ಸಿಎಂ ಬೊಮ್ಮಾಯಿ 
ರಾಜಕೀಯ

ಸಚಿವ ಸಂಪುಟ ವಿಸ್ತರಣೆ: ಸದ್ಯದಲ್ಲಿಯೇ ಸಿಎಂ ಬೊಮ್ಮಾಯಿ ದೆಹಲಿಗೆ

ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರ ಒಪ್ಪಿಗೆ ಪಡೆಯಲು ಶೀಘ್ರವೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಅವರು ವಿಜಯಪುರದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲ ಸಂಗ್ರಹಾಗಾರದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ಮಾತನಾಡಿದರು.

ಬಾಗಲಕೋಟೆ/ವಿಜಯಪುರ: ಸಚಿವ ಸಂಪುಟ ವಿಸ್ತರಣೆಗೆ ಕೇಂದ್ರ ನಾಯಕರ ಒಪ್ಪಿಗೆ ಪಡೆಯಲು ಶೀಘ್ರವೇ ದೆಹಲಿಗೆ ತೆರಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನಿನ್ನೆ ಅವರು ವಿಜಯಪುರದ ಆಲಮಟ್ಟಿಯ ಲಾಲ್ ಬಹದ್ದೂರ್ ಶಾಸ್ತ್ರಿ ಜಲ ಸಂಗ್ರಹಾಗಾರದಲ್ಲಿ ಕೃಷ್ಣಾ ನದಿಗೆ ಬಾಗಿನ ಅರ್ಪಿಸಿ ಮಾತನಾಡಿದರು. ಪಕ್ಷದ ಕೇಂದ್ರ ನಾಯಕರ ಒಪ್ಪಿಗೆ ಪಡೆದ ನಂತರ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ಹೇಳಿದ್ದಾರೆ. 

ಕೇಂದ್ರವು ಐದು ವರ್ಷಗಳ ಕಾಲ ಪಿಎಫ್‌ಐ ಅನ್ನು ನಿಷೇಧಿಸಿರುವ ಕುರಿತು ಕೇಳಿದಾಗ, “ಕಾಂಗ್ರೆಸ್ ಕೂಡ ಸಂಘಟನೆಯನ್ನು ನಿಷೇಧಿಸಬೇಕೆಂದು ಒತ್ತಾಯಿಸಿತ್ತು. ವಿಧಾನಸಭೆಯ ಒಳಗೆ ಮತ್ತು ಹೊರಗೆ ಈ ವಿಷಯವನ್ನು ಪ್ರಸ್ತಾಪಿಸಿತ್ತು. ಬಿಜೆಪಿ ಸರ್ಕಾರ ಅಂತಿಮವಾಗಿ ಉತ್ತಮ ನಿರ್ಧಾರವನ್ನು ತೆಗೆದುಕೊಂಡಿದೆ, ಇದನ್ನು ಅನೇಕರು ಸ್ವಾಗತಿಸಿದ್ದಾರೆ.

“ಆರ್‌ಎಸ್‌ಎಸ್ ಒಂದು ರಾಷ್ಟ್ರೀಯವಾದಿ ಸಂಘಟನೆಯಾಗಿದೆ. ಇದನ್ನು ಪಿಎಫ್‌ಐನಂತಹ ದೇಶವಿರೋಧಿ ಸಂಘಟನೆಯೊಂದಿಗೆ ಹೋಲಿಸಬಾರದು. ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎರಡು ಸಂಘಟನೆಗಳ ನಡುವೆ ಹೋಲಿಕೆ ಮಾಡುವುದು ಮೂರ್ಖತನವಾಗಿದೆ ಎಂದರು. 

ಆಲಮಟ್ಟಿ ಅಣೆಕಟ್ಟಿನ ಎತ್ತರವನ್ನು 519.6 ಮೀಟರ್‌ನಿಂದ 524 ಮೀಟರ್‌ಗೆ ಹೆಚ್ಚಿಸುವ ಕುರಿತು ಮಾತನಾಡಿದ ಅವರು, ಈ ಬೇಡಿಕೆಯನ್ನು ಪೂರೈಸುವುದು ಪಕ್ಷದ ಪ್ರಮುಖ ಗುರಿಯಾಗಿದೆ. ಕೃಷ್ಣಾ ಜಲವಿವಾದ ನ್ಯಾಯಮಂಡಳಿಯ ವಿಷಯ ಸುಪ್ರೀಂ ಕೋರ್ಟ್‌ನಲ್ಲಿ ಇರುವುದರಿಂದ, ಈ ವಿಷಯವನ್ನು ಶೀಘ್ರವಾಗಿ ಇತ್ಯರ್ಥಪಡಿಸಲಾಗುವುದು. ಕೇಂದ್ರ ಸರ್ಕಾರವು ಗೆಜೆಟ್ ಅಧಿಸೂಚನೆಯನ್ನು ಹೊರಡಿಸಿದ ತಕ್ಷಣ, ರಾಜ್ಯ ಸರ್ಕಾರವು ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳುತ್ತದೆ. ನೀರಾವರಿಗಾಗಿ ಹೆಚ್ಚುವರಿ ನೀರಿನ ಹಂಚಿಕೆಯನ್ನು ಬಳಸಿಕೊಳ್ಳಲು ಜಲಾಶಯದ ಎತ್ತರವನ್ನು ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್