ರಾಜ್ಯದೇಶರಾಜಕೀಯಕ್ರಿಕೆಟ್ವಿದೇಶವಾಣಿಜ್ಯ
ಸಿನಿಮಾ▾
ಅಂಕಣಗಳು
⋮
ರಾಜಕೀಯ

ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗದ ವಿರೋಧಿ: ರಾಹುಲ್ ಗಾಂಧಿ

ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿರೋಧಿ ಎಂದು ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

ರಾಹುಲ್ ಗಾಂಧಿ
Nagaraja AB
Updated On : 15 Oct 2022, 10:23 pm

ಬಳ್ಳಾರಿ: ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿರೋಧಿ ಎಂದು ರಾಹುಲ್ ಗಾಂಧಿ ಕಟುವಾಗಿ ಟೀಕಿಸಿದ್ದಾರೆ.

ಭಾರತ ಜೋಡೋ ಯಾತ್ರೆ ಭಾಗವಾಗಿ ಬಳ್ಳಾರಿಯಲ್ಲಿ ಶನಿವಾರ ನಡೆದ ಸಾರ್ವಜನಿಕ ಸಮಾವೇಶದಲ್ಲಿ ಮಾತನಾಡಿದ ಅವರು,  ಈ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ವಿರೋಧಿಯಾಗಿದೆ. ರಾಜ್ಯದಲ್ಲಿ ದಲಿತರ ಮೇಲಿನ ದೌರ್ಜನ್ಯ ಪ್ರಮಾಣ ಶೇ.50ರಷ್ಟು ಹೆಚ್ಚಾಗಿದೆ. ಈ ವರ್ಗದ ಜನರ ಅಭಿವೃದ್ಧಿಗೆ ಸಿಗಬೇಕಿದ್ದ ಸುಮಾರು 8 ಸಾವಿರ ಕೋಟಿ ಹಣವನ್ನು ಬೇರೆ ಕಾರ್ಯಕ್ಕೆ ವರ್ಗಾಯಿಸಲಾಗಿದೆ ಎಂದು ವಿವರಿಸಿದರು.

ಇದನ್ನೂ ಓದಿ: ಭಾರತ್ ಜೋಡೋ ಯಾತ್ರೆ: ಕಡಲೆಕಾಯಿ, ಬುದ್ಧನ ಪ್ರತಿಮೆ ಸೇರಿದಂತೆ ರಾಹುಲ್ ಗಾಂಧಿಗೆ ಉಡುಗೊರೆಗಳ ಸುರಿಮಳೆ!

Advertisement

Advertisement

ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ನಾಗಮೋಹನ್ ದಾಸ್ ಅವರ ಸಮಿತಿ ರಚಿಸಲಾಗಿದೆ. ಆ ಸಮಿತಿಯು ಎಸ್ ಟಿ ಸಮುದಾಯದ ಮೀಸಲಾತಿ ಪ್ರಮಾಣವನ್ನು ಶೇ.3ರಿಂದ ಶೇ.7.5ರಷ್ಟು ಏರಿಕೆ ಮಾಡಲು, ಎಸ್ ಸಿ ಸಮುದಾಯದ ಮೀಸಲಾತಿಯನ್ನು ಶೇ.15ರಿಂದ ಶೇ.17ಕ್ಕೆ ಏರಿಕೆ ಮಾಡಲು ಶಿಫಾರಸ್ಸು ನೀಡಿತ್ತು. ಬಿಜೆಪಿ ಸರ್ಕಾರ ಇದನ್ನು ಜಾರಿಗೊಳಿಸಿ ಅನುಷ್ಠಾನಕ್ಕೆ ತರಲು ಮೀನಾಮೇಷ ಎಣಿಸುತ್ತಿರುವುದೇಕೆ. ರಾಜ್ಯ ಸರ್ಕಾರ ಸಬೂಬು ಹೇಳುವುದನ್ನು ಬಿಟ್ಟು ಕೂಡಲೇ ಇದನ್ನು ಜಾರಿಗೆ ತರಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರ್ಕಾರ ಕಲ್ಯಾಣ ಕರ್ನಾಟಕ ಭಾಗದ ಜನರಿಗೆ ಆರ್ಟಿಕಲ್ 371 ವಿಶೇಷ ಸ್ಥಾನಮಾನ ನೀಡಲು ನಿರಾಕರಿಸಿತ್ತು. ವಾಜಪೇಯಿ ಹಾಗೂ ಅಡ್ವಾಣಿ ಅವರು ನಿರಾಕಸಿದ್ದರು. ನಿಮ್ಮ ಸಂಕಷ್ಟ ಅರಿತು ಕಾಂಗ್ರೆಸ್ ಸರ್ಕಾರ ಸಂವಿಧಾನಕ್ಕೆ ತಿದ್ದುಪಡಿ ತಂದು ವಿಶೇಷ ಸ್ಥಾನಮಾನ ನೀಡಿದ್ದೆವು. ಇದರ ಪರಿಣಾಮವಾಗಿ ಈ ಭಾಗದ ಸಾವಿರಾರು ಮಂದಿಗೆ ಉದ್ಯೋಗ ಹಾಗೂ ಶಿಕ್ಷಣದಲ್ಲಿ ಅವಕಾಶ ಸಿಕ್ಕಿದ್ದು, ಸಾವಿರಾರು ಕೋಟಿ ವಿಶೇಷ ಅನುದಾನ ಸಿಕ್ಕಿದೆ ಎಂದು ವಿವರಿಸಿದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Advertisement