ಬಿಜೆಪಿ ಕಾರ್ಯಕಾರಿಣಿ ಸಭೆ 
ರಾಜಕೀಯ

ವಿಧಾನಸಭೆ ಚುನಾವಣೆಗೆ ಸಿದ್ಧತೆ: ವಿರೋಧ ಪಕ್ಷ ಕಾಂಗ್ರೆಸ್ ಹತ್ತಿಕ್ಕಲು ಬಿಜೆಪಿ ಕಾರ್ಯಕಾರಿಣಿಯಲ್ಲಿ ರಣತಂತ್ರ!

ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಮುಂದಿನ ಚುನಾವಣೆಗೆ ಕಾರ್ಯ, ತಂತ್ರಗಳ ಬಗ್ಗೆ ಚರ್ಚೆಯಾಗಿವೆ. ಅಲ್ಲದೇ ಚುನಾವಣೆಗಾಗಿ ಕೆಲ ಮಹತ್ವದ ತೀರ್ಮಾನಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

ಬೆಂಗಳೂರು: ಬೆಂಗಳೂರಿನಲ್ಲಿ ನಡೆದ ರಾಜ್ಯ ಬಿಜೆಪಿ ಕಾರ್ಯಕಾರಣಿ ಸಭೆ ನಡೆದಿದ್ದು, ಈ ಸಭೆಯಲ್ಲಿ ಮುಂದಿನ ಚುನಾವಣೆಗೆ ಕಾರ್ಯ, ತಂತ್ರಗಳ ಬಗ್ಗೆ ಚರ್ಚೆಯಾಗಿವೆ. ಅಲ್ಲದೇ ಚುನಾವಣೆಗಾಗಿ ಕೆಲ ಮಹತ್ವದ ತೀರ್ಮಾನಗಳನ್ನು ಸಭೆಯಲ್ಲಿ ತೆಗೆದುಕೊಳ್ಳಲಾಗಿದೆ.

2013ರಿಂದ 18ರ ಅವಧಿಯಲ್ಲಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಲೋಕಾಯುಕ್ತ ಸಂಸ್ಥೆಯನ್ನು ದುರ್ಬಲಗೊಳಿಸಲು ಎಸಿಬಿ ಸ್ಥಾಪಿಸುವ ಮೂಲಕ ವ್ಯಾಪಕ ಭ್ರಷ್ಟಾಚಾರದಲ್ಲಿ ತೊಡಗಿದೆ ಎಂದು ಕಾಂಗ್ರೆಸ್ ಖಂಡಿಸುವ ನಿರ್ಣಯವನ್ನು ಅಂಗೀಕರಿಸಿತು.

ಎಸಿಬಿ ರದ್ದುಗೊಳಿಸಿದ ಕರ್ನಾಟಕ ಹೈಕೋರ್ಟ್ ತೀರ್ಪು ಸಿದ್ದರಾಮಯ್ಯ ಅವರ ಮುಖಕ್ಕೆ ಹೊಡೆದಂತಾಗಿದೆ ಎಂದು ಅದು ಹೇಳಿದೆ. ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಪಿಎಫ್‌ಐ ಅನ್ನು ನಿಷೇಧಿಸಿದ್ದಕ್ಕಾಗಿ ಅಭಿನಂದಿಸಿ ಮತ್ತೊಂದು ನಿರ್ಣಯವನ್ನು ಅಂಗೀಕರಿಸಲಾಯಿತು.

ಚುನಾವಣಾ ಪ್ರಚಾರದ ಅಂಗವಾಗಿ ಯಾತ್ರೆ ಕೈಗೊಳ್ಳಲಿರುವ ಬಿಜೆಪಿ ನಾಯಕರು ಡಬಲ್ ಇಂಜಿನ್ ರಾಜ್ಯ-ಕೇಂದ್ರ ಸರ್ಕಾರಗಳು ಮಾಡಿರುವ ಒಳ್ಳೆಯ ಕೆಲಸಗಳ ಬಗ್ಗೆ ಜಾಗೃತಿ ಮೂಡಿಸಿ ಬೊಮ್ಮಾಯಿ ಸರ್ಕಾರವನ್ನು ರಕ್ಷಿಸಬೇಕು ಎಂದು ಒತ್ತಾಯಿಸಿದರು.

ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ  ಸಂಘಟನೆಯನ್ನು ನಿಷೇಧ ಮಾಡಿದ ಕೇಂದ್ರ ಸರ್ಕಾರದ ನಿರ್ಧಾರವನ್ನು ಬಿಜೆಪಿ ಕಾರ್ಯಕಾರಿಣಿ ಸಭೆಯಲ್ಲಿ ನಿರ್ಣಯದ ಮೂಲಕ ಶ್ಲಾಘನೆ ವ್ಯಕ್ತಪಡಿಸಲಾಗಿದೆ. ಅದೇ ರೀತಿ ಮಾಜಿ ಸಿಎಂ ಸಿದ್ದರಾಮಯ್ಯ ಅವಧಿಯ ಭ್ರಷ್ಟಾಚಾರ ಹಾಗೂ ಭಾರತ್ ಜೋಡೋ ಯಾತ್ರೆಯ ಬಗ್ಗೆ ಸಭೆಯಲ್ಲಿ ಖಂಡನಾ ನಿರ್ಣಯ ಕೈಗೊಳ್ಳಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಪಿಎಫ್‌ಐ ಪರ ನಿಲುವು ಹಾಗೂ ಪಿಎಫ್‌ಐ ಕಾರ್ಯಕರ್ತರ ವಿರುದ್ಧದ ಕೇಸ್ ವಾಪಸ್ ಪಡೆದುಕೊಂಡ ನಡೆಗೆ ಸಭೆಯಲ್ಲಿ ಖಂಡನೆ ವ್ಯಕ್ತಪಡಿಸಲಾಗಿದೆ.

ಕಾಂಗ್ರೆಸ್​ನ ಪೇ ಸಿಎಂ ಕ್ಯಾಂಪೇನ್​ ವಿರುದ್ಧ ಅರುಣ್ ಸಿಂಗ್ ಗರಂ ಆಗಿದ್ದಾರೆ. ಅಭಿಯಾನ ನಡೆಯುವವರೆಗೂ ಸರ್ಕಾರ ಏನು ಮಾಡ್ತಿತ್ತು? ಸಚಿವರು ಏನ್ ಮಾಡ್ತಾ ಇದ್ದರು ಎಂದು ಪ್ರಶ್ನೆಗಳ ಮೂಲಕ ನಾಯಕರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.. ‘ಪೇ ಸಿಎಂ’ ಅಭಿಯಾನ ದೇಶದಲ್ಲೇ ರಿಜಿಸ್ಟರ್ ಆಗಿದೆ. ಪೇ ಸಿಎಂಗೆ ಕೌಂಟರ್ ಕೊಡುವಲ್ಲಿ ರಾಜ್ಯ ಬಿಜೆಪಿ ವಿಫಲವಾಗಿದೆ ಎಂಬುದು ಅರುಣ್ ಸಿಂಗ್​ ಅಸಮಾಧಾನಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಸಿದ್ದರಾಮಯ್ಯ ಅವಧಿಯಲ್ಲಿ ನಡೆದ ಭ್ರಷ್ಟಾಚಾರದ ಬಗ್ಗೆಯೂ ನಿರ್ಣಯದಲ್ಲಿ ಉಲ್ಲೇಖ ಮಾಡಲಾಗಿದೆ. 'ರಿ ಡೂ' ಹೆಸರಿನಲ್ಲಿ ಸಿದ್ದರಾಮಯ್ಯ ಅವಧಿಯಲ್ಲಿ ಭ್ರಷ್ಟಾಚಾರ ನಡೆದಿದೆ ಎಂದು ಉಲ್ಲೇಖ ಮಾಡಲಾಗಿದೆ. ಕಾಂಗ್ರೆಸ್ ಅವಧಿಯಲ್ಲಿ ಶೇ 100 ರಷ್ಟು ಭ್ರಷ್ಟಾಚಾರ ನಡೆದಿದೆ. ಅಧಿಕಾರದಲ್ಲಿದ್ದಾಗ ಹಗರಣಗಳಲ್ಲೇ ಮುಳುಗಿದ್ದ ಕಾಂಗ್ರೆಸ್‌ಗೆ ಭ್ರಷ್ಟಾಚಾರದ ಬಗ್ಗೆ ಮಾತನಾಡುವ ನೈತಿಕತೆ ಇಲ್ಲ’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕಿಡಿ ಕಾರಿದರು.

‘ಸಿದ್ದರಾಮಯ್ಯ ಅವಧಿಯಲ್ಲಿ ಸಣ್ಣ ನೀರಾವರಿ ಇಲಾಖೆಯಲ್ಲಿ ಹಗರಣ ನಡೆಯಿತು. ಒಂದೇ ದಿನದಲ್ಲಿ 36 ಸಾವಿರ ಕೊಳವೆಬಾವಿ ಕೊರೆದ ಹಗರಣ, ಪೊಲೀಸ್‌ ನೇಮಕಾತಿ, ಶಿಕ್ಷಕರ ನೇಮಕಾತಿ, ಪ್ರಾಸಿಕ್ಯೂಟರ್‌ಗಳ ನೇಮಕಾತಿಯಲ್ಲಿ ಲಂಚದ ಹಗರಣ, ವಿವಿಧ ಕಾಮಗಾರಿಗಳಲ್ಲಿ ಭ್ರಷ್ಟಾಚಾರ, ದೇಶ ದ್ರೋಹಿ ಸಂಘಟನೆ ಪಿಎಫ್‌ಐ ವಿರುದ್ಧದ ಪ್ರಕರಣಗಳನ್ನು ತೆಗೆದು ಹಾಕಿದ್ದು ಕಾಂಗ್ರೆಸ್‌ ಆಡಳಿತಾವಧಿಯ ಸಾಧನೆ. ರಾಜ್ಯದ ಜನತೆ ಕಾಂಗ್ರೆಸ್ ದುರಾಡಳಿತ ಮತ್ತು ಭ್ರಷ್ಟಾಚಾರ ಜನರ ಮನಸ್ಸಿನಲ್ಲಿ ಹಸಿರಾಗಿಯೇ ಇದೆ’ ಎಂದು ಅವರು ಹೇಳಿದರು.

150 ಸ್ಥಾನಗಳನ್ನು ಗೆಲ್ಲಲು ಕಾರ್ಯಕರ್ತರು ಸಮರ ಸನ್ನದ್ಧರಾಗಬೇಕು. ಅಸ್ತ್ರ, ಶಸ್ತ್ರ ನಮ್ಮಲಿದೆ. ನಾಯಕರೂ ಇದ್ದಾರೆ. ಹಗಲಿರುಳೆನ್ನದೇ ಶ್ರಮಿಸಿ ಪಕ್ಷವನ್ನು ಅಧಿಕಾರಕ್ಕೆ ತರಬೇಕು ಎಂದು ಬಿ.ಎಸ್ ಯಡಿಯೂರಪ್ಪ ಹೇಳಿದ್ದಾರೆ.    

ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಭಾರತದಿಂದ ಇಟಲಿಗೆ ಓಡಿಹೋಗಲು ದಾರಿ ಹುಡುಕುತ್ತಿದ್ದಾರೆ ಎಂದು ಪರೋಕ್ಷವಾಗಿ ಬಿಜೆಪಿ ರಾಜ್ಯಾಧ್ಯಕ್ಷ ನಳಿನ್‌ಕುಮಾರ್ ಕಟೀಲ್ ಆರೋಪಿಸಿದ್ದಾರೆ. “ಇಟಲಿಯ ಅಕ್ಕ ದಾರಿ ಹುಡುಕುತ್ತಿದ್ದಾರೆ. ಅರ್ಕಾವತಿ ಲೇಔಟ್ 'ರೀಡೋ' ಹಗರಣದಲ್ಲಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಎಲ್ಲಿ ಕೊನೆಗೊಳ್ಳುತ್ತಾರೋ ಕಾದು ನೋಡಿ,'' ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕಾಸ್ತ್ರ ಜಾರಿ: ಕೊನೆಗೆ ಒಟ್ಟಿಗೆ ಸೇರ್ತಿವಿ! US ಖಜಾನೆ ಮುಖ್ಯಸ್ಥ ಹಿಂಗ್ಯಾಕಂದ್ರು?

ಸಶಸ್ತ್ರ ಪಡೆಗಳು ಮುಂದಿನ ಭದ್ರತಾ ಸವಾಲುಗಳಿಗೆ ಸಿದ್ಧರಾಗಿರಬೇಕು: ರಾಜನಾಥ್ ಸಿಂಗ್

ಹಿಂದೂ ನಂಬಿಕೆ ಒಡೆಯುತ್ತಿರುವ ಬಾನು ಮುಷ್ತಾಕ್: ಶಿವನ ಬೆಟ್ಟವನ್ನೇ 'ಯೇಸು ಬೆಟ್ಟ' ಮಾಡಲು ಹೊರಟವರಿಂದ ಧರ್ಮದ ಪಾಠ ಬೇಡ- ಪ್ರತಾಪ್ ಸಿಂಹ

2030 Commonwealth Games: ಭಾರತದ ಬಿಡ್‌ಗೆ ಕೇಂದ್ರ ಸಂಪುಟ ಅನುಮೋದನೆ! ಅಹಮದಾಬಾದ್ ನಲ್ಲಿ ಆಯೋಜಿಸುವ ಪ್ರಸ್ತಾಪ!

'ಡೆವಿಲ್‌' ಸಿನಿಮಾದ '‘ಇದ್ರೆ ನೆಮ್ಮದಿಯಾಗ್ ಇರ್ಬೇಕ್' ಹಾಡಿಗೆ ಭರ್ಜರಿ ಸ್ಟೆಪ್ ಹಾಕಿದ ವಿನೋದ್ ರಾಜ್! Video

SCROLL FOR NEXT