ಸಿಎಂ ಬೊಮ್ಮಾಯಿ 
ರಾಜಕೀಯ

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ಶೀಘ್ರವೇ ದೆಹಲಿಗೆ: ಸಿಎಂ ಬಸವರಾಜ ಬೊಮ್ಮಾಯಿ

ಜನಸಂಕಲ್ಪ ಯಾತ್ರೆಯ ನಡುವೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ಬೆಳಗಾವಿ: ಜನಸಂಕಲ್ಪ ಯಾತ್ರೆಯ ನಡುವೆ ದೆಹಲಿಗೆ ತೆರಳಿ ಪಕ್ಷದ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಹಿರಿಯ ನಾಯಕರನ್ನು ಭೇಟಿ ಮಾಡಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. 

ನಿನ್ನೆ ಬೆಳಗಾವಿಯಲ್ಲಿ  ಸಾಂಬ್ರಾ ವಿಮಾನ ನಿಲ್ದಾಣದಲ್ಲಿ ಕಾರ್ಯಕ್ರಮಕ್ಕೆ ತೆರಳುವ ಮುನ್ನ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಚಿವ ಸಂಪುಟ ವಿಸ್ತರಣೆ ಸಂದರ್ಭದಲ್ಲಿ ಬೆಳಗಾವಿಗೆ ಶುಭ ಸುದ್ದಿ ಇದೆಯೇ ಎಂಬುದಕ್ಕೆ ಪ್ರತಿಕ್ರಿಯೆ ನೀಡಿ, ಸಚಿವ ಸಂಪುಟ ವಿಸ್ತರಣೆಯ ಬಗ್ಗೆ ನಿರ್ಣಯ ಕೈಗೊಂಡಾಗ ಎಲ್ಲರಿಗೂ ತಿಳಿಸಲಾಗುವುದು, ಏನೇ ಆದರೂ ಮಾಧ್ಯಮದವರ ಮೂಲಕ ರಾಜ್ಯದ ಜನತೆಗೆ ತಿಳಿಸಿಯೇ ಮಾಡುತ್ತೇವೆ ಎಂದರು. 

ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು
ಕೊಲ್ಲಾಪುರದ ಕನೇರಿ ಮಠದಲ್ಲಿ ಕನ್ನಡ ಭವನ ಕಟ್ಟಲು ಶಿವಸೇನೆಯವರು ವಿರೋಧಿಸುತ್ತಿರುವ ಬಗ್ಗೆ ಪ್ರತಿಕ್ರಯಿಸಿದ ಸಿಎಂ ಬೊಮ್ಮಾಯಿ, ಈಗಾಗಲೇ ಮಹಾರಾಷ್ಟ್ರದಲ್ಲಿ ಹತ್ತು ಹಲವಾರು ಸಂಘಗಳ ಕನ್ನಡ ಭವನಗಳು ಇವೆ. ಹಲವಾರು ದೇವಸ್ಥಾನಗಳು, ಯಾತ್ರಿನಿವಾಸಗಳೂ ಇವೆ. ಈ ವಿಚಾರದಲ್ಲಿ ರಾಜ್ಯ ಹಾಗೂ ಭಾಷೆಗಳು ಅಡಚಣೆ ಆಗಬಾರದು ಎಂಬುದು ನನ್ನ ಅನಿಸಿಕೆ ಎಂದರು.

ಕೆಎಲ್ ಇ ಸಂಸ್ಥೆಯ ಅಧ್ಯಕ್ಷ ಪ್ರಭಾಕರ ಕೋರೆಯವರ 75 ನೇ ವರ್ಷದ ಅಮೃತ ಮಹೋತ್ಸವ ಆಚರಿಸುತ್ತಿರುವುದು ಸಂತೋಷದ ವಿಷಯ. ಇಡೀ ಉತ್ತರ ಕರ್ನಾಟಕಕ್ಕೆ ಅವರು ಸುದೀರ್ಘ ನಾಲ್ಕು ವರ್ಷಗಳ ಸೇವೆ ಸಲ್ಲಿಸಿದ್ದಾರೆ. ಶೈಕ್ಷಣಿಕ, ಆರೋಗ್ಯ, ಕೃಷಿ, ಸಹಕಾರಿ ಕ್ಷೇತ್ರಗಳಲ್ಲಿ ಕೆಲಸ ಮಾಡಿ ಜನಪ್ರಿಯರಾಗಿದ್ದಾರೆ. ಜನಾನುರಾಗಿಯಾದ ಕೋರೆಯವರಲ್ಲಿ ನಿರಂತರವಾಗಿ ಕೆಲಸ ಮಾಡುವ ಶಕ್ತಿ ಇದೆ. ಎಲ್ಲರೊಂದಿಗೂ ಸ್ನೇಹದಿಂದಿರುವ ಸ್ನೇಹಜೀವಿ. ಈ ಸಮಾರಂಭ ಅರ್ಥಪೂರ್ಣವಾಗಿರಲಿದೆ ಎಂದು ಸಿಎಂ ಬೊಮ್ಮಾಯಿ ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ