ಪೇ ಸಿಎಂ ಅಭಿಯಾನದಲ್ಲಿ ಕಾಂಗ್ರೆಸ್ ಮುಖಂಡರು 
ರಾಜಕೀಯ

ಪೇ ಸಿಎಂ ಆಯ್ತು, ಈಗ SayCM ಅಭಿಯಾನ ನಡೆಸಲು ಕಾಂಗ್ರೆಸ್ ಸಜ್ಜು!

ಸರ್ಕಾರದ ಕಾರ್ಯವೈಖರಿ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ವಿಫಲವಾಗಿರುವುದರಿಂದ ಪೇ ಸಿಎಂ ನಂತರ Saycm ಅಭಿಯಾನ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ಬೆಂಗಳೂರು: ಸರ್ಕಾರದ ಕಾರ್ಯವೈಖರಿ ಕುರಿತಂತೆ ಕೇಳಲಾದ ಪ್ರಶ್ನೆಗಳಿಗೆ ಉತ್ತರಿಸಲು ವಿಫಲವಾಗಿರುವುದರಿಂದ ಪೇ ಸಿಎಂ ನಂತರ Saycm ಅಭಿಯಾನ ಮಾಡಬೇಕಾಗುತ್ತದೆ ಎಂದು ಕಾಂಗ್ರೆಸ್ ಎಚ್ಚರಿಕೆ ನೀಡಿದೆ.

ರಾಜ್ಯ ಬಿಜೆಪಿ ಸರ್ಕಾರಕ್ಕೆ 50 ಪ್ರಶ್ನೆಗಳನ್ನು ಕೇಳಲು 'ನಿಮ್ಮ ಹತ್ತಿರ ಇದೆಯೇ ಉತ್ತರ' ಅಭಿಯಾನವನ್ನು ಕಾಂಗ್ರೆಸ್ ಆರಂಭಿಸಿದೆ. 2018ರಲ್ಲಿ ನೀಡಲಾದ ಚುನಾವಣಾ ಪ್ರಣಾಳಿಕೆಯಲ್ಲಿ ಶೇ. 90 ರಷ್ಟು ಭರವಸೆ ಈಡೇರಿಸುವಲ್ಲಿ ಬಿಜೆಪಿ ವಿಫಲವಾಗಿದೆ ಎಂದು ಆರೋಪಿಸಿ ಅಭಿಯಾನ ಆರಂಭಿಸಲಾಗಿತ್ತು. ಆದರೆ, ಈವರೆಗೂ ಅವರು ಒಂದು ಪ್ರಶ್ನೆಗೂ ಉತ್ತರಿಸಿಲ್ಲ. ಜನರ ಪರವಾಗಿ ಕೇಳಿದ ಪ್ರಶ್ನೆಗೆ ಉತ್ತರಿಸದಿದ್ದರೆ Saycm ಅಭಿಯಾನ ಆರಂಭಿಸುವುದಾಗಿ ಪಕ್ಷ ತಿಳಿಸಿದೆ.

ಕಳೆದ ಮೂರು ವರ್ಷಗಳಲ್ಲಿ ಆಡಳಿತದಲ್ಲಿ ವಿಫಲತೆ ಕುರಿತು ಬಿಜೆಪಿ ಉತ್ತರಿಸಲು  Saycm ಅಭಿಯಾನ ಆರಂಭಿಸಲಾಗುತ್ತಿದೆ. 2023 ವಿಧಾನಸಭಾ ಚುನಾವಣೆವರೆಗೂ ಬಿಜೆಪಿಯನ್ನು ಪ್ರಶ್ನೆ ಕೇಳುವುದನ್ನು ಮುಂದುವರೆಸಲಾಗುವುದು ಎಂದು ಹೇಳಿಕೆಯಲ್ಲಿ ಕಾಂಗ್ರೆಸ್ ಹೇಳಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಜಮ್ಮುವಿನಾದ್ಯಂತ ಭಾರಿ ಮಳೆ: ಅಪಾರ ಪ್ರಮಾಣದ ಹಾನಿ, 10 ಮಂದಿ ಸಾವು: ಕೊಚ್ಚಿ ಹೋದ ರಸ್ತೆ, ಸೇತುವೆಗಳು!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಡಿಕೆಶಿ ಕ್ಷಮೆ ಕೇಳಬಾರದಿತ್ತು; ಮುಲಾಜಿಲ್ಲದೆ ಕಾಂಗ್ರೆಸ್ ಪಕ್ಷದ ಸದಸ್ಯತ್ವಕ್ಕೆ ರಾಜೀನಾಮೆ ಬಿಸಾಕಬೇಕಿತ್ತು- ಆರ್. ಅಶೋಕ್

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

SCROLL FOR NEXT