ಎಚ್.ಡಿ ಕುಮಾರಸ್ವಾಮಿ 
ರಾಜಕೀಯ

ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವ, ಲಕ್ಷೋಪಲಕ್ಷ ಹಳ್ಳಿಗಳಲ್ಲಿ ನೀರಿಲ್ಲ: ಸತ್ಯ ಸ್ಥಿತಿ ಹೀಗಿದ್ದ ಮೇಲೆ ಅಚ್ಛೇದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ?

ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಲಕ್ಷೋಪಲಕ್ಷ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ. ಸತ್ಯ ಸ್ಥಿತಿ ಹೀಗಿದ್ದ ಮೇಲೆ ಅಚ್ಛೇದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ?

ಬೆಂಗಳೂರು: ಭಾರತದ ಉದ್ದಗಲಕ್ಕೂ ಅಪೌಷ್ಠಿಕತೆ ತಾಂಡವವಾಡುತ್ತಿದೆ. ಲಕ್ಷೋಪಲಕ್ಷ ಹಳ್ಳಿಗಳಿಗೆ ಶುದ್ಧ ಕುಡಿಯುವ ನೀರೇ ಇಲ್ಲ. ಸತ್ಯ ಸ್ಥಿತಿ ಹೀಗಿದ್ದ ಮೇಲೆ ಅಚ್ಛೇದಿನದ ಆತ್ಮಾವಲೋಕನಕ್ಕೆ ಅಂಜಿಕೆ ಏಕೆ? ಎಂದು ಮಾಜಿ ಸಿಎಂ ಎಚ್.ಡಿ ಕುಮಾರಸ್ವಾಮಿ ಪ್ರಶ್ನಿಸಿದ್ದಾರೆ.

ದೇಶದ ಇಂದಿನ ಪರಿಸ್ಥಿತಿಯ ಕುರಿತು ಆರ್‌ಎಸ್‌ಎಸ್‌ ಮುಖಂಡ ದತ್ತಾತ್ರೇಯ ಹೊಸಬಾಳೆ ನೀಡಿರುವ ಹೇಳಿಕೆಯನ್ನು ಉಲ್ಲೇಖಿಸಿ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಸರಣಿ ಟ್ವೀಟ್‌ ಮಾಡಿದ್ದಾರೆ.

ಆರ್ಥಿಕ ಅಸಮಾನತೆ, ಬಡತನ, ನಿರುದ್ಯೋಗ ಅತ್ಯಂತ ಅಪಾಯಕಾರಿ ಎಂದು ಬಿಜೆಪಿ ಮಾತೃಸಂಸ್ಥೆ ಆರ್‌ಎಸ್‌ಎಸ್‌ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ದತ್ತಾತ್ರೇಯ ಹೊಸಬಾಳೆ ಹೇಳಿಕೆ ನೀಡಿದ್ದಾರೆ. ಇದು ಭಾರತದ ಸದ್ಯದ ಸ್ಥಿತಿಗೆ ಹಿಡಿದ ಕನ್ನಡಿ. ಈಗ ಅಚ್ಛೇ ದಿನದ ಅಸಲಿಯತ್ತಿನ ಬಗ್ಗೆ ದೊಡ್ಡ ಪ್ರಶ್ನೆಯೇ ಮೂಡಿದೆ’ ಎಂದು ಎಚ್‌ಡಿಕೆ ಹೇಳಿದ್ದಾರೆ.

‘ಕಳೆದ 7 ವರ್ಷದ ಬಿಜೆಪಿ ಆಡಳಿತದಲ್ಲಿ ಯಾರು ಉದ್ಧಾರ ಆಗಿದ್ದಾರೆ? ಯಾರು ಹಾಳಾಗಿದ್ದಾರೆ? ಎನ್ನುವುದನ್ನು ಹೇಳಲು ವಿಶೇಷ ಪಾಂಡಿತ್ಯವೇನೂ ಬೇಕಿಲ್ಲ. 20 ಕೋಟಿ ಜನ ಬಡತನ ರೇಖೆಗಿಂತ ಕೆಳಗಿದ್ದಾರೆ. 4 ಕೋಟಿ ಯುವಕರಿಗೆ ಉದ್ಯೋಗವೇ ಇಲ್ಲ ಎಂದು ಹೊಸಬಾಳೆ ಅವರೇ ಹೇಳಿದ್ದಾರೆ. ಹಾಗಾದರೆ, ಕಳೆದ 7 ವರ್ಷಗಳಲ್ಲಿ ಶ್ರೀಮಂತರಾದವರು ಯಾರು’ ಎಂದು ಪ್ರಶ್ನಿಸಿದ್ದಾರೆ.

‘23 ಕೋಟಿ ಜನರ ದಿನದ ಆದಾಯ 375 ರೂ.ಗಿಂತ ಕಡಿಮೆ ಇದೆ. ಆದರೆ, ಉದ್ಯಮಿ ಒಬ್ಬರು ಗಂಟೆಗೆ 42 ಕೋಟಿ, ವಾರಕ್ಕೆ 6,000 ಕೋಟಿ ರೂ. ಸಂಪಾದನೆ ಮಾಡುತ್ತಿದ್ದಾರೆ. ಇದು ಸದ್ಯದ ಭಾರತದ ಚಿತ್ರಣ. ದೇಶದ ಶೇ.20ರಷ್ಟು ಆದಾಯ ಶೇ.1ರಷ್ಟು ಜನರ ಕೈಯ್ಯಲ್ಲಿದೆ ಎಂದರೆ ಇದಕ್ಕಿಂತ ಆಘಾತಕಾರಿ ಸಂಗತಿ ಮತ್ತೊಂದು ಇದೆಯಾ? ಇದು ಹೊಸಬಾಳೆ ಅವರ ಪ್ರಶ್ನೆ’ ಎಂದು ಟ್ವೀಟ್ ಮಾಡಿದ್ದಾರೆ.

ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆ ಮಹಾ ಆಕ್ರೋಶಕ್ಕೆ ಕಾರಣವಾದರೂ ಅಚ್ಚರಿ ಇಲ್ಲ. 'ಕಾರ್ಪೋರೇಟ್ ರಾಜ್ಯ'ದ ಕಬಂಧ ಬಾಹುಗಳಲ್ಲಿ ಭಾರತ ಸಿಕ್ಕಿಬಿದ್ದಿರುವುದು ದೇಶದ ಭವಿಷ್ಯಕ್ಕೆ ಒಳ್ಳೆಯದಲ್ಲ. ಜನರ ಅಸಹನೆ, ಬೇಗುದಿ ದಿನೇದಿನೆ ಹೆಚ್ಚುತ್ತಿದೆ. ಕೇಂದ್ರದ ಬಿಜೆಪಿ ಸರಕಾರ ಎಚ್ಚೆತ್ತುಕೊಳ್ಳಲು ಇದು ಸಕಾಲ’ ಎಂದು ತಿಳಿಸಿದ್ದಾರೆ.

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹೊತ್ತಿನಲ್ಲೂ ಭಾರತದ ಮೇಲೆ ಆರ್ಥಿಕ ಅಸಮಾನತೆಯ ಕಪ್ಪುಚುಕ್ಕೆ ಇದೆ. ದೇಶದಲ್ಲಿ ಇನ್ನೂ ಒಪ್ಪತ್ತಿನ ಊಟಕ್ಕೂ ತತ್ವಾರ ಇರುವ ಜನರೂ ಇದ್ದಾರೆಂದರೆ ಅದು 'ರಾಷ್ಟ್ರೀಯ ಅಪಮಾನ' ಅಲ್ಲದೆ ಮತ್ತೇನು? ಹೊಸಬಾಳೆ ಅವರು ನೀಡಿರುವ ಅಂಕಿ-ಅಂಶ ನನಗೆ ಆಘಾತ ಉಂಟು ಮಾಡಿದೆ’ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT