ಡಿಕೆ.ಶಿವಕುಮಾರ್ 
ರಾಜಕೀಯ

ನ.6ಕ್ಕೆ ಬೆಂಗಳೂರಿಗೆ ಖರ್ಗೆ, ಅದ್ಧೂರಿ ಸ್ವಾಗತಕ್ಕೆ ನಿರ್ಧಾರ: ಡಿ.ಕೆ.ಶಿವಕುಮಾರ್

ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಶಿವಮೊಗ್ಗ: ಎಐಸಿಸಿ ನೂತನ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ನವೆಂಬರ್ 6ರಂದು ರಾಜ್ಯಕ್ಕೆ ಭೇಟಿ ನೀಡಲಿದ್ದು, ಈ ಸಂದರ್ಭದಲ್ಲಿ ಅವರಿಗೆ ಬೆಂಗಳೂರಿನಲ್ಲಿ ಅದ್ಧೂರಿ ಸ್ವಾಗತ ಮಾಡಲು ನಿರ್ಧರಿಸಲಾಗಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಶನಿವಾರ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖರ್ಗೆಯವರಿಗೆ ಬೆಂಗಳೂರಿನಲ್ಲಿ ಅದ್ದೂರಿ ಸ್ವಾಗತ ಮಾಡಲು ನಿರ್ಧರಿಸಲಾಗಿದ್ದು, ಕಾರ್ಯಕರ್ತರಿಗೆ ಸನ್ನದ್ಧರಾಗಲು ಸೂಚಿಸಲಾಗಿದೆ ಎಂದು ಹೇಳಿದರು. 

ಎಐಸಿಸಿ ನೂತನ ಅಧ್ಯಕ್ಷರು ನವಂಬರ್ 6ಕ್ಕೆ ಬರುವುದಾಗಿ ಹೇಳಿದ್ದಾರೆ. ಖರ್ಗೆ ಅವರು ಅಧ್ಯಕ್ಷರಾಗಿದ್ದರಿಂದ ರಾಜ್ಯಕ್ಕೆ ದೊಡ್ಡ ಶಕ್ತಿ ಬಂದಿದೆ. ಹಲವು ದಶಕಗಳ ಬಳಿಕ ಕರ್ನಾಟಕದವರು ಅಧ್ಯಕ್ಷರಾಗಿದ್ದಾರೆ. ಬ್ಲಾಕ್ ಮಟ್ಟದ ಅಧ್ಯಕ್ಷರಾಗಿದ್ದವರು ಇಂದು ಪಕ್ಷದ ರಾಷ್ಟ್ರೀಯ ಅಧ್ಯಕ್ಷರಾಗಿದ್ದಾರೆ. ಕಾಂಗ್ರೆಸ್ ಪಕ್ಷದಲ್ಲಿನ ಅಂತರಿಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಇದು ಸ್ಪಷ್ಟ ಉದಾಹರಣೆ’ ಎಂದು ತಿಳಿಸಿದರು.

ಸ್ವಾಗತ ಸಮಾರಂಭದ ಆಯೋಜನೆ ನಿಟ್ಟಿನಲ್ಲಿ ಪೂರ್ವಸಿದ್ದತೆಗೆ ಬೆಂಗಳೂರಿನಲ್ಲಿ ಭಾನುವಾರ ಸಭೆ ಕರೆಯಲಾಗಿದೆ. ಪಕ್ಷದ ಟಿಕೆಟ್ ಆಕಾಂಕ್ಷಿಗಳು, ಮುಖಂಡರು ಪ್ರತಿಯೊಬ್ಬರೂ ಕಾರ್ಯಕರ್ತರೊಡನೆ ಬೆಂಗಳೂರಿಗೆ ಬರಬೇಕು. ಹೊರಡಲು ಈಗಿನಿಂದಲೇ ತಯಾರಿ ಮಾಡಿಕೊಳ್ಳಲು ಸೂಚಿಸಲಾಗಿದೆ ಎಂದರು.

ಇದೇ ವೇಳೆ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದ ಅವರು, 'ದೇಶದಲ್ಲಿ ಎಲ್ಲಾ ಕಡೆ ಆಪರೇಷನ್ ಕಮಲ ನಡೆಯುತ್ತಿದೆ. ತೆಲಂಗಾಣದಲ್ಲಿ ಆಪರೇಷನ್ ಕಮಲ ಬಹಿರಂಗವಾಗಿದೆ. ರಾಜ್ಯದಲ್ಲಿ ಆಪರೇಷನ್ ಕಮಲ ಮೂಲಕ ಸರಕಾರ ಅಧಿಕಾರಕ್ಕೆ ಬಂದಿದೆ, ಸುಪ್ರೀಂ ಕೋರ್ಟ್ ಮಧ್ಯ ಪ್ರವೇಶಿಸಿ ಈ ಬಗ್ಗೆ ಸ್ವಯಂ ಪ್ರೇರಿತವಾಗಿ ದೂರು ದಾಖಲಿಸಿಕೊಳ್ಳಬೇಕು' ಎಂದು ಒತ್ತಾಯಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

SIR ಅಕ್ರಮಗಳ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ರಾಹುಲ್ ಗಾಂಧಿ; TMC, RJD, ಮಿತ್ರಪಕ್ಷಗಳಿಂದಲೂ ಅರ್ಜಿ

ಗುಟ್ಟಾಗಿ ಮದುವೆಯಾಗಿದ್ದಾರಾ ನಟಿ ತ್ರಿಶಾ?: ಲಂಡನ್ ಸೆಲ್ಫಿಯಲ್ಲಿನ ಲಾಕೆಟ್ ನ ಗುಟ್ಟೇನು!

Chalo Supreme Court: ಭೇಟಿ ಮನವಿ ತಿರಸ್ಕರಿಸಿದ CJI ಸೂರ್ಯಕಾಂತ್; ಸುಪ್ರೀಂ ಕೋರ್ಟ್‌ನತ್ತ ಇಂಡಿಯಾ ಬ್ಲಾಕ್ ಮೆರವಣಿಗೆ!

ಅತಿಯಾಗಿ ಭಯ ಹುಟ್ಟಿಸಬೇಡಿ, ನಿಮ್ಮ ಹೆದರಿಕೆಗೆ ಬಗ್ಗಲ್ಲ: ಗಾಯದ Video ಶೇರ್​ ಮಾಡಿ ಪೊಲೀಸರಿಗೆ ಆಮೀರ್ ಖಾನ್ ಸೊಸೆ ತಿರುಗೇಟು!

CJP ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ನಟ ಇಮ್ರಾನ್ ಖಾನ್​ಗೆ ಬಿಗ್ ಶಾಕ್; ಗಡಿಪಾರು ಸಾಧ್ಯತೆ