ನಳಿನ್ ಕುಮಾರ್ ಕಟೀಲ್ 
ರಾಜಕೀಯ

ಮುಂದಿನ ಚುನಾವಣೆಯಲ್ಲಿ ಕಾಂಗ್ರೆಸ್‌ ಮುಕ್ತ ಭಾರತದ ಸಂಕಲ್ಪವನ್ನು ಪ್ರತಿಯೊಬ್ಬರೂ ಈಡೇರಿಸಬೇಕು: ಕಟೀಲ್

ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಸಂಕಲ್ಪವನ್ನು ಪ್ರತಿಯೊಬ್ಬರೂ ಈಡೇರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ.

ಮೈಸೂರು: ಮುಂಬರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮುಕ್ತ ಭಾರತದ ಸಂಕಲ್ಪವನ್ನು ಪ್ರತಿಯೊಬ್ಬರೂ ಈಡೇರಿಸಬೇಕೆಂದು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರು ಶನಿವಾರ ಕರೆ ನೀಡಿದ್ದಾರೆ. 

ಮೈಸೂರಿನಲ್ಲಿ ಬೂತ್ ಮಟ್ಟದ ಅಧ್ಯಕ್ಷರನ್ನು ಉದ್ದೇಶಿಸಿ ಮಾತನಾಡಿದ ಅವರು, ಬಿಜೆಪಿ ಕಾರ್ಯಕರ್ತರು ಸಾಮಾನ್ಯ ಕಾರ್ಯಕರ್ತನೂ ಚುನಾವಣೆಯಲ್ಲಿ ಗೆಲ್ಲುವಂತೆ ತಮ್ಮ ಜವಾಬ್ದಾರಿಯನ್ನು ನಿಭಾಯಿಸಬೇಕು. 2023ರ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್ ಎರಡನ್ನೂ ಸೋಲಿಸಲು ಬಿಜೆಪಿ ಎಲ್ಲಾ ಬೂತ್‌ಗಳಲ್ಲಿ ಪ್ರಾಬಲ್ಯ ಸಾಧಿಸಬೇಕು ಮತ್ತು 150 ಸ್ಥಾನಗಳನ್ನು ಗೆಲ್ಲುವಂತೆ ಮಾಡಬೇಕೆಂದು ಹೇಳಿದರು.

ಇದೇ ವೇಳೆ ಪ್ರಧಾನಿ ಮೋದಿ ಅವರು ಕಳೆದ 75 ವರ್ಷಗಳಲ್ಲಿ ರಾಷ್ಟ್ರ ಕಂಡ ಅತ್ಯಂತ ಗಮನಾರ್ಹ ನಾಯಕ ಎಂದು ಶ್ಲಾಘಿಸಿದ ಅವರು, ಮೋದಿ ಅವರು ಮುಂದಿನ 10 ವರ್ಷಗಳ ಕಾಲ ಅಧಿಕಾರದಲ್ಲಿ ಇರುತ್ತಾರೆ ಎಂದು ತಿಳಿಸಿದರು. 

ಬಳಿಕ ಸಿಎಲ್‌ಪಿ ನಾಯಕ ಸಿದ್ದರಾಮಯ್ಯ ಅವರಿಗೆ ಎಚ್ಚರಿಕೆ ನೀಡಿದ ಅವರು, ಮಾಜಿ ಸಿಎಂ ಪಿಎಫ್‌ಐ ನಿಷೇಧದ ವಿರುದ್ಧವಿದ್ದಾರೆ. ಅಧಿಕಾರದಲ್ಲಿದ್ದಾಗ ಹತ್ಯೆಯಾಗಿದ್ದ 24 ಹಿಂದೂ ಕಾರ್ಯಕರ್ತರ ಕುಟುಂಬಕ್ಕೆ ಪರಿಹಾರ ನೀಡಲಿಲ್ಲ ಎಂದರು.

ಸಿದ್ದರಾಮಯ್ಯ ಅವರು ಎಸ್‌ಡಿಪಿಐ ಕಾರ್ಯಕರ್ತರೊಂದಿಗೆ ಪಾದಯಾತ್ರೆ ನಡೆಸುತ್ತಿರುವುದನ್ನು ಟೀಕಿಸಿ, ಕಾಂಗ್ರೆಸ್‌ನಿಂದ ಹಿಂದೂಗಳು ರಕ್ಷಣೆಯ ಭರವಸೆ ಕಳೆದುಕೊಂಡಿದ್ದಾರೆ ಎಂದು ತಿಳಿಸಿದರು. 

ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ನೇತೃತ್ವದ ಭಾರತ್ ಜೋಡೋ ಯಾತ್ರೆ ಮತ್ತು ಜೆಡಿಎಸ್‌ನ ಪಂಚರತ್ನ ಯಾತ್ರೆ ಜನರ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ ಎಂದರು. 

ಮಲ್ಲಿಕಾರ್ಜುನ ಖರ್ಗೆ ಮತ್ತು ಜಿ ಪರಮೇಶ್ವರ ಅವರನ್ನು ಸೋಲಿಸಲು ಷಡ್ಯಂತ್ರ ಮಾಡಿದ ಹಿನ್ನೆಲೆಯಲ್ಲಿ ಜನರು ಸಿದ್ದರಾಮಯ್ಯ ಅವರ ಮೇಲಿದ್ದ ನಂಬಿಕೆಯನ್ನು ಕಳೆದುಕೊಂಡಿದ್ದಾರೆ. ಹೀಗಾಗಿ ಸಿದ್ದರಾಮಯ್ಯ ಅವರು, 2023ರ ಚುನಾವಣೆಯಲ್ಲಿ ಸ್ಪರ್ಧಿಸಲು ಕ್ಷೇತ್ರಕ್ಕಾಗಿ ಹುಡಾಕ ನಡೆಸುತ್ತಿದ್ದಾರೆಂದು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ನಾವು ದಾಳಿ ಮಾಡದೇ ಹೋಗಿದ್ದರೆ ಇಷ್ಟು ಹೊತ್ತಿಗೆ Iran ಅಣ್ವಸ್ತ್ರ ರಾಷ್ಟ್ರವಾಗಿರುತ್ತಿತ್ತು': ಇಸ್ರೇಲ್ ಪ್ರಧಾನಿ ಬೆಂಜಮಿನ್ ನೇತನ್ಯಾಹು

IPL 2026: MI vs RCB; ಫಿಲ್ ಸಾಲ್ಟ್, ಕೊಹ್ಲಿ, ಪಾಟಿದಾರ್ ಭರ್ಜರಿ ಬ್ಯಾಟಿಂಗ್, ಮುಂಬೈಗೆ ಗೆಲ್ಲಲು 241 ರನ್ ಬೃಹತ್ ಗುರಿ!

ಅತ್ಯಂತ ಸುಂದರ 'ಮದುವೆ ಹೆಣ್ಣು', 1 ಬಿಲಿಯನ್ ಡಾಲರ್ ಹಣ ಕೊಡಿ: Uganda ಸೇನಾ ಮುಖ್ಯಸ್ಥನ ವಿಚಿತ್ರ ಬೇಡಿಕೆ; Turkey ಬೇಸ್ತು!

ನೀವೇನ್ ಮುಚ್ಚೋದು.. ನಾವೇ ಬಂದ್ ಮಾಡ್ತೀವಿ: Hormuz ಜಲಸಂಧಿ ದಾಟುವ ಹಡಗುಗಳಿಗೆ US ನೌಕಾಪಡೆ ತಡೆ; ಇರಾನ್ ಗೆ ಟ್ರಂಪ್ ಶಾಕ್!

ಪಕ್ಷ ವಿರೋಧಿ ಚಟುವಟಿಕೆ: ಜಬ್ಬಾರ್ ರಾಜೀನಾಮೆ ಬೆನ್ನಲ್ಲೇ ಮತ್ತೊಂದು ಶಾಕ್; KPCC ಅಲ್ಪಸಂಖ್ಯಾತ ಘಟಕವನ್ನೇ ವಿಸರ್ಜಿಸಿದ DK Shivakumar

SCROLL FOR NEXT