ರಾಜಕೀಯ

ಈ ರಾಜ್ಯದ ಜನತೆ ಸಿದ್ದರಾಮಯ್ಯ ಮತ್ತೊಮ್ಮೆ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ: ಶಾಸಕ ಭೈರತಿ ಸುರೇಶ್

Sumana Upadhyaya

ಬೆಂಗಳೂರು: ನಾಯಕರು ವಿವಾದಕ್ಕೆ ತೇಪೆ ಹಾಕಲು ಯತ್ನಿಸಿದರೂ ಕಾಂಗ್ರೆಸ್ ನಲ್ಲಿ ಬಣ ಬಡಿದಾಟ ಇರುವುದು ಬಹಿರಂಗ ಸತ್ಯ. ವಿಪಕ್ಷ ನಾಯಕ -ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬಣ ಒಂದೆಡೆಯಾದರೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಬಣ ಮತ್ತೊಂದೆಡೆ. ತಮ್ಮ ನಾಯಕರು ಮುಖ್ಯಮಂತ್ರಿಯಾಗಬೇಕೆಂದು ಆಗಾಗ ಸಾರ್ವಜನಿಕವಾಗಿ ಹೇಳಿಕೆ ನೀಡುತ್ತಿರುತ್ತಾರೆ.

ಇನ್ನು ನಾಲ್ಕೈದು ತಿಂಗಳಲ್ಲಿ ಕರ್ನಾಟಕದಲ್ಲಿ ವಿಧಾನಸಭೆ ಚುನಾವಣೆ ನಡೆದು ಸರ್ಕಾರದಲ್ಲಿ ಬದಲಾವಣೆ ಕಾಣಲಿದೆ. ರಾಜ್ಯದ ಪ್ರಮುಖ ಮೂರು ಪಕ್ಷಗಳಾದ ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ನಾಯಕರು ಸರ್ಕಾರ ರಚಿಸಿ ಅಧಿಕಾರ ಪಡೆಯುವ ಕನಸು ಕಾಣುತ್ತಿದ್ದಾರೆ. ಈ ಸಂದರ್ಭದಲ್ಲಿ ತಮ್ಮ ನೆಚ್ಚಿನ ನಾಯಕ ಮುಖ್ಯಮಂತ್ರಿಯಾಗಬೇಕೆಂದು ಆಶಿಸುತ್ತಾರೆ.

ಇಂದು ಸಾರ್ವಜನಿಕ ವೇದಿಕೆ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಿದ್ದರಾಮಯ್ಯ ಆಪ್ತ ಶಾಸಕ ಭೈರತಿ ಸುರೇಶ್, ಈ ರಾಜ್ಯದಲ್ಲಿ ಮತ್ತೊಮ್ಮೆ ಕಾಂಗ್ರೆಸ್ ಅಧಿಕಾರಕ್ಕೆ ಬಂದು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಆಗುವಂತಾಗಲಿ, ಈ ರಾಜ್ಯದ ಜನತೆ ಕೂಡ ಸಿದ್ದರಾಮಯ್ಯನವರು ಮತ್ತೊಮ್ಮೆ ಸಿಎಂ ಆಗಬೇಕೆಂದು ಬಯಸುತ್ತಿದ್ದಾರೆ, ಇದಕ್ಕೆ ನಿಮ್ಮೆಲ್ಲರ ಆಶೀರ್ವಾದ ಬೇಕು ಎಂದು ಕೇಳಿಕೊಂಡರು. 

ನಿನ್ನೆಯಷ್ಟೇ ಡಿ ಕೆ ಶಿವಕುಮಾರ್, ತಾವು ಕಾಂಗ್ರೆಸ್ ನಲ್ಲಿ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಹೇಳಿಕೊಂಡಿದ್ದರು. ಅವರದೇ ಪಕ್ಷದ ಪ್ರಮುಖ ಶಾಸಕರೊಬ್ಬರು ಇಂದು ಈ ರೀತಿ ಹೇಳಿಕೆ ನೀಡಿರುವುದು ಕಾಂಗ್ರೆಸ್ ನಲ್ಲಿ ಬಣ ರಾಜಕೀಯವಿದೆ ಎಂಬುದಕ್ಕೆ ಕೈಗನ್ನಡಿಯಾಗಿದೆ.

SCROLL FOR NEXT