ಹೆಚ್ ಡಿ ದೇವೇಗೌಡ 
ರಾಜಕೀಯ

ಜೆಡಿಎಸ್ ಉಳಿಸಲು ಜನರು ಶಕ್ತಿ ಕೊಡಬೇಕು: ಹೆಚ್.ಡಿ. ದೇವೇಗೌಡ

ಜೆಡಿಎಸ್ ಪಕ್ಷ ಉಳಿಸಲು ಜನರು ಶಕ್ತಿ ಕೊಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. 

ಬೆಂಗಳೂರು: ಜೆಡಿಎಸ್ ಪಕ್ಷ ಉಳಿಸಲು ಜನರು ಶಕ್ತಿ ಕೊಡಬೇಕು ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ. ದೇವೇಗೌಡ ಹೇಳಿದ್ದಾರೆ. ಬಸವನಗುಡಿ ಮೈದಾನದಲ್ಲಿಂದು ನಡೆದ ಜೆಡಿಎಸ್ ಸಮಾವೇಶದಲ್ಲಿ ಮಾತನಾಡಿದ ಅವರು, ನನಗೆ ಇನ್ನು ಹೋರಾಟ ಮಾಡುವ ಶಕ್ತಿ ಇದೆ. ರಾಜ್ಯದ ಎಲ್ಲಾ ಜಿಲ್ಲೆಗಳಿಗೂ ಭೇಟಿ ನೀಡುತ್ತೇನೆ, ಎಲ್ಲರೂ ಸೇರಿ ಪಕ್ಷ ಉಳಿಸಬೇಕಿದೆ. ಈ ನಿಟ್ಟಿನಲ್ಲಿ ಜನರು ಪಕ್ಷಕ್ಕೆ ಶಕ್ತಿ ನೀಡಿ ಎಂದು ಪುನರುಚ್ಚರಿಸಿದರು.

ಮುಂಬರುವ ಕಾರ್ಯಕಾರಿಣಿ ಸಭೆಯಲ್ಲೂ ಭಾಗಿಯಾಗ್ತೀನಿ. ಯಾವುದೇ ಒಂದು ಸಮಾಜಕ್ಕೆ ನೋವಾಗಲು ಬಿಡುವುದಿಲ್ಲ, ಜೊತೆಗೆ ಹೇಳಿದ ಮೇಲೆ ನಾವು ಕಾರ್ಯಗತ ಮಾಡಲೇಬೇಕು, ಮುಸ್ಲಿಂ ರಿಗೆ ಮೀಸಲಾತಿ ಅಂತ ಎಂದೂ ಹೇಳಿರಲಿಲ್ಲ ಆದರೂ ನಮ್ಮ ಸರ್ಕಾರದಲ್ಲಿ ಮಾಡಿದೆ ಎಂದು ಹೇಳಿದರು.

ನನ್ನ ಕಣ್ಣ ಮುಂದೆ ಜೆ ಡಿಎಸ್ ಅಧಿಕಾರಕ್ಕೆ ಬರೋದು ಸತ್ಯ. ಮತ್ತೆ ಕುಮಾರಸ್ವಾಮಿ ಮತ್ತೆ ಸಿಎಂ ಆಗುತ್ತಾರೆ, ಇದು ನಡೆದೆ ನಡೆಯುತ್ತದೆ ಯಾರಿಗೂ ಸಂಶಯ ಬೇಡ. ನನಗೆ ಇನ್ನೂ ಹೋರಾಟ ಮಾಡುವ ಶಕ್ತಿ ಇದೆ, ಕೊನೆಯವರೆಗೂ ರಾಜ್ಯದ ನೆಲ ಜಲದ ವಿಷಯದಲ್ಲಿ ಅನ್ಯಾಯವಾಗಲು ಬಿಡುವುದಿಲ್ಲ ಎಂದರು. 

ನಾನು ಸಿಎಂ ಆಗುವಾಗಲು ಹೋರಾಟ ಆಯ್ತು, ನಾನು 90ರ ದಶಕದಲ್ಲಿ ಏಕಾಂಗಿಯಾಗಿ ಹೋರಾಟ ಮಾಡಿದೆ. ನಾನು ಸಿಎಂ ಆಗಿದ್ದಾಗ ರಾಜ್ಯದಲ್ಲಿ 16 ಲೋಕಸಭಾ ಸ್ಥಾನ ಬಂತು. ಆಗ ಕೆಲವರು ಕುಮಾರಸ್ವಾಮಿ ಅವರನ್ನು ಹಠ ಮಾಡಿ ನೀವು ಲೋಕಸಭೆಗೆ ಹೋಗಿ ಅಂದ್ರು ಆಗ ಗೆದ್ದು ಬಂದರು ಎಂದು ವಿವರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ರಾಜ್ಯ ಸರ್ಕಾರಕ್ಕೆ 'ಸ್ಟಿಂಗ್ ಆಪರೇಷನ್' ಆತಂಕ: ಟ್ರ್ಯಾಪ್‌ಗೆ ಯತ್ನ ನಡೆಯುತ್ತಿದೆ, ಹುಷಾರಾಗಿರಿ ; 5 ಸಚಿವರಿಗೆ ಡಿಕೆಶಿ ಎಚ್ಚರಿಕೆ ಸಂದೇಶ

‘ವೈಯಕ್ತಿಕ ಮಹತ್ವಾಕಾಂಕ್ಷೆ ಅಲ್ಲ, ಧ್ಯೇಯಕ್ಕಾಗಿ ಬದುಕಿದ್ದೇನೆ, ದೇಶದ ಜನತೆಗೆ ತಲೆಬಾಗುತ್ತೇನೆ’: ಆಡಳಿತದಲ್ಲಿ 25 ವರ್ಷ ಪೂರೈಸಿದ ಪ್ರಧಾನಿ ಮೋದಿ ಮಾತು; Video

ಹಾಸನದ ಹೇಮಾವತಿ ನಾಲೆಯಲ್ಲಿ ಪ್ಲಾಸ್ಟಿಕ್‌ ಚೀಲದಲ್ಲಿ ವೃದ್ಧೆಯ ಶವ ಪತ್ತೆ: ಕೊಲೆ ಶಂಕೆ

ರಷ್ಯಾ ಕರಾವಳಿಯಲ್ಲಿ ಡ್ರೋನ್ ದಾಳಿ: ಹೊತ್ತಿ ಉರಿದ ತೈಲ ಟ್ಯಾಂಕರ್‌, 23 ಭಾರತೀಯ ಸಿಬ್ಬಂದಿ ಪಾರು..!

Lionel Messi: 21 ವರ್ಷಗಳ ಬಳಿಕ ತವರಿನಲ್ಲೇ ಫುಟ್ಬಾಲ್​ ದಿಗ್ಗಜ ಲಿಯೋನೆಲ್ ಮೆಸ್ಸಿ ಭಾವುಕ ವಿದಾಯ; ಹೇಗಿತ್ತು ನೋಡಿ ಅಂತಿಮ ಪಂದ್ಯ; Video