ಸಿದ್ದರಾಮಯ್ಯ 
ರಾಜಕೀಯ

ಕರ್ನಾಟಕ ವಿಧಾನಸಭೆ ಚುನಾವಣೆ: ಮದುವೆ ಮನೆಯಲ್ಲಿಯೇ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಿಸಿದ ಸಿದ್ದರಾಮಯ್ಯ!

ಮಾಜಿ ಸಚಿವರಾದ ಇಕ್ಬಾಲ್‌ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌.ಶ್ರೀನಾಥ್‌ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು.

ಬೆಂಗಳೂರು: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗಂಗಾವತಿ ಕ್ಷೇತ್ರದಿಂದ ಇಕ್ಬಾಲ್‌ ಅನ್ಸಾರಿ ಹಾಗೂ ಕನಕಗಿರಿಯಿಂದ ಶಿವರಾಜ ತಂಗಡಗಿ ಅವರನ್ನು ಗೆಲ್ಲಿಸಿ ವಿಧಾನಸೌಧಕ್ಕೆ ಕಳುಹಿಸಿಕೊಡಬೇಕು’ ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಮತದಾರರಿಗೆ ಮನವಿ ಮಾಡಿದರು.

ಕೊಪ್ಪಳ ತಾಲ್ಲೂಕಿನ ವನಬಳ್ಳಾರಿಯಲ್ಲಿ ಭಾನುವಾರ ಕಾಂಗ್ರೆಸ್ ಮುಖಂಡ ಹಾಗೂ ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಹನುಮಂತಪ್ಪ ಅವರ ಸಹೋದರನ ವಿವಾಹ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೊಪ್ಪಳ ಕ್ಷೇತ್ರದಲ್ಲಿ ರಾಘವೇಂದ್ರ ಹಿಟ್ನಾಳ, ಗಂಗಾವತಿಯಲ್ಲಿ ಇಕ್ಬಾಲ್ ಅನ್ಸಾರಿ, ಕನಕಗಿರಿಯಲ್ಲಿ ಶಿವರಾಜ್ ತಂಗಡಗಿ, ಕುಷ್ಟಗಿಯಲ್ಲಿ ಅಮರೇಗೌಡ ಭಯ್ಯಾಪುರ, ಯಲಬುರ್ಗಾದಲ್ಲಿ ಬಸವರಾಜ ರಾಯರೆಡ್ಡಿ ಅವರನ್ನು ಗೆಲ್ಲಿಸುವ ಹೊಣೆಗಾರಿಗೆ ನಿಮ್ಮದು. ಜಿಲ್ಲೆಯ ಐದು ಕ್ಷೇತ್ರದಲ್ಲಿ ಸಹ ಕಾಂಗ್ರೆಸ್‌ ಜಯಭೇರಿ ಬಾರಿಸಬೇಕು ಎಂದರು.

ಜಿಲ್ಲೆಯಿಂದ ನಮಗೆ ಪೂರ್ಣ ಬೆಂಬಲ ನೀಡಿ, ಜಿಲ್ಲೆಯ ಐದು ಕ್ಷೇತ್ರದಲ್ಲೂ ಕಾಂಗ್ರೆಸ್‌ ಅಭ್ಯರ್ಥಿಗಳನ್ನು ಗೆಲ್ಲಿಸಿ ಕಳಿಸಿಕೊಡುವ ಜವಾಬ್ದಾರಿ ನಿಮ್ಮ ಮೇಲಿದೆ ಎಂದರು.

ಮಾಜಿ ಸಚಿವರಾದ ಇಕ್ಬಾಲ್‌ ಅನ್ಸಾರಿ, ಮಲ್ಲಿಕಾರ್ಜುನ ನಾಗಪ್ಪ ಮತ್ತು ವಿಧಾನಪರಿಷತ್‌ ಮಾಜಿ ಸದಸ್ಯ ಎಚ್‌.ಆರ್‌.ಶ್ರೀನಾಥ್‌ ನಡುವೆ ಗಂಗಾವತಿ ಕ್ಷೇತ್ರದಿಂದ ಪೈಪೋಟಿ ನಡೆದಿತ್ತು. ಮೂವರೂ ಟಿಕೆಟ್‌ಗಾಗಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ಸಲ್ಲಿಸಲು ಕೊನೆಯ ದಿನವಾಗಿದ್ದ ಸೋಮವಾರಕ್ಕೂ ಮೊದಲೇ ಸಿದ್ದರಾಮಯ್ಯ ಅವರು ‘ಇಕ್ಬಾಲ್‌ ಅನ್ಸಾರಿ ಗಂಗಾವತಿ ಕ್ಷೇತ್ರದ ಅಭ್ಯರ್ಥಿ’ ಎಂದು  ಘೋಷಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ