ರಾಹುಲ್ ಗಾಂಧಿ 
ರಾಜಕೀಯ

ತೋಡೋ ಪಿತಾಮಹನ ಮರಿಮಗನಿಂದ ಭಾರತ ಜೋಡೋ ಸಾಧ್ಯವೇ? ಹಿಂದೂಗಳ ಪೂಜನೀಯ ಗೋವಿನ ಹತ್ಯೆಗೆ ರಾಹುಲ್‌ ಸಮ್ಮತಿಯಿದೆಯೇ?

ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?, ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?

ಬೆಂಗಳೂರು: ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?, ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ? ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ನೇತೃತ್ವದಲ್ಲಿ ನಡೆಸುತ್ತಿರುವ ‘ಭಾರತ್ ಜೋಡೊ ಯಾತ್ರೆ’ ಕುರಿತು ಬಿಜೆಪಿ ಲೇವಡಿ ಮಾಡಿದೆ.

ಈ ಸಂಬಂಧ ಟ್ವೀಟ್ ಮಾಡಿರುವ ಬಿಜೆಪಿ, ಭಾರತದ ಐಕ್ಯಾತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ವಾಗ್ದಾಳಿ ನಡೆಸಿದೆ.  ಭಾರತ್ ಜೋಡೊ ಯಾತ್ರೆ ಕುರಿತು ಸರಣಿ ಟ್ವೀಟ್ ಮಾಡಿರುವ ಬಿಜೆಪಿ, ‘ಭಾರತದ ವಿಭಜನೆಯ ಪಿತಾಮಹನ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?, ತನ್ನ ಅಧಿಕಾರದ ಹಪಹಪಿಗೆ ದೇಶವಾಸಿಗಳ ರಕ್ತಹರಿಸಿದ ಪಕ್ಷದಿಂದ ಭಾರತದ ಐಕ್ಯತೆ ಸಾಧ್ಯವೇ?, ಭಾರತದ ಐಕ್ಯಾತಾ ಯಾತ್ರೆಯ ನಿಜವಾದ ಅಜೆಂಡಾ ಭಾರತ ವಿಭಜನೆಯೇ ಆಗಿದೆ’ ಎಂದು ವಾಗ್ದಾಳಿ ನಡೆಸಿದೆ.

‘ರಾಹುಲ್ ಗಾಂಧಿ ಯಾತ್ರೆ ಹಿಂದೂ ವಿರೋಧಿ ಯಾತ್ರೆಯಾಗಿ ಬದಲಾಗುತ್ತಿದೆ. ತಮಿಳುನಾಡಿನಿಂದ ಆರಂಭಗೊಂಡ ಯಾತ್ರೆ ಹೆಜ್ಜೆ ಹೆಜ್ಜೆಗೂ ಹಿಂದೂಗಳನ್ನು ಅವಮಾನಿಸುತ್ತಿದೆ. ಹಿಂದೂ ಸಮಾಜವನ್ನು ಕೆಣಕಿ ನಿಮ್ಮ ಮತ ಬ್ಯಾಂಕ್‌  ಗಟ್ಟಿಗೊಳಿಸುವ ಹುನ್ನಾರವೇ ಇದು’ ಎಂದು ಬಿಜೆಪಿ ಪ್ರಶ್ನಿಸಿದೆ.

‘ಕೇರಳದಲ್ಲೂ ಹಿಂದೂ ದ್ವೇಷವನ್ನು ರಾಹುಲ್‌ ಗಾಂಧಿ ಮುಂದುವರೆಸಿದ್ದಾರೆ. ನಡುಬೀದಿಯಲ್ಲಿ ಗೋವಿನ ತಲೆ ಕಡಿದ ಯುವ ಕಾಂಗ್ರೆಸ್‌ ಮುಖಂಡನೊಂದಿಗೆ ಪಾದಯಾತ್ರೆ ಮಾಡುವ ಮೂಲಕ ರಾಹುಲ್‌ ಗಾಂಧಿ ಬಹುಸಂಖ್ಯಾತ ಹಿಂದೂಗಳನ್ನು ಅಪಮಾನಿಸಿದ್ದಾರೆ. ಹಿಂದೂಗಳ ಪೂಜನೀಯ ಗೋವಿನ ಹತ್ಯೆಗೆ ರಾಹುಲ್‌ ಗಾಂಧಿ ಅವರ ಸಮ್ಮತಿಯಿದೆಯೇ’ ಎಂದು ಬಿಜೆಪಿ ಟೀಕಿಸಿದೆ.

‘ತಮಿಳುನಾಡು, ಕೇರಳದಲ್ಲಿ ತೋರಿದ ಹಿಂದೂ ದ್ವೇಷವನ್ನು ರಾಹುಲ್ ಗಾಂಧಿ ಕರ್ನಾಟಕದಲ್ಲೂ ಬಿಡಲಿಲ್ಲ. ಮತಾಂಧರ ಮೂಲಕ ಡಿ.ಜೆ ಹಳ್ಳಿಯ ಹಿಂದೂಗಳ ಮನೆಗೆ ಬೆಂಕಿಹಚ್ಚಲು ಪ್ರಚೋದನೆ ನೀಡಿದ ಸಂಪತ್‌ ರಾಜ್‌ ಯಾತ್ರೆಯಲ್ಲಿ ರಾಹುಲ್‌ ಜೊತೆ ಹೆಜ್ಜೆ ಹಾಕಿದ್ದಾನೆ. ಕಾಂಗ್ರೆಸ್ಸಿಗರೇ, ಯಾತ್ರೆಯ ಹೆಸರನ್ನು ಹಿಂದೂ ವಿರೋಧಿ ಯಾತ್ರೆ ಎಂದು ಬದಲಾಯಿಸಿಕೊಳ್ಳುವಿರಾ’ ಎಂದು ಬಿಜೆಪಿ ಕಿಡಿಕಾರಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ