ಹೆಚ್ ಡಿ ದೇವೇಗೌಡ 
ರಾಜಕೀಯ

ಜೆಡಿಎಸ್ ರಾಷ್ಟ್ರಾಧ್ಯಕ್ಷರಾಗಿ ಮತ್ತೊಂದು ಅವಧಿಗೆ ಹೆಚ್ ಡಿ ದೇವೇಗೌಡ ಪುನರಾಯ್ಕೆ

ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಬೆಂಗಳೂರು: ಮತ್ತೊಂದು ಅವಧಿಗೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ಗುರುವಾರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ. ಬೆಂಗಳೂರಿನಲ್ಲಿ ಗುರುವಾರ ಆರಂಭವಾದ ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಈ ಕುರಿತು ಶುಕ್ರವಾರ ಅಧಿಕೃತ ಘೋಷಣೆ ಮಾಡಲಾಗುವುದು ಎಂದು ಜೆಡಿಎಸ್ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ.

89 ವರ್ಷ ವಯಸ್ಸಿನ ಹಿರಿಯ ನಾಯಕ 1999 ರಲ್ಲಿ ಪಕ್ಷ ಪ್ರಾರಂಭವಾದಾಗಿನಿಂದ ದಾಖಲೆಯ 23 ವರ್ಷಗಳ ಕಾಲ ಜೆಡಿಎಸ್ ವರಿಷ್ಠರಾಗಿದ್ದಾರೆ. 13 ರಾಜ್ಯಗಳ ಪ್ರತಿನಿಧಿಗಳು ಗೌಡರು ಜೆಡಿಎಸ್ ಪಕ್ಷದ ಅಧ್ಯಕ್ಷರಾಗಿ ಉಳಿಯಬೇಕೆಂದು ಒತ್ತಾಯಿಸಿದರು ಎಂದು ಮೂಲಗಳು ತಿಳಿಸಿವೆ. ರಾಜ್ಯದಲ್ಲಿ 2023 ರ ವಿಧಾನಸಭಾ ಚುನಾವಣೆ,  2024 ರ ಸಾರ್ವತ್ರಿಕ ಚುನಾವಣೆ ಮತ್ತು ಮಲ್ಲಿಕಾರ್ಜುನ ಖರ್ಗೆ ಕಾಂಗ್ರೆಸ್ ಅಧ್ಯಕ್ಷರಾಗಿ ಮಾಡಿರುವುದರಿಂದ ಜೆಡಿಎಸ್ ಈ ಮಹತ್ವದ ನಿರ್ಣಯ ಕೈಗೊಂಡಿದೆ.

ರೈತರು, ದಲಿತರು, ಯುವಕರು, ಮಹಿಳೆಯರು ಮತ್ತು ಅಲ್ಪಸಂಖ್ಯಾತರ ಹಿತಾಸಕ್ತಿಗಳನ್ನು ಕಾಪಾಡುವುದರ ಜೊತೆಗೆ ಪಕ್ಷದ ಜಾತ್ಯತೀತ ಸಿದ್ದಾಂತಕ್ಕೆ ಅನುಗುಣವಾಗಿ ಕಾರ್ಯಕಾರಿಣಿ ಸೂಕ್ತವಾದ ನಿರ್ಣಯಗಳನ್ನು ಅಂಗೀಕರಿಸಿತು. ಕೋಮು ಸೂಕ್ಷ್ಮ ವಿಷಯಗಳಿಗೆ ಸಂಬಂಧಿಸಿದಂತೆ ಎರಡೂ ರಾಷ್ಟ್ರೀಯ ಪಕ್ಷಗಳಿಂದ ಜೆಡಿಎಸ್ ಸಮಾನ ಅಂತರ ಕಾಯ್ದುಕೊಳ್ಳಲಿದೆ ಎಂದು ಮೂಲಗಳು ತಿಳಿಸಿವೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಬಿಜೆಪಿ ಸಂಸದೀಯ ಮಂಡಳಿಯಲ್ಲಿ ಮಹತ್ತರ ಬದಲಾವಣೆ ಸಾಧ್ಯತೆ; ನಾಲ್ವರು ಮುಖ್ಯಮಂತ್ರಿಗಳಿಗೆ ಸ್ಥಾನ?

ಇರಾನ್‌ ತೈಲ ವಹಿವಾಟಿಗೆ ಅಮೆರಿಕಾ ಬ್ರೇಕ್: ಭಾರತದ 4 ಕಂಪನಿಗಳು ಕಪ್ಪುಪಟ್ಟಿಗೆ, 3 ಪ್ರಜೆಗಳ ಮೇಲೂ ನಿರ್ಬಂಧ..!

"ಮದುವೆ ಅಂದ್ರೆ ಗುಲಾಮಗಿರಿಯಲ್ಲ, ಮನೆಗೆಲಸ ಮಾಡು-ಅತ್ತೆ-ಮಾವನ ನೋಡ್ಕೋ ಅನ್ನೋಕೆ ಗಂಡನಿಗೆ ಹಕ್ಕಿಲ್ಲ": ಹೈಕೋರ್ಟ್ ಮಹತ್ವದ ತೀರ್ಪು..!

ಬಿಡದಿ ಟೌನ್‌ಶಿಪ್‌ ಯೋಜನೆ: ರೈತರ ಭೂಮಿ ಕಸಿಯಲ್ಲ, denotification ಮಾಡಲ್ಲ- ಸಿಎಂ ಡಿಕೆ. ಶಿವಕುಮಾರ್ ಸ್ಪಷ್ಟನೆ

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?