ರಾಜಕೀಯ

ಬಿಜೆಪಿ ಶಾಸಕಾಂಗ ಪಕ್ಷದ ಸಭೆ: ಕ್ಷೇತ್ರಾನುದಾನ ನೀಡುವಂತೆ ಶಾಸಕರ ಒತ್ತಾಯ

Nagaraja AB

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ನಗರದ ಖಾಸಗಿ ಹೋಟೆಲ್ ನಲ್ಲಿ ಮಂಗಳವಾರ ರಾಜ್ಯ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಿತು. ಬಿಜೆಪಿ ಸಂಸದೀಯ ಮಂಡಳಿ ಸದಸ್ಯರಾದ ಬಳಿಕ ಮೊದಲ ಬಾರಿಗೆ ಶಾಸಕಾಂಗ ಸಭೆಯಲ್ಲಿ ಪಾಲ್ಗೊಂಡ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರಿಗೆ ಶಾಸಕರು ಅಭಿನಂದನೆ ಸಭೆಯಲ್ಲಿ ಸಲ್ಲಿಸಿದರು. ಬಿಜೆಪಿ ರಾಜ್ಯಾಧ್ಯಕ ನಳೀನ ಕುಮಾರ ಕಟೀಲ್​ ಸೇರಿದಂತೆ ಸಚಿವರುಗಳು, ಶಾಸಕರು ಸಭೆಯಲ್ಲಿ ಪಾಲ್ಗೊಂಡರು.

ಸಭೆಯಲ್ಲಿ ಶಾಸಕರು ಕ್ಷೇತ್ರಾನುದಾನ ನೀಡುವಂತೆ ಮುಖ್ಯಂತ್ರಿ ಬಸವರಾಜ ಬೊಮ್ಮಾಯಿ ಅವರ ಮುಂದೆ ಬೇಡಿಕೆ ಇಟ್ಟಿದ್ದಾರೆ. ಚುನಾವಣೆ ಹತ್ತಿರ ಬರುತ್ತಿದೆ, ಕ್ಷೇತ್ರಗಳ ಅಭಿವೃದ್ಧಿ ಚುರುಕುಗೊಳಿಸಬೇಕಿದೆ. ಹೀಗಾಗಿ ನಮ್ಮದೇ ಸರ್ಕಾರ ಆಡಳಿತದಲ್ಲಿದ್ದು, ಹೆಚ್ಚಿನ ಅನುದಾನವನ್ನು ನೀಡಿ ಎಂದು ಬೇಡಿಕೆ ಇಟ್ಟಿದ್ದಾರೆ ಎಂದು ಮೂಲಗಳಿಂದ ತಿಳಿದುಬಂದಿದೆ. 

ಶಾಸಕರು ಒಂದು ಕಡೆ, ಸರ್ಕಾರ ಒಂದು ಕಡೆ ಆಗಬಾರದು, ಎರಡೂ ಒಟ್ಟಿಗೆ ಒಂದೇ ದಿಕ್ಕಿನಲ್ಲಿ ಸಾಗಬೇಕು, ಕ್ಷೇತ್ರ ಅನುದಾನ ಬರಲೇಬೇಕು ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸಭೆಯಲ್ಲಿ ಹೇಳಿದ್ದರೆ, ವಿಧಾನ ಪರಿಷತ್ ಸದಸ್ಯ ಆರ್. ಶಂಕರ್ ಸಚಿವ ಸ್ಥಾನಕ್ಕೆ ಸಿಎಂ ಬಳಿ ಮನವಿ ಮಾಡಿದ್ದಾರೆ.

 ಅಧಿವೇಶನ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರತಿಪಕ್ಷಗಳು ಸರ್ಕಾರವನ್ನು ಇಕ್ಕಟ್ಟಿಗೆ ಸಿಲುಕಿಸುವ ಸಂದರ್ಭದಲ್ಲಿ ಶಾಸಕರು ಸರ್ಕಾರದ ಬೆನ್ನಿಗೆ ನಿಲ್ಲಬೇಕು, ಸರ್ಕಾರವನ್ನು ಸಮರ್ಥಿಸಿಕೊಳ್ಳಬೇಕು ಎಂದು ಸಿಎಂ ಬೊಮ್ಮಾಯಿ‌ ಶಾಸಕರಿಗೆ ಸೂಚಿಸಿದರು ಎನ್ನಲಾಗಿದೆ. 

SCROLL FOR NEXT