ರಾಜಕೀಯ

ರಾಜಕೀಯ ನಿಂತ ನೀರಲ್ಲ, ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು: 'ಹಳ್ಳಿಹಕ್ಕಿ' ಚಿತ್ತ ಕಾಂಗ್ರೆಸ್ ನತ್ತ; 'ಕೈ' ಸೇರಲು ವಿಶ್ವನಾಥ್ ಒಲವು!

Shilpa D

ಮೈಸೂರು: ವಿಧಾನಪರಿಷತ್‌ ಸದಸ್ಯ, ಮಾಜಿ ಸಚಿವ ಅಡಗೂರು ಎಚ್‌. ವಿಶ್ವನಾಥ್‌ ಅವರು ಬಿಜೆಪಿ ತೊರೆದು ಕಾಂಗ್ರೆಸ್‌ ಸೇರುವ ಸಾಧ್ಯತೆ ದಟ್ಟವಾಗಿದೆ.

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಅಭಿನಂದಿಸಿರುವ ವಿಶ್ವನಾಥ್‌, ಸದ್ಯದಲ್ಲೇ ಬೆಂಗಳೂರಿನಲ್ಲಿ ಖರ್ಗೆ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ ಎಂದು ಅವರ ಆಪ್ತ ಮೂಲಗಳು ತಿಳಿಸಿವೆ.

ಮತ್ತೆ ಕಾಂಗ್ರೆಸ್ ಸೇರುವಿರಾ?’ ಎಂಬ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಅವರು ‘ನನ್ನ 40 ವರ್ಷಗಳ ರಾಜಕೀಯ ಜೀವನದಲ್ಲಿ ಸಾಕಷ್ಟು ಬದಲಾವಣೆಗಳಾಗಿವೆ. ಇವತ್ತಿನ ರಾಜಕಾರಣ  ಹೀಗೆಯೇ ಇರುತ್ತದೆ ಎಂದು ಹೇಳಲು ಸಾಧ್ಯವಿಲ್ಲ. ಕಾಲಚಕ್ರದಲ್ಲಿ ಏನು ಬೇಕಾದರೂ ಆಗಬಹುದು’ ಎಂದು ವಿಶ್ವನಾಥ್ ಹೇಳಿದರು.ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಈ ಯಾವ ಪಕ್ಷಗಳೂ ಮುಳುಗುವ ಹಡಗುಗಳಲ್ಲ. ಅವು ಜನರೊಂದಿಗೆ ತೇಲುವಂಥವು; ಇರುವಂಥವು’ ಎಂದರು.

ಈಗ ಬಿಜೆಪಿಯಲ್ಲಿರುವ ವಿಶ್ವನಾಥ್‌ ಆ ಪಕ್ಷದಿಂದಲೂ ದೂರ ಸರಿದಿದ್ದಾರೆ. ತಮ್ಮ ಪಕ್ಷದ ಸರಕಾರ ಹಾಗೂ ಸಚಿವರನ್ನು ಟೀಕಿಸುತ್ತಿದ್ದಾರೆ. ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವುದರಿಂದ ರಾಜಕೀಯವಾಗಿ ಮುಂದಿನ ಹೆಜ್ಜೆ ಇಡಲು ನಿರ್ಧರಿಸಿದ್ದಾರೆ. ವಿಶ್ವನಾಥ್‌ ಮೂಲತಃ ಕಾಂಗ್ರೆಸ್ಸಿಗರಾಗಿದ್ದಾರೆ.

SCROLL FOR NEXT