ನಿಖಿಲ್ ಕುಮಾರ್ 
ರಾಜಕೀಯ

126 ಅಭ್ಯರ್ಥಿಗಳ ಪಟ್ಟಿಯಲ್ಲಿ ನಿಖಿಲ್ ಹೆಸರು ಕೂಡ ಇರಬಹುದು: ಎಚ್‌ ಡಿ ಕುಮಾರಸ್ವಾಮಿ

ನವೆಂಬರ್ 1ರಂದು ಬಿಡುಗಡೆ ಮಾಡಲಿರುವ ಪಕ್ಷದ 126 ಅಭ್ಯರ್ಥಿಗಳ  ಪಟ್ಟಿಯಲ್ಲಿ ಪುತ್ರ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹುದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳದ್ದಾರೆ.

ಮೈಸೂರು:  ನವೆಂಬರ್ 1ರಂದು ಬಿಡುಗಡೆ ಮಾಡಲಿರುವ ಪಕ್ಷದ 126 ಅಭ್ಯರ್ಥಿಗಳ  ಪಟ್ಟಿಯಲ್ಲಿ ಪುತ್ರ, ಪಕ್ಷದ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೆಸರೂ ಇರಬಹುದು' ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಹೇಳದ್ದಾರೆ.

ಮೈಸೂರಿನ ಚಾಮುಂಡೇಶ್ವರಿ ದೇವಸ್ಥಾನದಲ್ಲಿ ಗುರುವಾರ ವಿಶೇಷ ಪೂಜೆ ಸಲ್ಲಿಸಿದ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ  ಮಾತನಾಡಿದ ಅವರು, ಮುಂಬರುವ ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಸಂಭವನೀಯ ಅಭ್ಯರ್ಥಿಗಳು, ಶಾಸಕರು, ಮಾಜಿ ಶಾಸಕರ ಜೊತೆ ನಾಡದೇವತೆ ಚಾಮುಂಡೇಶ್ವರಿ ದರ್ಶನ ಪಡೆದಿದ್ದೇನೆ.

ಪೂರ್ಣ ಪ್ರಮಾಣದ ಸರ್ಕಾರ ಅಸ್ತಿತ್ವಕ್ಕೆ ತರುವಂತೆ ತಾಯಿಯನ್ನು ಬೇಡಿಕೊಂಡಿದ್ದೇನೆ. ತಾಯಿಯ ಅನುಗ್ರಹದಿಂದ ಹಾಗೂ ಜನರ ಆಶೀರ್ವಾದದಿಂದ ನಾವು ಅಧಿಕಾರಕ್ಕೆ ಬರುತ್ತೇವೆ' ಎಂದು ವಿಶ್ವಾಸ ವ್ಯಕ್ತಪಡಿಸಿದರು.

'ಉಚಿತವಾಗಿ ಗುಣಮಟ್ಟದ ಶಿಕ್ಷಣ, ಆರೋಗ್ಯ, ರೈತರಿಗೆ ಸ್ವಾವಲಂಬಿ ಯೋಜನೆ, ಪ್ರತಿಯೊಬ್ಬರಿಗೂ ಸೂರು ಮತ್ತು ನೀರಾವರಿ ಕಾರ್ಯಕ್ರಮದ ಪಂಚರತ್ನ ಯೋಜನೆ ಜಾರಿ ಮಾಡುತ್ತೇವೆ. ಇದನ್ನೆಲ್ಲಾ ಅನುಷ್ಠಾನಕ್ಕೆ ತರಲು ಬರುವ ಎಲ್ಲಾ ಸವಾಲನ್ನೂ ಸ್ವೀಕರಿಸಿದ್ದೇನೆ.

ಜನರು ಉತ್ತಮ ಬದುಕು ಕಟ್ಟಿಕೊಳ್ಳುವಂತೆ ಮಾಡುವ ಸರ್ಕಾರ ನಡೆಸಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಇದಕ್ಕೆ ರಾಜ್ಯದ ಜನರು ಆಶೀರ್ವಾದ ಮಾಡುವಂತೆ ಕೋರುತ್ತೇನೆ' ಎಂದರು. ಜನಪರ ಯೋಜನೆಗಳನ್ನು ಚಾಚೂ ತಪ್ಪದೆ ಜಾರಿಗೊಳಿಸಲು 123 ಸೀಟು ಗೆಲ್ಲಬೇಕು ಎನ್ನುವುದು ನನ್ನ ಗುರಿಯಾಗಿದೆ' ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT