ರಾಹುಲ್ ಗಾಂಧಿ 
ರಾಜಕೀಯ

ದೇಶದ ಬಗ್ಗೆ ಏನೂ ತಿಳಿಯದ ರಾಹುಲ್ ಗಾಂಧಿ ಪ್ರಧಾನಿಯಾಗಲು ಸಾಧ್ಯವಿಲ್ಲ: ಬಸವರಾಜ ಬೊಮ್ಮಾಯಿ

ರಾಹುಲ್‌ಗಾಂಧಿ ಪ್ರಧಾನಿಯಲ್ಲ ಮುಂದೆಯೂ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭವಿಷ್ಯ ನುಡಿದಿದ್ದಾರೆ.

ಯಾದಗಿರಿ: ರಾಹುಲ್‌ಗಾಂಧಿ ಪ್ರಧಾನಿಯಲ್ಲ ಮುಂದೆಯೂ ಆಗುವುದಿಲ್ಲ ಎಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಭವಿಷ್ಯ ನುಡಿದಿದ್ದಾರೆ.

ಯಾದಗಿರಿಯ ಹುಣಸಗಿಯಲ್ಲಿ ನಡೆದ ಬಿಜೆಪಿ ಜನ ಸಂಕಲ್ಪ ಯಾತ್ರೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ನಮ್ಮ ಅಭಿವೃದ್ದಿ ಕೆಲಸಗಳ ಬಗ್ಗೆ ಏನೂ ಗೊತ್ತಿಲ್ಲ. ರಾಜ್ಯದಲ್ಲಿ ಕೆಲಸ ಪಡೆಯಬೇಕು ಅಂದ್ರೆ ಲಂಚ ಕೊಡಬೇಕು ಅಂತ ಹೇಳಿದ್ದಾರೆ.

ಕಾಂಗ್ರೆಸ್  ಅವಧಿಯಲ್ಲಿ ಆಗಿರುವ ಭ್ರಷ್ಟಾಚಾರಗಳ ಬಗ್ಗೆಯೂ ಅವರಿಗೆ ಗೊತ್ತಿಲ್ಲ. ಹೀಗಾಗಿ ಅವರಿಗೆ ಸಿದ್ದರಾಮಯ್ಯ ಅವಧಿಯ ಭ್ರಷ್ಟಾಚಾರದ ಫೈಲ್ ಕಳುಹಿಸುತ್ತಿದ್ದೇನೆ. ಭ್ರಷ್ಟ್ರರನ್ನ ಕಟ್ಟಿಕೊಂಡು ನಡೀತಿದ್ದೀಯಾ, ಇವರ ಮೇಲೇನಾದರೂ ಕ್ರಮ ತೆಗೆದುಕೊಳ್ಳುತ್ತೀರಾ? ಅಂತ ಫೈಲ್ ಕಳುಹಿಸುತ್ತಿದ್ದೇನೆ ಎಂದು ಹೇಳಿದ್ದಾರೆ.

ರಾಹುಲ್ ಗಾಂಧಿ ಅವರಿಗೆ ದೇಶದ ಬಗ್ಗೆ ಏನೂ ಗೊತ್ತಿಲ್ಲ, ಬೇರೆ ಬೇರೆ ರಾಜ್ಯಗಳಲ್ಲಿ ಮಾತನಾಡುವ ಭಾಷೆಯೂ ಗೊತ್ತಿಲ್ಲ, ಹೀಗಾಗಿ ಪ್ರಧಾನಿ ಆಗುವುದಿಲ್ಲ.  ಕಾಂಗ್ರೆಸ್ ಕಾರ್ಯಕರ್ತರ 'ಪೇಸಿಎಂ' ಅಭಿಯಾನದ ಕುರಿತು ಬೊಮ್ಮಾಯಿ, ಕಾಂಗ್ರೆಸ್ ನವರಿಗೆ ಮಾಡಲು ಏನು ಕೆಲಸ ಇಲ್ಲ, ಹೀಗಾಗಿ ಆಂದೋಲನ ಮಾಡಲಿ, ರಾಜ್ಯದ ಅಭಿವೃದ್ಧಿಯ ಹೊಣೆ ನಮ್ಮ ಮೇಲಿದೆ ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ದೆಹಲಿಯಲ್ಲಿ ನಾಯಕರ ಬಂಧನ, ಮೆಟ್ರೋ ಸ್ಥಗಿತ ಕುರಿತ ನ್ಯಾಯಾಂಗ ನಿಂದನೆ: ಭಾನುವಾರವೂ 'ಸುಪ್ರೀಂ' ವಿಶೇಷ ಪೀಠದಿಂದ ವಿಚಾರಣೆ!

BBK 13: ಗಾನವಿ ಹೇಳಿಕೆಗೆ ನೊಂದು ಗಗನ್ ತಾಯಿಗೆ ತಾನೇ ಕ್ಷಮೆ ಕೇಳಿ ಕಣ್ಣೀರು ಹಾಕಿದ ಸುದೀಪ್

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಭಾರತ, ಆಫ್ರಿಕಾಗೆ ಸೂಕ್ತ ಪ್ರಾತಿನಿಧ್ಯ ಸಿಗಲೇಬೇಕು: ಜೈಶಂಕರ್ ಆಗ್ರಹ

ಪ್ರತಿಭಟನೆಗಳ ನಡುವೆಯೇ ಚು. ಆಯೋಗ ಮಹತ್ವದ ನಡೆ, ಹೊಸ ಉಪಾಯುಕ್ತರ ನೇಮಕ, 27 ಅಧಿಕಾರಿಗಳಿಗೆ ಹೊಸ ಹೊಣೆ!

ಮಣಿಪುರದಲ್ಲಿ ಮತ್ತೆ ಭುಗಿಲೆದ್ದ ಹಿಂಸಾಚಾರ: 30 ಮನೆ-ಅಂಗಡಿಗಳಿಗೆ ಬೆಂಕಿ, ಕನಿಷ್ಠ 5 ಸಾವು!