ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಮಳೆಯಲ್ಲೇ ರಾಹುಲ್ ಗಾಂಧಿ ಭಾಷಣ ಮಾಡಿದ್ದು ಸುದ್ದಿಯೇ ಅಲ್ಲ: ರಮ್ಯಾ!

ಭಾರತ ಜೋಡೋ ಯಾತ್ರೆ ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಮ್ಯಾ ಮತ್ತು ರಾಹುಲ್ ಗಾಂಧಿ
Shilpa D
Updated On : 5 Oct 2022, 3:39 pm

ಬೆಂಗಳೂರು: ಭಾರತ ಜೋಡೋ ಯಾತ್ರೆ  ಯಲ್ಲಿ ಬ್ಯುಸಿಯಾಗಿರುವ ಕೈ ನಾಯಕ ರಾಹುಲ್ ಭಾನುವಾರ ಜಡಿ ಮಳೆ ಸುರಿಯುತ್ತಿದ್ದರೂ ಭಾಷಣ ಮಾಡಿದ್ದರು. ಮಳೆಯನ್ನೂ ಲೆಕ್ಕಿಸದೆ ರಾಹುಲ್ ಗಾಂಧಿ ಭಾಷಣ ಮಾಡುತ್ತಿರುವ  ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.

ರಾಹುಲ್ ಗಾಂಧಿ ಮಳೆಯಲ್ಲಿಯೇ ಭಾಷಣ ಮಾಡುತ್ತಿರುವ ವಿಡಿಯೋವನ್ನು ಸ್ಯಾಂಡಲ್‍ವುಡ್ ಕ್ವೀನ್ ರಮ್ಯಾ  ಕೂಡ ಶೇರ್ ಮಾಡಿಕೊಂಡು ಕ್ಯಾಪ್ಷನ್ ಕೊಟ್ಟಿದ್ದಾರೆ. ಇಲ್ಲಿ ರಾಹುಲ್ ಗಾಂಧಿ ಮಳೆಯಲ್ಲಿ ಭಾಷಣ ಮಾಡುತ್ತಿರುವುದು ಸುದ್ದಿಯಲ್ಲ, ಆ ಜಿಡಿ ಮಳೆಯಲ್ಲಿಯೂ ಭಾಷಣ ಕೇಳಲು ಸಾಕಷ್ಟು ಮಂದಿ ನೆರೆದಿರುವುದೇ ವಿಶೇಷ. ಜನ ನೆರೆದಿರುವುದೇ ಎಲ್ಲವನ್ನೂ ನಿಮಗೆ ತಿಳಿಸುತ್ತದೆ. ಅಂದರೆ ರಾಹುಲ್ ಗಾಂಧಿ ಭಾಷಣ ಕೇಳಲು ಜನ ಕಿಕ್ಕಿರಿದು ನಿಂತಿರುವುದು ಗಮನಸೆಳೆದಿದೆ ಎಂದು ಹೇಳುವ ಮೂಲಕ ರಮ್ಯಾ ಅವರು ಕೈ ನಾಯಕನನ್ನು ಹಾಡಿ ಹೊಗಳಿದ್ದಾರೆ.

ಸಂಜೆ 6.40ರ ಸುಮಾರಿಗೆ ಬಂಡೀಪಾಳ್ಯ ಸಮೀಪಿಸುತ್ತಿದ್ದಂತೆಯೇ ಜೋರು ಮಳೆಯಾಗಿದೆ. ಈ ವೇಳೆ ಎಪಿಎಂಸಿ ಸಮೀಪದಲ್ಲಿ ನಡೆದ ಕಾರ್ನರ್ ಮೀಟಿಂಗ್‍ನಲ್ಲಿ ಮಳೆಯಲ್ಲೇ ಭಾಷಣ ಮಾಡಿದ ರಾಹುಲ್, ಕೇಂದ್ರ ಮತ್ತು ರಾಜ್ಯ ಸರ್ಕಾರದ ಜನ ವಿರೋಧಿ ಧೋರಣೆ ವಿರುದ್ಧ ಧ್ವನಿ ಎತ್ತುತ್ತಲೇ ಇರುತ್ತೇನೆ. ಯಾವ ಕಾರಣಕ್ಕೂ ಯಾತ್ರೆ ನಿಲ್ಲುವುದಿಲ್ಲ. ಈಗ ಮಳೆ ಬರುತ್ತಿದೆ, ಹಾಗೆಂದು ಪಾದಯಾತ್ರೆ ನಿಲ್ಲಿಸಿದ್ದೇವೆಯೇ ಎಂದು ಪ್ರಶ್ನಿಸಿದರು.

Advertisement

Advertisement

ಇದನ್ನೂ ಓದಿ: 29 ವರ್ಷಗಳ ವೈಷಮ್ಯ, ದ್ವೇಷ ಮರೆತು ಒಂದಾದ ಲಿಂಗಾಯತರು-ದಲಿತರು: ರಾಹುಲ್ ಗಾಂಧಿಯವರ ಭಾರತ್ ಜೋಡೋ ಯಾತ್ರೆಯ ಕೃಪೆ!

ರಾಹುಲ್ ಗಾಂಧಿ ನೇತೃತ್ವದಲ್ಲಿ ನಡೆಯುತ್ತಿರುವ ಭಾರತ್ ಜೋಡೋ ಪಾದಯಾತ್ರೆ ಭಾನುವಾರ ಮೈಸೂರು  ತಲುಪಿದೆ. ಬಂಡೀಪಾಳ್ಯ ಸಮೀಪ ಆಯೋಜಿಸಿದ್ದ ಕಾರ್ಯಕರ್ತರ ಸಭೆಯಲ್ಲಿ ರಾಹುಲ್ ಗಾಂಧಿ ಭಾಷಣದ ವೇಳೆ ಭಾರೀ ಮಳೆಯಾಗಿದೆ. ಮಳೆಯಲ್ಲಿಯೂ ರಾಹುಲ್ ಗಾಂಧಿ ಭಾಷಣ ಮಾಡಿ ಎಲ್ಲರ ಗಮನ ಸೆಳೆದಿದ್ದಾರೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement