ಬಸವರಾಜ ಬೊಮ್ಮಾಯಿ-ಸಿದ್ದರಾಮಯ್ಯ 
ರಾಜಕೀಯ

ಮೋದಿ ವಿಶ್ವಗುರು ಅಲ್ಲ, ಪುಕ್ಕಲು ಗುರು; ಬಿಎಸ್‌ವೈ ಜೈಲು ಪಾಲಾಗದಂತೆ ನೋಡಿಕೊಳ್ಳಿ: ಸಿಎಂ ಬೊಮ್ಮಾಯಿಗೆ ಸಿದ್ದು ಸವಾಲ್

ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನನ್ನ ಎರಡೇ ಎರಡು ಸವಾಲು ಹಾಕಿದ್ದಾರೆ.

ಬೆಂಗಳೂರು: ಜನಸಂಕಲ್ಪ ಯಾತ್ರೆಗೆ ಹೊರಟಿರುವ ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ, ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ನನ್ನ ಎರಡೇ ಎರಡು ಸವಾಲು ಹಾಕಿದ್ದಾರೆ.

1. ಕಾರು-ಜೀಪು ಬಿಟ್ಟು ನಾಲ್ಕು ಕಿ.ಮೀ ಎಡವದೆ ನಡೆದುಕೊಂಡು ಹೋಗಿ.

2. ಸಿದ್ದರಾಮಯ್ಯ ಎಂಬ ಹೆಸರೆತ್ತದೆ ಐದು ನಿಮಿಷ ಭಾಷಣ ಮಾಡಿ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸವಾಲು ಹಾಕಿದ್ದಾರೆ.

ಅವರಿಂದು ಈ ಸಂಬಂಧ ಟ್ವೀಟ್ ಮಾಡಿದ್ದಾರೆ. ಅದರ ಪೂರ್ಣ ಮುಂದಿದೆ. ಮುಖ್ಯಮಂತ್ರಿ ಬಸವರಾಜ ಎಸ್. ಬೊಮ್ಮಾಯಿ ಅವರಿಗೆ ಒಬ್ಬಂಟಿಯಾಗಿ ಯಾತ್ರೆ ಹೊರಡುವ ಧೈರ್ಯ ಇಲ್ಲ, ಜನ ಕಲ್ಲು ಹೊಡೆಯುತ್ತಾರೋ ಎಂಬ ಭಯ. ಇದಕ್ಕಾಗಿ ರಕ್ಷಣೆಗಾಗಿ ಬಿ.ಎಸ್ ಯಡಿಯೂರಪಪ್ಪ ಅವರನ್ನು ಜೊತೆಯಲ್ಲಿ ಕರೆದುಕೊಂಡು ಬಂದಿದ್ದಾರೆ.

ಮುಖ್ಯಮಂತ್ರಿ ಸ್ಥಾನವನ್ನು ಕಿತ್ತುಕೊಂಡಾಗ ಬಹಿರಂಗವಾಗಿಯೇ ಬಿ.ಎಸ್ ಯಡಿಯೂರಪ್ಪ ಅವರ ಕಣ್ಣೀರು ಹಾಕಿದ್ದನ್ನು ರಾಜ್ಯದ ಜನ ನೋಡಿದ್ದಾರೆ. ಅವರ ಬೆನ್ನಿಗೆ ಇರಿದವರು ಯಾರು ಎನ್ನುವುದೂ ಜನರಿಗೆ ಗೊತ್ತು. ಯಡಿಯೂರಪ್ಪನವರನ್ನು ಕರೆದುಕೊಂಡು ಬಂದ ಕೂಡಲೇ ಜನ ನಿಮ್ಮ ದ್ರೋಹವನ್ನು ಮರೆಯಲಾರರು.

ಬಿಜೆಪಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರೇ ಹೇಳುವಂತೆ ಮುಖ್ಯಮಂತ್ರಿ ಬಸವರಾಜ ಎಸ್ ಬೊಮ್ಮಾಯಿ 'ಎರಡುವರೆ ಸಾವಿರ ಕೋಟಿ ರೂಪಾಯಿಯ ಪೇ ಸಿಎಂ' ಹೈಕಮಾಂಡ್ ಗೆ ಸರಿಯಾಗಿ ಕಂತು ಪಾವತಿಯಾದರೆ ಮಾತ್ರ ಅವರು ಸುರಕ್ಷಿತ ತಪ್ಪಿದರೆ ಮನೆಗೆ ಎಂದು ಹೇಳಿದರು. 

ರಾಹುಲ್ ಗಾಂಧಿಯವರನ್ನು ಬಚ್ಚಾ ಎಂದು ಹೇಳುವ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಿಮ್ಮ ನರೇಂದ್ರ ಮೋದಿ ಅವರು ವಿಶ್ವಗುರು ಅಲ್ಲ ಅವರೊಬ್ಬ ಪುಕ್ಕಲು ಗುರು. ಅವರು ನಮ್ಮನ್ನು ಎದುರಿಸುವುದು ಬೇಡ, ಧೈರ್ಯವಿದ್ದರೆ ಒಂದು ಪತ್ರಿಕಾಗೋಷ್ಠಿ ನಡೆಸಿ ಪತ್ರಕರ್ತರ ಪ್ರಶ್ನೆಗಳಿಗೆ ಉತ್ತರಿಸಲು ಹೇಳಿ ಎಂದರು.

ಪಾಪ, ಬಿ.ಎಸ್. ಯಡಿಯೂರಪ್ಪ ಅವರು ಯಾರೋ ಬರೆದುಕೊಟ್ಟದ್ದನ್ನು ಓದಿ ನನ್ನ ಮೇಲೆ ಭ್ರಷ್ಟಾಚಾರದ ಆರೋಪ ಮಾಡಿದ್ದಾರೆ. ಅವರು ಈ ರೀತಿ ಕಾಲ ವ್ಯರ್ಥ ಮಾಡುವುದರ ಬದಲಿಗೆ ಒಳ್ಳೆಯ ವಕೀಲರ ಜೊತೆ ಸಮಾಲೋಚಿಸಿ ಮತ್ತೊಮ್ಮೆ ಜೈಲು ಪಾಲಾಗದಂತೆ ನೋಡಿಕೊಳ್ಳುವುದು ಒಳ್ಳೆಯದು.

ಹಿಂದುಳಿದ ಜಾತಿಗಳಿಗೆ ಮೀಸಲಾತಿ ಕಲ್ಪಿಸಿದ ಮಂಡಲ್ ವರದಿಯಿಂದ ಹಿಡಿದು ಇಲ್ಲಿಯ ವರೆಗೆ ಮೀಸಲಾತಿಯನ್ನು ಅಡಿಯಿಂದ ಮುಡಿವರೆಗೆ ವಿರೋಧಿಸುತ್ತಾ ಬಂದಿರುವ ಬಿಜೆಪಿಯ ಡಿ.ಎನ್.ಎ ಯಲ್ಲಿಯೇ ಮೀಸಲಾತಿ ವಿರೋಧ ಇದೆ. ಈ ನಾಲ್ಕು ದಿನಗಳ ನಾಟಕದ ಮಾತುಗಳನ್ನು ನಂಬುವಷ್ಟು ಜನ ಮೂರ್ಖರಲ್ಲ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿ: 6 ಅಂತಸ್ತಿನ ಕಟ್ಟಡ ಕುಸಿತ; ಓರ್ವ ಸಾವು, ಹಲವರು ಸಿಲುಕಿರುವ ಶಂಕೆ

ಹಿಂದೂ ದೇವತೆಗಳಿಗೆ ಅಪಮಾನ: ನಿಶು ಆಜಾದ್ ವಿರುದ್ಧ ದೂರು ದಾಖಲಿಸಿದ ಸುಪ್ರೀಂ ಕೋರ್ಟ್ ವಕೀಲ!

ಕೊಪ್ಪಳ: ಕೆಲಸದಿಂದ ತಪ್ಪಿಸಿಕೊಳ್ಳಲು ಭಾರಿ ಪ್ಲಾನ್; AI ನಲ್ಲಿ ಹುಲಿ ಸೃಷ್ಟಿಸಿ ಅರಣ್ಯ ಇಲಾಖೆ ಸಿಬ್ಬಂದಿಗೆ ಸಿಕ್ಕಿಬಿದ್ದ ಮೈಗಳ್ಳ!

ನೇಪಾಳದಲ್ಲಿ ಮತ್ತೆ ಪ್ರವಾಹ ಆತಂಕ; ಬುಧಿಗಂಡಕಿ ನದಿ ತೀರದಲ್ಲಿ ಹೈ ಅಲರ್ಟ್, ಆಗಿದ್ದೇನು?

ಉಡುಪಿ: ವಿಟ್ಲಪಿಂಡಿ ಉತ್ಸವದ ವೇಳೆ ಸ್ವಾಮೀಜಿಗಳ ಕೈಯಿಂದ ಜಾರಿದ ಶ್ರೀಕೃಷ್ಣನ ಉತ್ಸವ ಮೂರ್ತಿ, ಭಕ್ತರಲ್ಲಿ ಹೆಚ್ಚಿದ ಆತಂಕ!