ಎಚ್.ಡಿ.ಕುಮಾರಸ್ವಾಮಿ 
ರಾಜಕೀಯ

ವಿಮ್ಸ್ ಆಸ್ಪತ್ರೆಯಲ್ಲಿ ರೋಗಿಗಳ ಸಾವು: ಆರೋಗ್ಯ ಸಚಿವ ಸುಧಾಕರ್ ರಾಜಿನಾಮೆಗೆ ಎಚ್ ಡಿಕೆ ಆಗ್ರಹ

ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ...

ಕೋಲಾರ: ಬಳ್ಳಾರಿಯ ವಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ರೋಗಿಗಳ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಪೂರ್ಣ ನೈತಿಕ ಹೊಣೆಯನ್ನು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವರೇ ಹೊರಬೇಕು. ನೈತಿಕಹೊಣೆ ಹೊತ್ತು ಸಚಿವ ಸ್ಥಾನಕ್ಕೆ ಡಾ.ಕೆ.ಸುಧಾಕರ್ ರಾಜೀನಾಮೆ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಭಾನುವಾರ ಒತ್ತಾಯಿಸಿದ್ದಾರೆ.

ಇಂದು ಕೋಲಾರದಲ್ಲಿ ಜಾತ್ಯತೀತ ಜನತಾದಳ ಹಮ್ಮಿಕೊಂಡಿದ್ದ ಅಲ್ಪಸಂಖ್ಯಾತರ ಸಮಾವೇಶ ಹಾಗೂ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು.

ಇಬ್ಬರು ರೋಗಿಗಳ ಸಾವಿನ ಬಗ್ಗೆ ರಾಜ್ಯ ಸರ್ಕಾರ ವಾಸ್ತವಾಂಶಗಳನ್ನು ಸ್ಪಷ್ಟಪಡಿಸಿಲ್ಲ. ನೈತಿಕತೆ ಇದ್ದಿದ್ದರೆ ಆರೋಗ್ಯ ಸಚಿವರು ಬಳ್ಳಾರಿಯ ಆಸ್ಪತ್ರೆಗೆ ಮೊದಲು ಹೋಗಬೇಕಿತ್ತು. ಅವರು ಹೋಗಲಿಲ್ಲ, ಅವರು ಬೆಂಗಳೂರಿನಲ್ಲಿ ಇದ್ದುಕೊಂಡೇ ಮಾತನಾಡುತ್ತಿದ್ದರು. ಇನ್ನು; ನಮಗೆ ಕೆಟ್ಟ ಹೆಸರು ತರಬೇಕು ಎಂದು ಕೆಲವರು ಷಡ್ಯಂತ್ರ ನಡೆಸಿ ಹೀಗೆ ಮಾಡಿದ್ದಾರೆ ಎಂದು ಆಸ್ಪತ್ರೆಯ ನಿರ್ದೇಶಕರು ಹೇಳುತ್ತಿದ್ದಾರೆ. ಈಗ ತನಿಖಾ ತಂಡವನ್ನು ಕಳಿಸುತ್ತೇನೆ ಅಂತಿದ್ದಾರೆ ಸಚಿವರು. ಜನತೆಗೆ ಸತ್ಯ ಹೇಳಲು ಎಷ್ಟು ದಿನ ಬೇಕು? ಆರೋಗ್ಯ ಸಚಿವರೇ ಇದರ ನೈತಿಕಹೊಣೆ ಒಪ್ಪಿಕೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೇಳಿದ್ದಾರೆ.

ಆರೋಗ್ಯ ಕ್ಷೇತ್ರದಲ್ಲಿ ದೊಡ್ಡ ಸಾಧನೆ ಮಾಡಿದ್ದೇವೆ ಎಂದು ಆರೋಗ್ಯ ಸಚಿವರು ಪತ್ರಿಕೆಗಳಲ್ಲಿ ಅರ್ಧಪುಟ ಲೇಖನ ಬರೆಸಿಕೊಂಡಿದ್ದಾರೆ. ಇಲ್ಲಿ ನೋಡಿದರೆ ರಾಜ್ಯದ ಆರೋಗ್ಯ ಸ್ಥಿತಿ ಯಾವ ಮಟ್ಟಕ್ಕೆ ಹೋಗಿದೆ ಎನ್ನುವುದಕ್ಕೆ ಬಳ್ಳಾರಿಯ ವಿಮ್ಸ್ ಆಸ್ಪತ್ರೆಯ ಕರ್ಮಕಾಂಡವೇ ಸಾಕ್ಷಿ ಎಂದರು.

ಯಾವ ನಂಬಿಕೆ ಮೇಲೆ ಸರ್ಕಾರಿ ಆಸ್ಪತ್ರೆಗೆ ರೋಗಿಗಳು ಬರಬೇಕು? ಘಟನೆ ಸಂಭವಿಸಿ ಇಷ್ಟು ದಿನವಾದರೂ ಸತ್ಯಾಂಶ ಇಲ್ಲಿವರೆಗೂ ಹೊರಬಂದಿಲ್ಲ. ರಾಜ್ಯ ಸರ್ಕಾರ ಆಡಳಿತದ ವೈಖರಿಯೇ ಇದಕ್ಕೆ ಕಾರಣ. ಆರೋಗ್ಯ ಸಚಿವರು ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಅವರು ಒತ್ತಾಯ ಮಾಡಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Operation Sindoor; Kirana Hills ಪರಮಾಣು ನೆಲೆಗೆ ಅಪ್ಪಳಿಸಿದ ಭಾರತದ ಡ್ರೋನ್? ಬೆಚ್ಚಿಬಿದ್ದ ಪಾಕಿಸ್ತಾನ..! Indian Army ಹೇಳಿದ್ದೇನು?

ನೀಟ್ ಪ್ರತಿಭಟನಾಕಾರರ ಮೇಲೆ ಪೊಲೀಸ್ ದೌರ್ಜನ್ಯ ಆರೋಪ: ಚರ್ಚೆಗೆ ವಿಪಕ್ಷಗಳ ಪಟ್ಟು, ಸಂಸದೀಯ ಸಮಿತಿ ಸಭೆಯಲ್ಲಿ ತೀವ್ರ ವಾಗ್ವಾದ!

‘ಪ್ರಸಿದ್ಧ್ ಕೃಷ್ಣ ವಿಶ್ವದರ್ಜೆಯ ಬೌಲರ್ ಆಗಿ ಮಾರ್ಪಟ್ಟಿದ್ದಾರೆ’: ಕನ್ನಡಿಗನ ಶ್ಲಾಘಿಸಿದ ದಕ್ಷಿಣ ಆಫ್ರಿಕಾ ಮಾಜಿ ವೇಗಿ Morne Morkel

ಮಂಡ್ಯ ಜೈಲಿನ ಕರ್ಮಕಾಂಡ ಬಯಲು: ಆಸ್ಪತ್ರೆ​​ ವಾರ್ಡ್​​​ನಲ್ಲಿ ಮಹಿಳೆ​​ ಜೊತೆ ಸಿಕ್ಕಿಬಿದ್ದ ವಿಚಾರಣಾಧೀನ ಸರ್ಕಾರಿ ಅಧಿಕಾರಿ!

ಕೊಡಗಿನಲ್ಲಿ ಭಾರಿ ಮಳೆ: ಹಾರಂಗಿ ಜಲಾಶಯಕ್ಕೆ ಹೆಚ್ಚಿದ ಒಳಹರಿವು, ತಲಕಾವೇರಿಯಲ್ಲೂ ದಾಖಲೆಯ ವರ್ಷಧಾರೆ!