ ಮತಕ್ಕಾಗಿ ಬಳಸಿಕೊಳ್ಳುತ್ತದೆ. ಮಾಜಿ ಸಿಎಂ ಸಿದ್ದರಾಮಯ್ಯ ಅಹಿಂದ ಅಭಿವೃದ್ಧಿಯ ಭರವಸೆ ನೀಡಿ ಅಧಿಕಾರಕ್ಕೆ ಬಂದರು...ಆದರೆ ಏನನ್ನೂ ಮಾಡಿಲ್ಲ. ಎಸ್‌ಸಿ, ಎಸ್‌ಟಿ ಸಮುದಾಯದವರ ಭಾವನೆಗಳಿಗೆ ಕಾಂಗ್ರೆಸ್‌ ಧಕ್ಕೆ ತಂದಿದೆ ಎಂದರು.

ತಮ್ಮ ಸರ್ಕಾರ ಎಸ್‌ಸಿ ಮತ್ತು ಎಸ್‌ಟಿ ಸಮುದಾಯಗಳ ಅಭಿವೃದ್ಧಿಗೆ 28,000 ರೂ.ಗಳನ್ನು ಮೀಸಲಿಟ್ಟಿದೆ ಎಂದು ಇದೇ ವೇಳೆ ಹೇಳಿದರು.

ಬಳಿಕ ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಆ ಪಕ್ಷ "ಜನರಲ್ಲಿ ಗೊಂದಲ ಮೂಡಿಸಲು ಪ್ರಯತ್ನಿಸುತ್ತಿದೆ ಎಂದರು.
 
ನಾವು ಮೀಸಲಾತಿಯನ್ನು ಹೆಚ್ಚಿಸುವ ಮೊದಲು, ಅದು ಸಾಧ್ಯವಿಲ್ಲ ಎಂದು ಅವರು ಬಿಜೆಪಿಯನ್ನು ಟೀಕಿಸಿದರು. ಆದರೆ ನಾವು ಹೆಚ್ಚಿಸಿದ ನಂತರ ಈಗ ಅದನ್ನು ಹೇಗೆ ಕಾರ್ಯರೂಪಕ್ಕೆ ತರುತ್ತೇವೆ ಎಂದು ಪ್ರಶ್ನಿಸುತ್ತಿದ್ದಾರೆ... ಜನರಲ್ಲಿ ಗೊಂದಲ ಮೂಡಿಸಲು ಮುಂದಾಗಿದ್ದಾರೆಂದು ಕಿಡಿಕಾರಿದರು.

ಸೋನಿಯಾ ಗಾಂಧಿ ಬಳ್ಳಾರಿಯಿಂದ ಸ್ಪರ್ಧಿಸಿದ್ದರು... 3 ಸಾವಿರ ಕೋಟಿ ಪ್ಯಾಕೇಜ್ ಭರವಸೆ ನೀಡಿದ್ದರು. ಆದರೆ, ಒಂದು ರೂಪಾಯಿ ಕೂಡ ಬಳ್ಳಾರಿಗೆ ಬಂದಿಲ್ಲ ಎಂದರು.

ಬಳಿಕ ಕೇಂದ್ರ ಬುಡಕಟ್ಟು ವ್ಯವಹಾರಗಳ ಸಚಿವ ಅರ್ಜುನ್ ಮುಂಡಾ ಅವರು ಮಾತನಾಡಿ, ಬಳ್ಳಾರಿಗೆ ಏಕಲವ್ಯ ಮಾದರಿ ವಸತಿ ಶಾಲೆಯನ್ನು ಶೀಘ್ರವೇ ನೀಡಲಾಗುವುದು ಎಂದು ಘೋಷಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT