ಮಧು ಬಂಗಾರಪ್ಪ 
ರಾಜಕೀಯ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷರಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ನೇಮಕ

ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ (ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

ಬೆಂಗಳೂರು: ಕಾಂಗ್ರೆಸ್ ಹಿಂದುಳಿದ ವರ್ಗಗಳ ಘಟಕ (ಓಬಿಸಿ) ದ ಅಧ್ಯಕ್ಷರನ್ನಾಗಿ ಮಾಜಿ ಶಾಸಕ ಮಧು ಬಂಗಾರಪ್ಪ ಅವರನ್ನು ನೇಮಕ ಮಾಡಲಾಗಿದೆ.

ಎಐಸಿಸಿಯ ಒಬಿಸಿ ಘಟಕದ ಅಧ್ಯಕ್ಷ ಕ್ಯಾಫ್ಟನ್ ಅಜಯ್ ಸಿಂಗ್ ಯಾದವ್ ಅವರು ಈ ನೇಮಕದ ಆದೇಶ ಹೊರಡಿಸಿದ್ದಾರೆ. ಸೊರಬ ಕ್ಷೇತ್ರದ ಮಾಜಿ ಜೆಡಿಎಸ್ ಶಾಸಕರಾಗಿದ್ದ ಮಧು ಬಂಗಾರಪ್ಪ ಜೆಡಿಎಸ್ ತೊರೆದು ಕಳೆದ 2021 ಜುಲೈನಲ್ಲಿ  ಕಾಂಗ್ರೆಸ್ ಸೇರಿದ್ದರು

ಈ ಸಂಬಂಧ ಬುಧವಾರ ಕಾಂಗ್ರೆಸ್ ಹೈಕಮಾಂಡ್ ಅಧಿಕೃತ ಆದೇಶ ಹೊರಡಿಸಿದ್ದು, ತಕ್ಷಣದಿಂದಲೇ ಹಿಂದುಳಿದ ವರ್ಗಗಳ ಸಂಘಟನೆ ಬಲಪಡಿಸಲು ಮುಂದಾಗುವಂತೆ ಎಐಸಿಸಿ ಆದೇಶದಲ್ಲಿ ಸೂಚಿಸಲಾಗಿದೆ.

ಇಷ್ಟು ವರ್ಷಗಳ ಕಾಲ ಜೆಡಿಎಸ್ ನಲ್ಲಿ ಇದ್ದ ಮಧು ಬಂಗಾರಪ್ಪ ಕಳೆದ ಲೋಕಸಭಾ ಚುನಾವಣೆ ಬಳಿಕ ಕುಮಾರಸ್ವಾಮಿಯವರಿಂದ‌ ಅಂತರ ಕಾಯ್ದುಕೊಂಡಿದ್ದರು‌. ಆ ಬಳಿಕ ಡಿ.ಕೆ.ಶಿವಕುಮಾರ್ ಅವರನ್ನು ಕಾಂಗ್ರೆಸ್ ಗೆ ಕರೆ ತಂದಿದ್ದರು. ಆದರೆ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ದೊರೆತಿಲ್ಲ ಎಂದು ಮಧು ಬಂಗಾರಪ್ಪ ಬೇಸರಗೊಂಡಿದ್ದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Super Emergency: ತಾರಕಕ್ಕೇರಿದ ದೆಹಲಿ ಪ್ರತಿಭಟನೆ, ಬರೊಬ್ಬರಿ 3 ಸಾವಿರ ಮಂದಿ ವಶಕ್ಕೆ, ವಿಪಕ್ಷಗಳ ಆಕ್ರೋಶ!

'vote chori' ಹೇಗಿರತ್ತೆ ನಮ್ಗೆ ಗೊತ್ತು, ಸಿನಿಮಾದಲ್ಲಿ ತೋರಿಸಿದ್ದ ರಿಗ್ಗಿಂಗ್ ವಾತಾವರಣ ನಿಜವಾಗಿಯೂ ನೋಡಿದ್ದೇವೆ: SIR ಗೆ 124 ಮಾಜಿ ಅಧಿಕಾರಿಗಳು, ರಾಜತಾಂತ್ರಿಕರಿಂದ ಬೆಂಬಲ

ಹೃದಯವಿದ್ರಾವಕ: 'ಚಿಕಿತ್ಸೆಗೆ ಹಣವಿಲ್ಲ'.. 6 ವರ್ಷದ ಮಗಳನ್ನೇ ಕೆರೆಗೆ ಎಸೆದ ತಾಯಿ; ಆಟೋ ಚಾಲಕನಿಂದ ರಕ್ಷಣೆ

'ನಿಮಗೆ ನಾಚಿಕೆಯಾಗಬೇಕು': CJP ನಾಯಕರ ವಿರುದ್ಧ ವಿಮಾನದಲ್ಲಿ ಪ್ರಯಾಣಿಕರ ಆಕ್ರೋಶ, Video!

ಅಭಿಜೀತ್ ದೀಪ್ಕೆ ಸಂಪರ್ಕಿಸಲು ಸಾಧ್ಯವಾಗುತ್ತಿಲ್ಲ; ಅಜ್ಜಿ ಸಾವಿನ ಸುದ್ದಿ ತಿಳಿಸುವುದು ಹೇಗೆ? ಪೊಲೀಸ್ ಕ್ರಮಕ್ಕೆ ಪೋಷಕರ ಆಕ್ರೋಶ