ಬೆಂಗಳೂರು: ಬಿಜೆಪಿ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂದು ಕಾಂಗ್ರೆಸ್ ಟೀಕಿಸಿದೆ. ಕೆಪಿಸಿಸಿ ಟ್ವೀಟರ್ ಖಾತೆಯಲ್ಲಿ ಈ ಕುರಿತ ಪೋಸ್ಟ್ ವೊಂದನ್ನು ಹಾಕಲಾಗಿದ್ದು, ಶಿಸ್ತಿನ ಪಕ್ಷ ಎಂದುಕೊಳ್ಳುವ ರಾಜ್ಯ ಬಿಜೆಪಿ, ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಜರುಗಿಸಲು ಸಾಧ್ಯವಾಗಿಲ್ಲ ಎಂದಾದರೆ ಬಿಜೆಪಿಯ ಶಿಸ್ತು ಖಾಕಿ ಚಡ್ಡಿ ಹಾಕಿಕೊಳ್ಳುವುದಕ್ಕೆ ಮಾತ್ರ ಮೀಸಲು ಎಂಬುದು ಸ್ಪಷ್ಟವಾಗಿದೆ ಎಂದು ಹೇಳಿದೆ.
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ವಿರುದ್ಧ ಯಾತ್ನಾಳ್ ಆಡುವ ಮಾತುಗಳು ಬಿಎಲ್ ಸಂತೋಷ್ ಅವರದ್ದು, ಬಾಯಿ ಮಾತ್ರ ಯಾತ್ನಾಳ್ ರದ್ದು ಎಂದು ಆರೋಪಿಸಿದೆ.
ಕಾಂಗ್ರೆಸ್ ಕಿಟಕಿ ಇಣುಕುವುದರಲ್ಲೇ ನಿರತರಾಗಿದ್ದ ಬಿಜೆಪಿಗೆ ತಮ್ಮಲ್ಲಿನ ಕದನದಲ್ಲಿ ಬಿಜೆಪಿಗರೆಲ್ಲ ಈಗ ಹಾವಾಡಿಗರಾಗಿದ್ದಾರೆ. ಅವರ ಹಾವುಗಳು ಎಲ್ಲೆಲ್ಲಿರುತ್ತವೆ, ಎಲ್ಲೆಲ್ಲಿ ಹೆಡೆ ಎತ್ತುತ್ತವೆ ಎಂಬುದು ಸ್ವತ: ಬಿಜೆಪಿಗೇ ತಿಳಿಯುತ್ತಿಲ್ಲ, ಯತ್ನಾಳ್ ಅವರ ಹಾವು ಯಾವುದು? ಭ್ರಷ್ಟಾಚಾರದ ಹಾವೇ? ಸಿಡಿ ಹಾವೇ? ಎಂದು ಕಾಂಗ್ರೆಸ್ ಪ್ರಶ್ನಿಸಿದೆ.