ದಲಿತ ಹಿರಾಳ ಕೊಲ್ಲಾರಪ್ಪ ಮನೆಯಲ್ಲಿ ಉಪಹಾರ ಸೇವನೆ 
ರಾಜಕೀಯ

ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ: ದಲಿತರ ಮನೆಯಲ್ಲಿ ಉಪಹಾರ ಸೇವಿಸಿದ ಸಿಎಂ, ಮಾಜಿ ಸಿಎಂ

ಇನ್ನು ಕೇವಲ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದರೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ಕೈಗೊಂಡಿದೆ. 

ವಿಜಯನಗರ: ಇನ್ನು ಕೇವಲ ಆರು ತಿಂಗಳಲ್ಲಿ ವಿಧಾನಸಭೆ ಚುನಾವಣೆ ನಡೆಯುತ್ತಿದೆ. ಇದಕ್ಕೂ ಮುನ್ನ ಕಾಂಗ್ರೆಸ್ ನಿಂದ ಭಾರತ್ ಜೋಡೋ ಯಾತ್ರೆ ನಡೆಯುತ್ತಿದ್ದರೆ ಬಿಜೆಪಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನೇತೃತ್ವದಲ್ಲಿ ಜನಸಂಕಲ್ಪ ಯಾತ್ರೆಯನ್ನು ಕೈಗೊಂಡಿದೆ. 

ಯಾತ್ರೆಯ ಅಂಗವಾಗಿ ಇಂದು ವಿಜಯನಗರ ಜಿಲ್ಲೆಯ ಕಮಲಾಪುರ ಗ್ರಾಮದ ಅಂಬೇಡ್ಕರ್ ಕಾಲೋನಿಯ ದಲಿತ ಕುಟುಂಬದ ಹಿರಾಳ ಕೊಲ್ಲಾರಪ್ಪ ಅವರ ಮನೆಗೆ ತೆರಳಿದ ಸಿಎಂ ಮತ್ತು ಮಾಜಿ ಸಿಎಂ ಅಲ್ಲಿ ಉಪಹಾರ ಸೇವಿಸಿ ಕುಟುಂಬದ ಸದಸ್ಯರೊಂದಿಗೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಆನಂದ್ ಸಿಂಗ್, ಶಾಸಕ ರಾಜುಗೌಡ ಹಾಜರಿದ್ದರು.

ಕೊಲ್ಲಾರಪ್ಪ ಮಕ್ಕಳು ಸಿಎಂಗೆ ಉಪಹಾರ ಸಿದ್ಧ ಮಾಡಿದ್ದು, ರೇಣುಕಾ, ಹುಲಿಗೆಮ್ಮ, ಅಂಬಮ್ಮರಿಂದ ಉಪಹಾರ ತಯಾರಿ ಮಾಡಿದ್ಧಾರೆ. ಸಿಎಂ ಬೊಮ್ಮಾಯಿ, ಯಡಿಯೂರಪ್ಪ ಮಂಡಕ್ಕಿ‌ ವಗ್ಗರಣೆ, ಉಪ್ಪಿಟ್ಟು, ಕೇಸರಿಬಾತ್, ಮಿರ್ಚಿ, ಚಹಾ ಸೇವಿಸಿದರು. ಸಿಎಂ, ಮಾಜಿ ಸಿಎಂ ಆಗಮನ ಹಿನ್ನೆಲೆಯಲ್ಲಿ ಇಡೀ ಅಂಬೇಡ್ಕರ್ ಕಾಲೊನಿ ಮದುವಣಗಿತ್ತಿಯಂತೆ ಸಿಂಗಾರಗೊಂಡಿತ್ತು. 

ಬಿಜೆಪಿ ಜನಸಂಕಲ್ಪ ಯಾತ್ರೆ ಇಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ನಡೆಯಲಿದೆ. ವಿಜಯನಗರ ನಂತರ ಕೊಪ್ಪಳ ಜಿಲ್ಲೆಯಲ್ಲಿ ಸಂಕಲ್ಪ ಯಾತ್ರೆ ನಡೆಯಲಿದೆ. ಸಿಎಂ ಬೊಮ್ಮಾಯಿ ಕೊಪ್ಪಳದ ಕುಷ್ಟಗಿಯಲ್ಲಿ ಸಮಾವೇಶ ನಡೆಸಿದ್ದಾರೆ. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಓಮನ್ ಕರಾವಳಿಯಲ್ಲಿ 11 ಭಾರತೀಯರಿದ್ದ ಹಡಗಿನ ಮೇಲೆ ದಾಳಿಗೆ ಭಾರತ ಖಂಡನೆ; 10 ಜನರ ರಕ್ಷಣೆ, ಓರ್ವ ನಾಪತ್ತೆ

ಅಸ್ಸಾಂ: ರೋಡ್ ರೋಲರ್ ಬಳಸಿ ಸೀಜ್ ಮಾಡಿದ್ದ 472 ಕೋಟಿ ರೂ. ಮೌಲ್ಯದ ಡ್ರಗ್ಸ್ ನಾಶಪಡಿಸಿದ ಸಿಎಂ ಹಿಮಂತ ಬಿಸ್ವಾ ಶರ್ಮಾ! Video

'Health camp' ಚಿಕಿತ್ಸೆಯಿಂದ ಕಾಲು ಕಳೆದುಕೊಂಡ ಮಹಿಳೆ! ಪೊಲೀಸರಿಗೆ ದೂರು, ಅಭಿಷೇಕ್ ಬ್ಯಾನರ್ಜಿ ವಿರುದ್ಧ ಕೇಸ್ ದಾಖಲು

Iranಗೆ ಅಮೆರಿಕಾ ಬಿಗ್ ಶಾಕ್: 140 ಗುರಿಗಳ ಮೇಲೆ ಭಾರೀ ವೈಮಾನಿಕ ದಾಳಿ; Gulf ರಾಷ್ಟ್ರಗಳತ್ತ ಕ್ಷಿಪಣಿ ಹಾರಿಸಿ Tehran ತಿರುಗೇಟು..!

KSRTC ಬಸ್‌ನಲ್ಲಿ ಯುವತಿಗೆ ಲೈಂಗಿಕ ಕಿರುಕುಳ: ಆರೋಪಿಗೆ ಧರ್ಮದೇಟು, ವಿಡಿಯೋ ವೈರಲ್